ಆರಗ ಜ್ಞಾನೇಂದ್ರ ರಾಜೀನಾಮೆ ನೀಡಲೇಬೇಕು: ಬಿ.ಕೆ. ಹರಿಪ್ರಸಾದ್ ಒತ್ತಾಯ
ಅಕ್ಷರಶಃ ಸಾರ್ವಜನಿಕ ಜೀವನದಲ್ಲಿ ಇರಲು ಯೋಗ್ಯರಲ್ಲ
Team Udayavani, Apr 6, 2022, 6:08 PM IST
ಬೆಂಗಳೂರು: ಜವಾಬ್ದಾರಿ ಸ್ಥಾನದಲ್ಲಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬೇಜವಾಬ್ದಾರಿ ಹೇಳಿಕೆ ನೀಡಿ ಘಟನೆಗೆ ಕೋಮು ಬಣ್ಣ ಬಳಿದಿದ್ದು, ತಮ್ಮ ಸ್ಥಾನದ ಜ್ಞಾನವೇ ಇಲ್ಲದ ಅವರು ಈ ಕೂಡಲೇ ರಾಜೀನಾಮೆ ನೀಡಬೇಕೆಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಒತ್ತಾಯಿಸಿದ್ದಾರೆ.
ಜೆಜೆ ನಗರದಲ್ಲಿ ಪರಸ್ಪರ ಬೈಕ್ ಸವಾರರ ನಡುವೆ ವಾಗ್ವಾದ ನಡೆದು ಚಂದ್ರು ಎಂಬ ಯುವಕ ಕೊಲೆಯಾಗಿದ್ದು, ಘಟನೆಯ ಬಗ್ಗೆ ಸತ್ಯಾಸತ್ಯತೆಯನ್ನ ಪೊಲೀಸ್ ಕಮಿಷನರ್ ಕಮಲ್ ಪಂತ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ತಪ್ಪಿತಸ್ಥರನ್ನ ಬಂಧಿಸಲಾಗಿದೆ ಎಂದು ಹೇಳಿಯಾಗಿದೆ.ಘಟನೆ ನಡೆದು ಕೆಲವೇ ಕ್ಷಣಗಳಲ್ಲಿ ಹೇಳಿಕೆ ನೀಡಿರುವ ಗೃಹ ಸಚಿವರು “ಚಂದ್ರು ಎಂಬ ದಲಿತ ಹುಡುಗನನ್ನ ಗುಂಪೊಂದು ಅಡ್ಡಗಟ್ಟಿ ಉರ್ದು ಮಾತಾಡುವಂತೆ ಒತ್ತಾಯಿಸಿದೆ, ಆತನಿಗೆ ಉರ್ದು ಬರುತ್ತಿರಲಿಲ್ಲ ಹೀಗಾಗಿ ಚುಚ್ಚಿ ಚುಚ್ಚಿ ಕೊಲೆ ಮಾಡಲಾಗಿದೆ ಎಂದು ಸ್ವತಃ ಗೃಹ ಸಚಿವ ಯಾವ ಪೊಲೀಸ್ ತನಿಖೆಯೂ ನಡೆಯದೇ ಸ್ವಯಂ ಘೋಷಿತ ತೀರ್ಪು ನೀಡಿ ಕೋಮು ಬಣ್ಣ ಕಟ್ಟಿ ಮತೀಯ ಭಾವನೆ ಕೆರಳಿಸುವಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಬಿ.ಕೆ. ಹರಿಪ್ರಸಾದ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಯಾವುದೇ ಕೊಲೆಯನ್ನ ಸಮರ್ಥನೆ ಮಾಡಲು ಸಾಧ್ಯವೇ ಇಲ್ಲ. ಆದರೆ ಸಚಿವರು ಕೊಲೆಯನ್ನ ವೈಭವೀಕರಿಸಿ, ಕೊಲೆ ನಡೆಯುವಾಗ ತಾವೇ ಕಣ್ಣಾರೆ ಕಂಡಂತೆ ಹೇಳಿಕೆ ನೀಡುವುದು ಅಕ್ಷರಶಃ ಸಾರ್ವಜನಿಕ ಜೀವನದಲ್ಲಿ ಇರಲು ಯೋಗ್ಯರಲ್ಲ. ತಮ್ಮ ಹೇಳಿಕೆಯಿಂದ ಯೂಟರ್ನ್ ತೆಗೆದುಕೊಂಡು” ನನಗೆ ಪೊಲೀಸ್ ಇಲಾಖೆಗಿಂತಲೂ ಮೊಲದೇ ಬಲ್ಲ ಮೂಲಗಳಿಂದ ಮಾಹಿತಿ ಬಂದಿತ್ತು. ಹಾಗಾಗಿ ಹೇಳಿಕೆ ನೀಡಿದೆ ” ಎಂದಿದ್ದಾರೆ. ಹಾಗಾದ್ರೆ ಆ ಬಲ್ಲ ಮೂಲ ಯಾವುದು ಗೃಹ ಸಚಿವರೇ? ಕೇಶವ ಕೃಪವೋ? ನಾಗಪುರವೋ? ಮೊದಲು ಸ್ಪಷ್ಟಪಡಿಸಿ. ನಿಮ್ಮ ಸುಳ್ಳಿನ ಫ್ಯಾಕ್ಟರಿಯ ಬತ್ತಳಿಕೆಗಳ ಮೂಲ ರಾಜ್ಯದ ಜನರಿಗೂ ತಿಳಿಯಲಿ ಎಂದಿದ್ದಾರೆ.
ಅಮಾಯಕ ಯುವಕರ ಹೆಣದ ಮೇಲೆ ರಾಜಕೀಯ ಮಾಡಿ ಅಧಿಕಾರ ನಡೆಸುತ್ತಿರುವುದರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ. ಕೊಂದವರ‍್ಯಾರು ಎನ್ನುವುದರ ಮೇಲೆ ಕೊಲೆಯ ಕ್ರೌರ್ಯ ನಿರ್ಣಯಿಸುತ್ತಿದ್ದೀರಿ, ಜಾತಿಯ ಆಧಾರದಲ್ಲಿ ಕೊಲೆಯನ್ನ ವೈಭವೀಕರಿಸುತ್ತಿದ್ದೀರಿ. ಕೊಲೆಯಾದ ಯುವಕ ದಲಿತ ಎಂದು ಪದೇ ಪದೇ ಹೇಳಿದ್ದೀರಿ ಇದರ ಹಿಡನ್ ಅಜೆಂಡಾವನ್ನ ರಾಜ್ಯದ ಜನ ಅರ್ಥ ಮಾಡಿಕೊಳ್ಳದಷ್ಟು ದಡ್ಡರಲ್ಲ. ನಿಮಗೆ ಕಣ್ಣಿನ ದೋಷದ ಸಮಸ್ಯೆ ಇಲ್ಲ, ಕಣ್ಣೇ ಸಮಸ್ಯೆ ಇದೆ. ಗೃಹ ಸಚಿವ ಸ್ಥಾನಕ್ಕೆ ನೀವೊಂದು ಅಪಚಾರ. ಈ ಕೂಡಲೇ ನಿಮ್ಮ ಸ್ಥಾನದ ಘನತೆಗೆ ಗೌರವ ನೀಡುವುದಾದರೇ ರಾಜೀನಾಮೆ ನೀಡಿ ಕುರ್ಚಿ ಖಾಲಿ ಮಾಡಿ ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.