ವಿಷಮಶೀತ ಜ್ವರ ಹೆಚ್ಚಾಗುತ್ತಿರುವ 13 ಜಿಲ್ಲೆಯಲ್ಲಿ ನಿಯಂತ್ರಣಕ್ಕೆ ಸೂಚನೆ
Team Udayavani, Apr 7, 2021, 10:20 PM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ನಿರೀಕ್ಷೆ ಮೀರಿ ಹರಡುತ್ತಿದೆ. ವಿಷಮಶೀತ ಜ್ವರ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ 13 ಜಿಲ್ಲೆಗಳ ಜಿಲ್ಲಾಡಳಿತಗಳಿಗೆ ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಸಚಿವ ಡಾ.ಕೆ. ಸುಧಾಕರ್ ಹೇಳಿದರು.
ವಿಕಾಸಸೌಧದಲ್ಲಿ ಬುಧವಾರ 13 ಜಿಲ್ಲೆಗಳ ಜಿಲ್ಲಾಡಳಿತಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಷಮಶೀತ ಜ್ವರ (ಐಎಲ್‌ಐ) ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ 13 ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆ ತಡೆಗೆ ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಲಾಗಿದೆ. ಹಾಗೆಯೇ ಕೇಂದ್ರ ಆರೋಗ್ಯ ಸಚಿವರು ನೀಡಿರುವ ಸಲಹೆಗಳ ಬಗ್ಗೆಯೂ ಜಿಲ್ಲಾಡಳಿತಗಳಿಗೆ ತಿಳಿಸಲಾಗಿದೆ ಎಂದು ಹೇಳಿದರು.
ಕೋವಿಡ್ ಎರಡನೇ ಅಲೆ ನಮ್ಮ ನಿರೀಕ್ಷೆ ಮೀರಿ ಹರಡುತ್ತಿದ್ದು, ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಆಸ್ಪತ್ರೆಗಳಲ್ಲಿಲ್ಲಿ ಹಾಸಿಗೆ ವ್ಯವಸ್ಥೆಯ ಕೊರತೆಯಾಗಲಿದೆ. ಹರಡುವಿಕೆ ಪ್ರಮಾಣದ ವೇಗ ಆಧರಿಸಿ ಐಸಿಯು ಹಾಸಿಗೆಗಳ ಅಗತ್ಯದ ಬಗ್ಗೆಯೂ ಅಂದಾಜು ಮಾಡಿ, ವ್ಯವಸ್ಥೆ ಕಲ್ಪಿಸಲು ಪ್ರಯತ್ನ ನಡೆದಿದೆ. ಎಲ್ಲರೂ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಜನ ಸ್ವಯಂ ನಿರ್ಬಂಧ ಹಾಕಿಕೊಳ್ಳಬೇಕು ಎಂದು ಮನವಿ ಮಾಡಿದರು.
ಇದನ್ನೂ ಓದಿ : ಸುಬ್ರಹ್ಮಣ್ಯ : ಕೆದಿಲ ಬಳಿ ಕಾಡಾನೆಗಳ ಹಿಂಡು ಪ್ರತ್ಯಕ್ಷ : ಆತಂಕದಲ್ಲಿ ಸ್ಥಳೀಯರು
ಲಸಿಕೆ ಹಾಕುವ ಕಾರ್ಯವನ್ನು ಇನ್ನಷ್ಟು ವ್ಯಾಪಕವಾಗಿ ಕೈಗೊಳ್ಳಲು ಸೂಚಿಸಲಾಗಿದೆ. ಈವರೆಗೆ 50 ಲಕ್ಷಕ್ಕೂ ಹೆಚ್ಚು ಮಂದಿಗೆ ಲಸಿಕೆ ಡೋಸ್ ಹಾಕಲಾಗಿದ್ದು, ಶೀಘ್ರವಾಗಿ ಒಂದು ಕೋಟಿ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಉದ್ಯೋಗಸ್ಥರಿಗೆ ಅವರ ಸ್ಥಳಗಳಲ್ಲೇ ಲಸಿಕೆ ನೀಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಅದರಂತೆ 45 ವರ್ಷ ಮೀರಿದ 100ಕ್ಕಿಂತ ಹೆಚ್ಚು ಉದ್ಯೋಗಿಗಳಿರುವ ಕಡೆ ಇಲಾಖೆಯಿಂದಲೇ ಲಸಿಕೆ ಹಾಕಲು ನಿರ್ಧರಿಸಲಾಗಿದ್ದು, ಗುರುವಾರದಿಂದಲೇ ನಿರ್ದಿಷ್ಟ ಸಂಖ್ಯೆ ಉದ್ಯೋಗಿಗಳಿರುವ ಕಡೆ ಇಲಾಖೆಯೇ ತೆರಳಿ ಲಸಿಕೆ ನೀಡಲಿದೆ ಎಂದು ಹೇಳಿದರು.
ಆತಂಕ ಮೂಡಿಸಿದೆ!
ರಾಜ್ಯಾದ್ಯಂತ ಬುಧವಾರ 6970 ಪ್ರಕರಣಗಳು ವರದಿಯಾಗಿದ್ದು, ಬೆಂಗಳೂರಿನಲ್ಲಿ ಪ್ರಕರಣ ಹೆಚ್ಚಾಗುತ್ತಿರುವ ಬಗ್ಗೆ ಆತಂಕ ಇದ್ದೇ ಇದೆ. ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ ಜಿಲ್ಲಾಡಳಿತಗಳೊಂದಿಗೆ ಗುರುವಾರ ಸಭೆ ನಡೆಸಲಾಗುವುದು. ಹಾಗೆಯೇ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೂ ಗುರುವಾರ ಸಭೆಯಿದ್ದು, ಕೋವಿಡ್ ಚಿಕಿತ್ಸೆಗೆ ಬೆಡ್‌ಗಳನ್ನು ಕಾಯ್ದಿರಿಸುವ ಸಂಬಂಧ ಚರ್ಚಿಸಲಾಗುವುದು. ಸಂಜೆ 6.30ಕ್ಕೆ ಪ್ರಧಾನಿಯವರೊಂದಿಗೆ ಮುಖ್ಯಮಂತ್ರಿಗಳ ವಿಡಿಯೋ ಸಂವಾದವಿದೆ ಎಂದು ತಿಳಿಸಿದರು.
ಇದನ್ನೂ ಓದಿ:ಚಾ.ನಗರ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರನ್ನು ಬದಲಿಸುವಂತೆ ವಕೀಲರ ಸಂಘ ಆಗ್ರಹ
ಭವಿಷ್ಯ ಹೇಗೆ ಹೇಳಲಿ!
ಲಾಕ್‌ಡೌನ್ ಜಾರಿ ಅಗತ್ಯವೇ ಎಂಬ ಪ್ರಶ್ನೆಗೆ ಸಚಿವ ಡಾ.ಕೆ. ಸುಧಾಕರ್ ನೀಡಿದ ಉತ್ತರ ಅಚ್ಚರಿ ಮೂಡಿಸುವಂತಿತ್ತು. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, “ನೋಡೋಣ. ನಾನು ಭವಿಷ್ಯ ಹೇಗೆ ಹೇಳಲಿ’ ಎಂದಷ್ಟೇ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.