ಬಾಗಲಕೋಟೆಯಲ್ಲಿ ಕೋವಿಡ್ ಸೋಂಕಿಗೆ ಓರ್ವ ಬಲಿ! ನಾಲ್ಕು ಪೊಲೀಸ್ ಠಾಣೆ ಸೀಲ್ ಡೌನ್
ಎಸ್ಪಿ ಕಚೇರಿ ಸಿಬ್ಬಂದಿಗೆ ಕೋವಿಡ್
Team Udayavani, Jul 16, 2020, 7:12 PM IST
ಬಾಗಲಕೋಟೆ : ಕೋವಿಡ್ ಸೋಂಕಿನಿಂದ ಸಾವನ್ನಪ್ಪುವವರ ಸಂಖ್ಯೆ ಹಚ್ಚುತ್ತಲೇ ಇದ್ದು, ಗುರುವಾರ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾನೆ. ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.
ಬಾದಾಮಿಯ 55 ವರ್ಷದ ಪುರುಷ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಈತನಿಗೆ ಜುಲೈ 12ರಂದು ಸೋಂಕು ಖಚಿತಪಟ್ಟಿದ್ದು, ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಫಲಿಸದೇ ಸಾವನ್ನಪ್ಪಿದ್ದಾನೆ. ಕೋವಿಡ್ ನಿಯಮಾವಳಿ ಪ್ರಕಾರ, ಅಂತ್ಯಕ್ರಿಯೆ ಮಾಡಲಾಗಿದೆ ಎಂದು ಜಿಲ್ಲಾ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ|ಪ್ರಕಾಶ ಬಿರಾದಾರ ತಿಳಿಸಿದ್ದಾರೆ.
ನಾಲ್ಕು ಪೊಲೀಸ್ ಠಾಣೆ ಸೀಲ್‌ಡೌನ್ :
ಬಾಗಲಕೋಟೆ ಶಹರ ಪೊಲೀಸ್ ಠಾಣೆಯ ಹವಾಲ್ದಾರ ಮತ್ತು ಓರ್ವ ಪೇದೆ, ಇಳಕಲ್ಲ ಗ್ರಾಮೀಣ ಠಾಣೆ, ತೇರದಾಳ ಠಾಣೆಯ ಪೇದೆ ಹಾಗೂ ರಬಕವಿ -ಬನಹಟ್ಟಿ ಪೊಲೀಸ್ ಠಾಣೆಯ ಎಎಸ್‌ಐಗೆ ಗುರುವಾರ ಸೋಂಕು ದೃಢಪಟ್ಟಿದೆ. ಹೀಗಾಗಿ ಈ ನಾಲ್ಕು ಪೊಲೀಸ್ ಠಾಣೆಗಳನ್ನು ಗುರುವಾರ ಸೀಲ್‌ಡೌನ್ ಮಾಡಿದ್ದು , ಇಡೀ ಠಾಣೆಗೆ ಸ್ಯಾನಿಟೈಜನರ್ ಮಾಡಲಾಗಿದೆ.
ನಾಲ್ಕು ಠಾಣೆಯ ಐವರು ಸಿಬ್ಬಂದಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರ ಸಂಪರ್ಕಕ್ಕೆ ಬಂದವರ ಗಂಟಲು ದ್ರವ ತಪಾಸಣೆಗೆ ಸೂಚಿಸಲಾಗಿದೆ. ಎರಡು ದಿನಗಳ ಕಾಲ ನಾಲ್ಕೂ ಪೊಲೀಸ್ ಠಾಣೆಗಳಲ್ಲಿ ಸ್ಯಾನಿಟೈಜರ್ ಮಾಡಿ , ಆ ಠಾಣೆಗಳ ಕಾರ್ಯ ನಿರ್ವಹಣೆಯನ್ನು ಪಕ್ಕದ ಬೇರೆ ಕಟ್ಟಡ ಇಲ್ಲವೇ ಸಮೀಪದ ಬೇರೆ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸಲಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ತಿಳಿಸಿದ್ದಾರೆ.
ಎಸ್ಪಿ ಕಚೇರಿ ಸಿಬ್ಬಂದಿಗೆ ಕೋವಿಡ್ :
ಎಸ್ಪಿ ಕಚೇರಿಯ ಕಂಪ್ಯೂಟರ್ ವಿಭಾಗದ 35 ವರ್ಷದ ಓರ್ವ ಪುರುಷ ಸಿಬ್ಬಂದಿಗೂ ಗುರುವಾರ ಕೋವಿಡ್ ಸೋಂಕು ದೃಢಪಟ್ಟಿದ್ದು, ಇಡೀ ಎಸ್ಪಿ ಕಚೇರಿಯನ್ನು ಸ್ಯಾನಿಟೈಜರ್ ಮಾಡಲಾಗಿದೆ. ಆದರೆ, ಆ ಸಿಬ್ಬಂದಿ 8 ದಿನಗಳ ಹಿಂದೆ ವೈಯಕ್ತಿಕ ಕೆಲಸಕ್ಕಾಗಿ ರಜೆ ಹಾಕಿದ್ದು, ರಜೆಯ ಮೇಲಿದ್ದಾಗಲೇ ಸೋಂಕಿನ ಲಕ್ಷಣ ಕಂಡಾಗ ಪರೀಕ್ಷೆಗೆ ಒಳಗಾಗಿದ್ದರು. ಇದೀಗ ಕೋವಿಡ್ ದೃಢಪಟ್ಟಿದೆ. ಇದರಿಂದ ಕಚೇರಿಯ ಇತರೆ ಸಿಬ್ಬಂದಿಗಳು ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿಲ್ಲ. ಆದರೂ, ಕಚೇರಿಯನ್ನು ಸ್ಯಾನಿಟೈಜರ್ ಮಾಡಲಾಗಿದೆ ಎಂದು ಎಸ್ಪಿ ಲೋಕೇಶ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.