ಮೀನುಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕೆ ಪ್ರಯತ್ನ : ಸಚಿವ ಎಸ್‌. ಅಂಗಾರ ಭರವಸೆ

Team Udayavani, Feb 10, 2021, 5:30 AM IST

ಮೀನುಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕೆ ಪ್ರಯತ್ನ : ಸಚಿವ ಎಸ್‌. ಅಂಗಾರ ಭರವಸೆ

ಮಲ್ಪೆ: ಮೀನುಗಾರಿಕೆ ಬಂದರು ಮತ್ತು ಮೀನುಗಾರರ ಸಮಸ್ಯೆಗಳೇನು ಎಂಬ ಬಗ್ಗೆ ಸಮಗ್ರ ವಾಗಿ ಅಧ್ಯಯನ ನಡೆಸುವುದಲ್ಲದೆ ಇಲಾಖೆಯ ಅಧಿಕಾರಿಗಳು, ಮೀನುಗಾರ ಮುಖಂಡರ ಜತೆ ಚರ್ಚಿಸಿ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಮೀನುಗಾರಿಕೆ ಹಾಗೂ ಬಂದರು ಸಚಿವ ಎಸ್‌. ಅಂಗಾರ ಭರವಸೆ ನೀಡಿದರು.
ಅವರು ಮಂಗಳವಾರ ಮಲ್ಪೆ ಮೀನುಗಾರಿಕೆ ಬಂದರು, ಸ್ಲಿಪ್‌ವೇ ಮತ್ತು ಟೆಬ್ಮಾ ಶಿಪ್‌ ಯಾರ್ಡ್‌ ಸ್ಥಳವನ್ನು ವೀಕ್ಷಿಸಿ ಬಳಿಕ ಮೀನುಗಾರರ ಮುಖಂಡ ರೊಂದಿಗೆ ಸಮಾಲೋಚನೆ ನಡೆಸಿದರು.

ಬೇಡಿಕೆ ಈಡೇರಿಕೆಗೆ ಮನವಿ
ಮಲ್ಪೆ ಆಳಸಮುದ್ರ ಮೀನುಗಾರರ ಸಂಘದ ಅಧ್ಯಕ್ಷ ಕಿಶೋರ್‌ ಡಿ. ಸುವರ್ಣ ಮಾತನಾಡಿ, ಹೊರ ರಾಜ್ಯದಲ್ಲಿ ಮೀನುಗಾರಿಕೆ ನಡೆಸುವಾಗ ಅಲ್ಲಿನ ಮೀನುಗಾರರಿಂದ ಅಗುವ ಸಮಸ್ಯೆಗಳಿಗೆ ಪರಿಹಾರವನ್ನು ಕಲ್ಪಿಸಬೇಕು, ಮೀನುಗಾರಿಕೆ ಬೋಟ್‌ಗಳಿಗೆ ನೀಡಲಾಗುತ್ತಿರುವ ಡೀಸೆಲ್‌ ಪ್ರಮಾಣವನ್ನು 300 ಲೀ.ನಿಂದ 500 ಲೀ.ಗೆ ಹೆಚ್ಚಿಸಿ ತಿಂಗಳವಾರು ಬದಲು ವಾರ್ಷಿಕ ಕೋಟದಲ್ಲಿ ನೀಡಬೇಕು, ಡೀಸೆಲ್‌ ಸಹಾಯಧನ ಈ ಹಿಂದಿನಂತೆ ಡೆಲಿವರಿ ಪಾಯಿಂಟ್‌ನಲ್ಲಿ ಸಿಗ‌ಬೇಕು ಎಂದು ಮನವಿ ಮಾಡಿದರು.
ಮೀನು ಮಾರಾಟ ಫೇಡರೇಶನ್‌ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ ಅವರು 3ನೇ ಹಂತದ ಬಂದರಿನಲ್ಲಿ ನಿರ್ಮಿಸಿದ ಸ್ಲಿಪ್‌ವೇ ನಿರ್ವಹಣೆಯನ್ನು ಮೀನುಗಾರರ ಸಂಘಕ್ಕೆ ನೀಡಬೇಕು ಮತ್ತು ಟೆಬಾ¾ ಶಿಪ್‌ಯಾರ್ಡ್‌ ಅವಧಿ ಮುಗಿದ ಬಳಿಕ ಆ ಜಾಗವನ್ನು ಕರಾರಿನಂತೆ ಮೀನುಗಾರಿಕೆ ಬಂದರಿನ ಅಭಿವೃದ್ಧಿಗೆ ಮಾತ್ರ ನೀಡಬೇಕೆಂದು ಮನವಿ ಮಾಡಿದರು.

