ಕಾರ್ಯಪಡೆ ಶಿಫಾರಸ್ಸು ಸಚಿವ ಸಂಪುಟದ ಮುಂದಿಡಲಾಗುವುದು: ಡಾ.ಅಶ್ವತ್ಥನಾರಾಯಣ
Team Udayavani, Nov 7, 2020, 8:51 PM IST
ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಿವೃತ್ತ ಐಎಎಸ್ ಅಧಿಕಾರಿ ಎಸ್.ವಿ.ರಂಗನಾಥ್ ಅವರ ನೇತೃತ್ವದ ಕಾರ್ಯಪಡೆ ನೀಡಿರುವ ಶಿಫಾರಸಿನ ವರದಿಯನ್ನು ಶೀಘ್ರವೇ ಮುಖ್ಯಮಂತ್ರಿಗಳ ಗಮನಕ್ಕೆ ತಂದು, ಸಚಿವ ಸಂಪುಟದ ಮುಂದಿಡಲಾಗುತ್ತದೆ ಎಂದು ಉಪಮುಖ್ಯಮಂತ್ರಿಯೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ವಿಧಾನಸೌಧದಲ್ಲಿ ಶನಿವಾರ ಕಾರ್ಯಪಡೆ ವರದಿ ಸ್ವೀಕರಿಸಿ ಮಾತನಾಡಿದ ಅವರು, ವಿವಿಧ ಇಲಾಖೆಗಳು, ಕಾರ್ಯಗಳು, ಸಂಸ್ಥೆಗಳು ಹಾಗೂ ಘಟಕಗಳ ನಡುವೆ ಸಮನ್ವಯತೆ ಸಾಧಿಸುವುದಕ್ಕಾಗಿ ಕರ್ನಾಟಕ ಶಿಕ್ಷಣ ಆಯೋಗ (ಕೆಎಸ್‌ಎ) ಸ್ಥಾಪಿಸಬೇಕು ಎಂಬ ಶಿಫಾರಸು ಮಾಡಿದ್ದಾರೆ. ಪ್ರಾಥಮಿಕ-ಪ್ರೌಢ ಹಾಗೂ ಉನ್ನತ ಶಿಕ್ಷಣ ಇವೆರಡೂ ಈ ಆಯೋಗದಡಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದಾರೆ. ಕಾರ್ಯಪಡೆ ವರದಿಯನ್ನು ಶೀಘ್ರವೇ ಮುಖ್ಯಮಂತ್ರಿಯವರ ಗಮನಕ್ಕೆ ತಂದು, ಸಚಿವ ಸಂಪುಟದ ಮುಂದಿಡಲಾಗುತ್ತದೆ ಎಂದು ಹೇಳಿದರು.
ಇದನ್ನೂ ಓದಿ:ನಭಕ್ಕೆ ಸೇರಿದ 10 ಉಪಗ್ರಹಗಳು: ಲಾಕ್‌ಡೌನ್ ಬಳಿಕ ಇಸ್ರೋದ ಮೊದಲ ಉಡಾವಣೆ ಯಶಸ್ವಿ
ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಸಂಬಂಧ ಕಾರ್ಯಪಡೆ ನೀಡಿರುವ ವರದಿಗೆ ಸಂಬಂಧಿಸಿದಂತೆ ಶಿಕ್ಷಣ ಪಾಲುದಾರರ(ಸ್ಟೇಕ್ ಹೋಲ್ಡರ್) ಅಭಿಪ್ರಾಯವನ್ನು ಪಡೆಯಲಿದ್ದೇವೆ. ದೇಶದಲ್ಲೇ ಕರ್ನಾಟಕ ಮೊದಲ ರಾಜ್ಯವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕಾರ್ಯಪಡೆ ರಚಿಸಿ, ಶಿಫಾರಸು ಪಡೆದು, ಅನುಷ್ಠಾನದತ್ತ ದಾಪುಗಾಲು ಇಟ್ಟಿದೆ. ಪಠ್ಯಕ್ರಮ, ಶಾಲಾ ಶಿಕ್ಷಣ, ಉನ್ನತ ಶಿಕ್ಷಣದ ಸಂರಚನೆಗೆ ಸಂಬಂಧಿಸಿದಂತೆ ಮೂರು ಉಪಸಮಿತಿ ರಚನೆ ಮಾಡಿ, ಆ ಉಪಸಮಿತಿಗಳು ನೀಡಿರುವ ಅಂಶಗಳ ಆಧಾರದಲ್ಲಿ ಸಮಗ್ರ ವರದಿಯನ್ನು ಕಾರ್ಯಪಡೆ ಸಿದ್ಧಪಡಿಸಿದೆ. ಶಿಕ್ಷಣದಲ್ಲಿ ಸುಧಾರಣೆ, ಕಾರ್ಯಕ್ರಮ ಅನುಷ್ಠಾನ ಸೇರಿದಂತೆ ಶಿಕ್ಷಣ ವ್ಯವಸ್ಥೆಯ ಆಮೂಲಾಗ್ರ ಬದಲಾವಣೆಗೆ ಪೂರಕವಾಗುವಂತೆ ರಾಷ್ಟ್ರಿಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಈ ವರದಿ ಹೆಚ್ಚಿನ ಅನುಕೂಲವಾಗಲಿದೆ ಎಂದರು.
2021-22ನೇ ಶೈಕ್ಷಣಿಕ ವರ್ಷದಿಂದ ಇದನ್ನು ಹಂತ ಹಂತವಾಗಿ ಅಳವಡಿಸಲಾಗುತ್ತದೆ. ಅದಕ್ಕೆ ಮುನ್ನ ಎಲ್ಲ ಶೈಕ್ಷಣಿಕ ಪಾಲುದಾರರೊಂದಿಗೆ ವರದಿ ಕುರಿತು ಸಮಾಲೋಚನೆ ನಡೆಸಲಾಗುತ್ತದೆ. ನೀತಿಯನ್ನು ಪೂರ್ತಿಯಾಗಿ ಅಳವಡಿಸಲು 15 ವರ್ಷಗಳ ಕಾಲಾವಕಾಶವಿದೆ. ಆದರೆ ಕರ್ನಾಟಕ ಸರ್ಕಾರವು 10 ವರ್ಷಗಳೊಳಗೆ ನೀತಿಯ ಅನುಷ್ಠಾನ ಹಾಗೂ ಅಳವಡಿಕೆ ಪ್ರಕ್ರಿಯೆಯನ್ನು ಮುಗಿಸುವ ಗುರಿ ಹೊಂದಿದೆ ಎಂದು ಹೇಳಿದರು.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ, ಕಾರ್ಯಪಡೆ ಸದಸ್ಯ ಎಂ.ಕೆ.ಶ್ರೀಧರ್, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯ್ಕ, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.