BPL ಚೀಟಿ ಹೊಂದಿದವರಿಗೆ ಮಾಸಿಕ 3 ಸಾವಿರ ರೂ. ಆರ್ಥಿಕ ನೆರವು ನೀಡಿ : ಸಂಸದ ಬಚ್ಚೇಗೌಡ ಆಗ್ರಹ

Team Udayavani, May 13, 2021, 7:29 PM IST

BPL ಚೀಟಿ ಹೊಂದಿದವರಿಗೆ ಮಾಸಿಕ 3 ಸಾವಿರ ರೂ. ಆರ್ಥಿಕ ನೆರವು ನೀಡಿ : ಸಂಸದ ಬಚ್ಚೇಗೌಡ ಆಗ್ರಹ

ಚಿಕ್ಕಬಳ್ಳಾಪುರ  : ದಕ್ಷಿಣ ಭಾರತದ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ ಬಿ.ಪಿ.ಎಲ್ ಕಾರ್ಡ್ ಹೊಂದಿರುವ ರಾಜ್ಯದ 1.5 ಕೋಟಿ ಜನರಿಗೆ ಜನತಾ ಕಫ್ರ್ಯೂ ಇರುವ ಈ ಅವಧಿಯನ್ನು ಒಳಗೊಂಡಂತೆ ಮುಂದಿನ 3 ತಿಂಗಳಿಗೆ ಪ್ರತಿ ತಿಂಗಳು ಕನಿಷ್ಠ 3000 ಸಾವಿರ ಹಣವನ್ನ ಜೀವನೋಪಾಯಕ್ಕೆ ನೀಡಲು ಕ್ರಮವಹಿಬೇಕೆಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಬಿ.ಎನ್.ಬಚ್ಚೇಗೌಡ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣದ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಕೋವಿಡ್ ಪಿಡುಗಿನ ಮೂರನೇ ಅಲೆ ಬಂದೆ ಬರುತ್ತೆ ಎಂದು ಈಗಾಗಲೆ ಆರೋಗ್ಯ ಕ್ಷೇತ್ರದ ತಜ್ಞರು ಹೇಳಿದ್ದಾರೆ ಆದ್ದರಿಂದ ಮೂರನೇ ಅಲೆಯನ್ನು ಸಮರ್ಪಕವಾಗಿ ಎದುರಿಸಲೂ ಸರ್ಕಾರ ಈಗಿನಿಂದಲೇ ಸಕಲ ಸಿದ್ದತೆಯನ್ನ ಮಾಡಿಕೋಳ್ಳಬೇಕು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ತಂಡದ ಪ್ರತಿಯೊಬ್ಬ ಮಂತ್ರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಕೋವಿಡ್ ನಿಯಂತ್ರಣ ಸಂಬಂಧ ರಚಿಸಿರುವ ರಾಜ್ಯಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯಲ್ಲಿರುವ ಎಲ್ಲರೂ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ ಕೋವಿಡ್ ಪಿಡುಗನ್ನು ತೊಲಗಿಸಬೇಕು ಎಂದರು.

