ಮೊದಲ ರಾತ್ರಿಯೇ ಪತಿಯಿಂದ ಕಿರಿಕ್! ಪತ್ನಿಯಿಂದ ಠಾಣೆಗೆ ದೂರು: ಪತಿಯ ಬಂಧನ
Team Udayavani, Dec 3, 2020, 10:10 PM IST
ಬೆಂಗಳೂರು: ಮೊದಲ ರಾತ್ರಿ ದಿನವೇ ಪತಿ ತನಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಎಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ದೊಡ್ಡಬಾಣಸವಾಡಿ ನಿವಾಸಿ 25 ವರ್ಷದ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಶಾಸ್ತ್ರೀನಗರ ನಿವಾಸಿ ಪತಿ ಭರತ್ ರೆಡ್ಡಿ, ಅತ್ತೆ , ಮಾವನ ವಿರುದ್ಧ ಹಲ್ಲೆ, ವಂಚನೆ, ಜೀವ ಬೆದರಿಕೆ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಚ್‌ಎಎಲ್ ಪೊಲೀಸರು ಹೇಳಿದರು.
ಈ ಸಂಬಂಧ ಆರೋಪಿ ಭರತ್ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಸಂತ್ರಸ್ತೆಯ ಮನೆಯವರು ಮದುವೆಗೆ ಕೋಟ್ಯಂತರ ರೂ. ವೆಚ್ಚ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಮೊದಲ ರಾತ್ರಿಯೇ ಕಿರಿಕ್
ಸಂತ್ರಸ್ತೆ ಎರಡು ತಿಂಗಳ ಹಿಂದಷ್ಟೇ(ಅ.29) ಶಾಸ್ತ್ರೀನಗರದ ಭರತ್ ರೆಡ್ಡಿ ಎಂಬಾತನನ್ನು ಮದುವೆಯಾಗಿದ್ದರು. ಅ.30ರಂದು ದಂಪತಿಗೆ ಮೊದಲ ರಾತ್ರಿ ಏರ್ಪಡಿಸಲಾಗಿತ್ತು. ಆದರೆ, ಅದೇ ದಿನ ಆರೋಪಿ ಭರತ್ ರೆಡ್ಡಿ ಕಂಠಪೂರ್ತಿ ಮದ್ಯ ಸೇವಿಸಿದ್ದರಿಂದ ಸಂತ್ರಸ್ತೆ ಪತಿಯಿಂದ ಅಂತರ ಕಾಯ್ದುಕೊಂಡಿದ್ದರು. ಈ ವಿಚಾರ ತಿಳಿದ ಆರೋಪಿಯ ತಾಯಿ ಮತ್ತು ತಂದೆ ಸಂತ್ರಸ್ತೆ ಮೇಲೆ ವಾಮಾಚಾರ ಪ್ರಯೋಗ ಮಾಡಿದ್ದಾರೆ. ಅಲ್ಲದೆ, ನ.19ರಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಪತಿ ಹಾಗೂ ಅತ್ತೆ ಸೇರಿಕೊಂಡು ತನ್ನ ಮೇಲೆ ಹಲ್ಲೆ ನಡೆಸಲು ಸಂಚು ರೂಪಿಸಿದ್ದರು. ಆಗ ಪತಿ ಭರತ್ ರೆಡ್ಡಿ ಕಬ್ಬಿಣದ ರಾಡ್‌ನಿಂದ ಸಂತ್ರಸ್ತೆ ಮೇಲೆ ಹಲ್ಲೆ ನಡೆಸಿದ್ದಾನೆ. ಅತ್ತೆ ಕುತ್ತಿಗೆ ಹಿಸುಕಿ ಹತ್ಯೆಗೈಯಲು ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:
ಈ ನಡುವೆ ಆರೋಪಿ ಭರತ್ ರೆಡ್ಡಿ ಈಗಾಗಲೇ ಜ್ಯೋತಿ ಎಂಬವರ ಜತೆ ಮದುವೆಯಾಗಿದ್ದು, ಈ ವಿಚಾರವನ್ನು ಮುಚ್ಚಿಟ್ಟು ತನ್ನನ್ನು ಎರಡನೇ ಮದುವೆಯಾಗಿ ವಂಚನೆ ಮಾಡಿದ್ದಾರೆ. ಅದರಿಂದ ಮಾನಸಿಕ ಮತ್ತು ದೈಹಿಕವಾಗಿ ಕಿರುಕುಳ ನೀಡಿ ಕಬ್ಬಿಣದ ರಾಡ್‌ನಿಂದ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಪತಿ ಸೇರಿ ಮೂವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.
ಆರು ಕೋಟಿ ವೆಚ್ಚ?
ಭರತ್ ರೆಡ್ಡಿ ಹಾಗೂ ಸಂತ್ರಸ್ತೆಯ ನಿಶ್ಚಿತಾರ್ಥ ಹಾಗೂ ಮದುವೆ ಸೇರಿ ಬರೋಬ್ಬರಿ ಆರು ಕೋಟಿ ಖರ್ಚು ಮಾಡಲಾಗಿದೆ ಎಂದು ಹೇಳಲಾಗಿದೆ. ಒಂದು ಕೋಟಿ ರೂ. ಮೌಲ್ಯದ ಬೆಂಜ್ ಕಾರು, 5 ಕೆ.ಜಿ ಚಿನ್ನ, ವಜ್ರದ ಒಡವೆ, ಡೈಮಂಡ್ ರಿಂಗ್, ಬ್ರಾಸ್‌ಲೆಟ್ ಸೇರಿ ಬರೋಬರಿ ಆರು ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ತನಿಖೆಕೈಗೊಳ್ಳಬೇಕಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.