ಸಮ್ಮಾನ
ಮಲ್ಪೆ ಮೀನುಗಾರ ಸಂಘ ಮತ್ತು ಮೀನು ಮಾರಾಟ ಫೆಡರೇಶನಿನ ವತಿಯಿಂದ ಸಚಿವರನ್ನು ಸಮ್ಮಾನಿಸಲಾಯಿತು.
ಮೀನುಗಾರರ ಸಂಘದ ಉಪಾಧ್ಯಕ್ಷರಾದ ರಮೇಶ್‌ ಕೋಟ್ಯಾನ್‌, ವಿಟuಲ ಕರ್ಕೇರ, ನಾಗರಾಜ್‌ ಬಿ. ಕುಂದರ್‌, ಪ್ರಧಾನ ಕಾರ್ಯದರ್ಶಿ ಸುಭಾಸ್‌ ಮೆಂಡನ್‌, ಕೋಶಾಧಿಕಾರಿ ಶಿವಾನಂದ, ಮೀನುಗಾರ ಮುಖಂಡರಾದ ಸತೀಶ್‌ ಕುಂದರ್‌, ರಾಮಚಂದ್ರ ಕುಂದರ್‌, ಸಾಧು ಸಾಲ್ಯಾನ್‌, ಗೋಪಾಲ ಆರ್‌.ಕೆ., ನಾರಾಯಣ ಕರ್ಕೇರ, ಮೀನುಗಾರಿಕೆ ಇಲಾಖೆ ಜಂಟಿ ನಿರ್ದೇಶಕ ತಿಪ್ಪೇಸ್ವಾಮಿ, ಎಂಜಿನಿಯರ್‌ ಮಂಜೇಗೌಡ, ಉಪ ನಿರ್ದೇಶಕ ಗಣೇಶ್‌ ಕೆ., ಹಿರಿಯ ಸಹಾಯಕ ನಿರ್ದೇಶಕ ಶಿವಕುಮಾರ್‌ಉಪಸ್ಥಿತರಿದ್ದರು.

ಶೀಘ್ರ ಜಾರಿಗೆ ಪ್ರಯತ್ನ
ಫೆ. 10ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು ಹಾಗೂ ಮೀನುಗಾರಿಕೆ ಇಲಾಖೆಗೆ ಮತ್ತು ಬಜೆಟ್‌ಗೆ ಸಂಬಂಧಪಟ್ಟ ಸಭೆ ಇದೆ. ಆ ಸಭೆಯಲ್ಲಿ ಡೀಸೆಲ್‌ ಸಬ್ಸಿಡಿಯನ್ನು ಈ ಹಿಂದಿನಂತೆ ಡೆಲಿವರಿ ಪಾಯಿಂಟ್‌ನಲ್ಲಿ ದೊರೆಯುವಂತೆ ಮತ್ತು ಸ್ಲಿಪ್‌ವೇ ನಿರ್ವಹಣೆಯನ್ನು ಮೀನುಗಾರ ಸಂಘಕ್ಕೆ ನೀಡುವ ಇನ್ನಿತರ ವಿಷಯಗಳನ್ನು ಅವರ ಗಮನಕ್ಕೆ ತಂದು ಇವೆರಡನ್ನು ಅದಷ್ಟು ಶೀಘ್ರದಲ್ಲಿ ಜಾರಿಗೊಳಿಸುವಂತೆ ಪ್ರಯತ್ನ ಮಾಡಲಾಗುವುದು ಎಂದು ಸಚಿವ ಎಸ್‌. ಅಂಗಾರ ಅವರು ತಿಳಿಸಿದರು.

ಟಾಪ್ ನ್ಯೂಸ್

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

6

ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.