LokSabha Result: ದೇವರನಾಡು ಕೇರಳದಲ್ಲಿ ಖಾತೆ ತೆರೆದ ಬಿಜೆಪಿ, ಅಣ್ಣಾಮಲೈ ಕೈತಪ್ಪಿದ ಗೆಲುವು
ಉತ್ತರಪ್ರದೇಶದ ಅಮೇಠಿಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ಹಿನ್ನಡೆ
Team Udayavani, Jun 4, 2024, 1:21 PM IST
ಚೆನ್ನೈ/ಉತ್ತರಪ್ರದೇಶ: ಲೋಕಸಭಾ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಕೇರಳದ ತ್ರಿಶ್ಶೂರ್ ನಲ್ಲಿ ಭಾರತೀಯ ಜನತಾ ಪಕ್ಷದ ಸುರೇಶ್ ಗೋಪಿ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿಗೆ ಕೇರಳದಲ್ಲಿ ಬಿಜೆಪಿ ಖಾತೆ ತೆರೆದಂತಾಗಿದೆ.
ಇದನ್ನೂ ಓದಿ:Result; ಪ್ರಜ್ವಲ್ ರೇವಣ್ಣಗೆ ಸೋಲು ;ಶೆಟ್ಟರ್, ಎಚ್ ಡಿಕೆ, ಕಾಗೇರಿ , ಮಲ್ಲೇಶ್ ಬಾಬು ಜಯ
ಮತ್ತೊಂದೆಡೆ ತಮಿಳುನಾಡಿನ ಕೊಯಮತ್ತೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಪರಾಜಯಗೊಂಡಿದ್ದಾರೆ. ಡಿಎಂಕೆಯ ಗಣಪತಿ ರಾಜ್ ಕುಮಾರ್ ಅವರು ಬಿಜೆಪಿಯ ಅಣ್ಣಾಮಲೈ ಅವರನ್ನು 17,366 ಮತಗಳಿಂದ ಸೋಲಿಸಿದ್ದಾರೆ.
ಕೇರಳದ ತ್ರಿಶ್ಶೂರ್ ಲೋಕಸಭಾ ಕ್ಷೇತ್ರದಲ್ಲಿ ನಟ, ರಾಜಕಾರಣಿ, ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಗೆಲುವಿನ ನಗು ಬೀರಿದ್ದು, ಸಮೀಪದ ಪ್ರತಿಸ್ಪರ್ಧಿ ಸಿಪಿಐನ ವಿಎಸ್ ಸುನೀಲ್ ಕುಮಾರ್ ಸೋಲುಂಡಿದ್ದಾರೆ.
ತಿರುವನಂತಪುರಂನಲ್ಲಿ ಬಿಜೆಪಿಯ ರಾಜೀವ್ ಚಂದ್ರಶೇಖರ್ ಅವರು 23,000 ಸಾವಿರ ಮತಗಳ ಅಂತರ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ನ ಶಶಿ ತರೂರ್ ಹಿನ್ನಡೆ ಅನುಭವಿಸಿದ್ದಾರೆ.
ಉತ್ತರಪ್ರದೇಶದ ಅಮೇಠಿಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ಹಿನ್ನಡೆ ಅನುಭವಿಸಿದ್ದು, ಗಾಂಧಿ ಕುಟುಂಬದ ನಿಷ್ಠ, ಕೈ ಅಭ್ಯರ್ಥಿ ಕೆಎಲ್ ಶರ್ಮಾ 77,000 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.