ಬ್ಯಾಡ್ಮಿಂಟನ್ ರ್ಯಾಂಕಿಂಗ್: ಚಿರಾಗ್ ಶೆಟ್ಟಿ-ಸಾತ್ವಿಕ್ ಜೋಡಿ ನಂ.2
Team Udayavani, Jul 25, 2023, 11:31 PM IST
ಹೊಸದಿಲ್ಲಿ: ಮೊನ್ನೆಯಷ್ಟೇ ಕೊರಿಯಾ ಓಪನ್ ಬ್ಯಾಡ್ಮಿಂಟನ್ ಪ್ರಶಸ್ತಿ ಜಯಿಸಿದ ಭಾರತದ ಚಿರಾಗ್ ಶೆಟ್ಟಿ-ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಈಗ ಇನ್ನೊಂದು ಎತ್ತರಕ್ಕೆ ತಲುಪಿದ್ದಾರೆ. ಮಂಗಳವಾರ ಪ್ರಕಟಗೊಂಡ ನೂತನ ಬಿಡಬ್ಲ್ಯುಎಫ್ ರ್ಯಾಂಕಿಂಗ್ನಲ್ಲಿ ಒಂದು ಸ್ಥಾನದ ಪ್ರಗತಿಯೊಂದಿಗೆ ದ್ವಿತೀಯ ಸ್ಥಾನಕ್ಕೆ ನೆಗೆದಿದ್ದಾರೆ. ಇದು ಇವರ ಜೀವನಶ್ರೇಷ್ಠ ರ್ಯಾಂಕಿಂಗ್ ಎಂಬುದು ವಿಶೇಷ.
ಹಾಲಿ ಏಷ್ಯನ್ ಚಾಂಪಿಯನ್ಸ್ ಕೂಡ ಆಗಿರುವ ಚಿರಾಗ್-ಸಾತ್ವಿಕ್ ಈ ವರ್ಷ 4 ಕೂಟಗಳ ಫೈನಲ್ ತಲುಪಿದ್ದು, ನಾಲ್ಕರಲ್ಲೂ ಗೆದ್ದು ಬಂದಿದ್ದಾರೆ. ಇದರೊಂದಿಗೆ ಇವರ ಅಂಕ 87,211ಕ್ಕೆ ಏರಿದೆ.
ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಪಿ.ವಿ. ಸಿಂಧು ವನಿತಾ ಸಿಂಗಲ್ಸ್ನಲ್ಲಿ 17ನೇ ಸ್ಥಾನದಲ್ಲೇ ಇದ್ದಾರೆ. ಸೈನಾ ನೆಹ್ವಾಲ್ಗೆ ಒಂದು ಸ್ಥಾನ ನಷ್ಟವಾಗಿದ್ದು, ಅವರು 37ನೇ ರ್ಯಾಂಕಿಂಗ್ ಹೊಂದಿದ್ದಾರೆ.
ಎಚ್.ಎಸ್. ಪ್ರಣಯ್ ಪುರುಷರ ವಿಭಾಗದಲ್ಲಿ ಭಾರತದ ಟಾಪ್ ರ್ಯಾಂಕಿಂಗ್ ಹೊಂದಿದ್ದು, 10ನೇ ಸ್ಥಾನದಲ್ಲಿದ್ದಾರೆ. ಕೆನಡಾ ಓಪನ್ ಪ್ರಶಸ್ತಿ ವಿಜೇತ ಲಕ್ಷ್ಯ ಸೇನ್ಗೆ ಒಂದು ಸ್ಥಾನ ನಷ್ಟವಾಗಿದೆ. ಅವರೀಗ 13ನೇ ಸ್ಥಾನಿಯಾಗಿದ್ದಾರೆ. ಕೆ. ಶ್ರೀಕಾಂತ್ 20ನೇ ಸ್ಥಾನ ಉಳಿಸಿಕೊಂಡಿದ್ದಾರೆ. ಅಗ್ರಸ್ಥಾನಲ್ಲಿರುವವರು ಡೆನ್ಮಾರ್ಕ್ನ ವಿಕ್ಟರ್ ಅಕ್ಸೆಲ್ಸೆನ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.