ಲಸಿಕೆ ಸವಾಲಾಗಿ ಸ್ವೀಕರಿಸಿ: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ ಹಾಗಾಗಿ ಮುಂದಿನ ದಿನಗಳಲ್ಲಿ 3ನೇ ಅಲೆ ಹರಡುವ ಅಪಾಯ ಇರುವ ಕಾರಣ ಪ್ರತಿಯೊಬ್ಬರು ಲಸಿಕೆಯನ್ನು ಪಡೆದುಕೊಳ್ಳಲು ಆಸಕ್ತಿವಹಿಸಿದ್ದಾರೆ ಇದರಿಂದ ಸದ್ಯದ ಪರಿಸ್ಥಿತಿಯಲ್ಲಿ ದಾಸ್ತಾನು ಇರುವ ಲಸಿಕೆಯನ್ನು 45 ವರ್ಷ ಮೇಲ್ಪಟ್ಟವರಿಗೆ 2ನೇ ಡೋಸ್ ಲಸಿಕೆಯನ್ನು ನೀಡಿ ಬಳಿಕ 18 ವರ್ಷ ನಂತರದ ಜನರಿಗೆ ನೀಡಲು ಕ್ರಮ ಕೈಗೊಳ್ಳಲಾಗಿದೆ ರಾಜ್ಯ ಸರ್ಕಾರ ಕೋವಿಡ್ ಲಸಿಕೆಯನ್ನು ಪೂರೈಕೆ ಮಾಡಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಅದನ್ನು ಬಂದ ತಕ್ಷಣ ಪೂರೈಕೆ ಮಾಡುವ ಕೆಲಸವನ್ನು ಮಾಡುತ್ತಾರೆ ನಾಗರಿಕರು ಸಹಕಾರ ನೀಡಬೇಕೆಂದು ಮನವಿ ಮಾಡಿದ ಸಂಸದರು ಈ ನಿಟ್ಟಿನಲ್ಲಿ ಸರ್ಕಾರವೂ ಸಹ ನಾಗರಿಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮನ್ವಯದಿಂದ ಕೆಲಸವನ್ನು ಮಾಡಬೇಕು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕೊರೊನಾ ಸೋಂಕನ್ನು ಸವಾಲಾಗಿ ಸ್ವೀಕರಿಸಿ ಕೆಲಸ ಮಾಡಬೇಕೆಂದರು.

ದೇಶದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ: ಕೊರೊನಾ ಸೋಂಕಿನ ಪ್ರಭಾವದಿಂದ ದೇಶದ ಆರ್ಥಿಕ ಪರಿಸ್ಥಿತಿ ಸಹ ಉತ್ತಮವಾಗಿಲ್ಲ ಬಡವರ ಜೀವನ ಕಷ್ಟವಿದೆ ಉದ್ಯೋಗವಿಲ್ಲ ಕೈಗಾರಿಕೆಗಳು ನಿರುದ್ಯೋಗಿಗಳಿಗೆ ಉದ್ಯೋಗ ನೀಡಲು ಸಾಧ್ಯವಾಗುತ್ತಿಲ್ಲ ಎಂದ ಸಂಸದರು ಕೊರೊನಾ ಸೋಂಕು ಹೆಚ್ಚಳದಲ್ಲಿ ಕರ್ನಾಟಕ ದೇಶದಲ್ಲಿ ಪ್ರಥಮ ಸ್ಥಾನದಲ್ಲಿದೆ 20 ಲಕ್ಷ ಸೋಂಕಿತರಿದ್ದಾರೆ ಈಗಾಗಲೇ 20 ಸಾವಿರ ಜನ ಮೃತಪಟ್ಟಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿ ದಿನೇ ದಿನೇ ಸೋಂಕು ಹೆಚ್ಚಳವಾಗುತ್ತಿದೆ ದೇಶದ ಬಹುತೇಕ ರಾಜ್ಯಗಳು ಕಷ್ಟದಲ್ಲಿ ಸಿಲುಕಿವೆ ಎಂದರು.

ಇದನ್ನೂ ಓದಿ:ಚಾಮರಾಜನಗರ ಆಸ್ಪತ್ರೆಯಲ್ಲಿ ಸಾವು ಪ್ರಕರಣ : ಸಚಿವ ಸುಧಾಕರ್ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯ

