ಜಾಲತಾಣಗಳಿಂದ ಭಜರಂಗ್ ದೂರ
Team Udayavani, Mar 2, 2021, 6:00 AM IST
ಹೊಸದಿಲ್ಲಿ: ಟೋಕಿಯೊ ಒಲಿಂಪಿಕ್ಸ್ ಮೇಲೆ ಗಮನವನ್ನು ಕೇಂದ್ರೀಕರಿಸುವ ಸಲುವಾಗಿ ಭಾರತದ ಸ್ಟಾರ್ ಕುಸ್ತಿಪಟು ಭಜರಂಗ್ ಪೂನಿಯ ಸಾಮಾಜಿಕ ಜಾಲತಾಣಗಳಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. ಇದಕ್ಕೆ ಸಂಬಂಧಿಸಿ ಟ್ವೀಟ್ ಒಂದನ್ನು ಮಾಡಿ ಅಭಿಮಾನಿಗಳಿಗೆ ಮತ್ತು ಮಾಧ್ಯಮಗಳಿಗೆ ವಿಷಯ ತಿಳಿಸಿದ್ದಾರೆ.
“ಇಂದಿನಿಂದಲೇ ನನ್ನೆಲ್ಲ ಸಾಮಾಜಿಕ ಜಾಲತಾಣಗಳನ್ನು ಶಟ್‌ಡೌನ್ ಮಾಡಲಿದ್ದೇನೆ. ನಿಮ್ಮನ್ನೆಲ್ಲ ಟೋಕಿಯೊ ಒಲಿಂಪಿಕ್ಸ್ ಬಳಿಕ ಭೇಟಿ ಆಗುತ್ತೇನೆ. ಈ ಅವಧಿಯಲ್ಲಿ ನನ್ನ ಮೇಲೆ ಎಂದಿನ ಪ್ರೀತಿಯನ್ನು ಮುಂದುವರಿಸುತ್ತೀರೆಂಬ ನಂಬಿಕೆ ಇದೆ. ಜೈ ಹಿಂದ್’ ಎಂದು ಭಜರಂಗ್ ಹಿಂದಿಯಲ್ಲಿ ಟ್ವೀಟ್ ಮಾಡಿ ಸೋಶಿಯಲ್ ಮೀಡಿಯಾಗಳಿಂದ ದೂರ ಸರಿದಿದ್ದಾರೆ.
2019ರ ವಿಶ್ವಕಪ್ ಸಾಧನೆಯಿಂದ ಭಜರಂಗ್ ಪೂನಿಯ ಈಗಾಗಲೇ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿದ್ದಾರೆ. ಭಾರತಕ್ಕೆ ಪದಕ ತರುವ ಭಾರೀ ನಿರೀಕ್ಷೆಯೂ ಇದೆ.
ಅಮೆರಿಕದಲ್ಲಿ ಅಭ್ಯಾಸ
ಇತ್ತೀಚೆಗೆ ಅಮೆರಿಕದ ಮಿಚಿಗನ್‌ನಲ್ಲಿರುವ “ಕ್ಲಿಫ್ ಕೀನ್ ರೆಸ್ಲಿಂಗ್ ಕ್ಲಬ್’ನಲ್ಲಿ ಒಂದು ತಿಂಗಳ ತರಬೇತಿ ಮುಗಿಸಿ ಭಾರತಕ್ಕೆ ಮರಳಿರುವ ಭಜರಂಗ್ ಪೂನಿಯ ಇನ್ನು ಗುರುವಾರದಿಂದ ಇಟಲಿಯಲ್ಲಿ ಆರಂಭವಾಗಲಿರುವ ಯುಡಬ್ಲ್ಯುಡಬ್ಲ್ಯು ರ್‍ಯಾಂಕಿಂಗ್ ಸರಣಿಯಲ್ಲಿ ಸ್ಪರ್ಧಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್‌ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.