ರಾಜ್ಯದಲ್ಲಿ ಚಿಕ್ಕಬಳ್ಳಾಪುರ ಮಾದರಿ ಜಿಲ್ಲೆ: ನಗರ ಪ್ರದೇಶಗಳಲ್ಲಿ ಪ್ರತಿ ವಾರ್ಡಿಗೊಂದು ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಪ್ರತಿ ಗ್ರಾಮಕ್ಕೆ ಒಂದು ಟಾಸ್ಕ್ ಫೋರ್ಸ್ ಸಮಿತಿ ಮಾಡಲಾಗಿದೆ ಅಲ್ಲದೆ ಪ್ರತಿ ವಾರ್ಡ್ ಹಾಗೂ ಪ್ರತಿ ಗ್ರಾಮಕ್ಕೆ ಒಬ್ಬರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ ಟಾಸ್ಕ್ ಫೋರ್ಸ್ ಸಮಿತಿಯು ಯೋಜನೆ ರೂಪಿಸಿಕೊಂಡು ತಲಾವಾರು ತಮ್ಮ ವ್ಯಾಪ್ತಿಯ ಮನೆಗಳನ್ನು ಹಂಚಿಕೊಂಡು ಪ್ರತಿ ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ಸೇವೆ ಹಾಗೂ ಮಾಹಿತಿ ಒದಗಿಸುತ್ತಿದ್ದಾರೆ ದಾಖಲಾಗಿರುವ ಕೋವಿಡ್ ಪ್ರಕರಣಗಳು ಎಷ್ಟು, ಸಕ್ರಿಯ ಪ್ರಕರಣಗಳು ಎಷ್ಟು ಎಂಬ ಎಲ್ಲ ಮಾಹಿತಿಯನ್ನು ಪಡೆಯುತ್ತಿದ್ದಾರೆ ಕೋವಿಡ್ ಸೋಂಕು ತಗುಲಿದವರ ಸಂಪರ್ಕಕ್ಕೆ ಬಂದ ಸಂಪರ್ಕಿತರನ್ನು ಪತ್ತೆಹಚ್ಚಿ ಹೋಮ್ ಕ್ವಾರಂಟೈನ್‍ನಲ್ಲಿ ಇರುವಂತೆ ನೋಡಿಕೊಳ್ಳುತ್ತಿದ್ದಾರೆ ಸಮಿತಿಯಲ್ಲಿ ಶಾಲಾ ಶಿಕ್ಷಕರು, ಆಶಾ ಕರ್ತೆಯರು, ಅಂಗನವಾಡಿ ಶಿಕ್ಷಕರು, ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮಸಹಾಯಕರು/ ಸಿಬ್ಬಂದಿಗಳನ್ನು ಸಮಿತಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಜಾಗೃತಿ ಮೂಡಿಸುತ್ತಿದ್ದಾರೆ ಈ ಎಲ್ಲಾ ಕ್ರಮಗಳ ಹಿನ್ನಲೆಯಲ್ಲಿ ಕೋವಿಡ್ ನಿಯಂತ್ರಣದಲ್ಲಿ ರಾಜ್ಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ 5ನೇ ಸ್ಥಾನದಲ್ಲಿದೆ ಎಂದರು.

ಜನತಾ ಕಫ್ರ್ಯೂ ಇರುವುದರಿಂದ ಎಷ್ಟೋ ಕಾರ್ಮಿಕರಿಗೆ ಕೆಲಸವಿಲ್ಲ ನಿರುದ್ಯೋಗ ಮತ್ತು ಬಡತನ ಜಾಸ್ತಿಯಾಗಿದೆ ಆದ್ದರಿಂದ ಇಂದಿರಾ ಕ್ಯಾಂಟೀನ್ ಮುಂದುವರಿಸಿ ಜನರಿಗೆ ಆಹಾರದ ಪೊಟ್ಟಣ ನೀಡಬೇಕು ಜಿಲ್ಲೆಯಲ್ಲಿ ಕೋವಿಡ್ ಸೊಂಕು ಹರಡದಂತೆ ತಡೆಯುವ ಕ್ರಮಗಳ ಉಪಯೋಗಕ್ಕಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರ ಪ್ರದೇಶಾಭಿವೃದ್ಧಿ ಅನುದಾನದಡಿ 25 ಲಕ್ಷಗಳನ್ನು ಬಳಸಿಕೊಳ್ಳುವಂತೆ ಲಿಖಿತ ಮನವಿಯನ್ನು ಅಪರ ಜಿಲ್ಲಾಧಿಕಾರಿಗಳಿಗೆ ನೀಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಎಚ್.ಅಮರೇಶ್ ಅವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.