ಫೆಬ್ರವರಿಯಲ್ಲಿ ಬೆಂಗಳೂರು 13 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ
Team Udayavani, Dec 16, 2021, 7:14 PM IST
ಬೆಂಗಳೂರು: 13 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು 2022 ನೇ ಫೆಬ್ರವರಿ ತಿಂಗಳಲ್ಲಿ ನಡೆಸಲು ಉದ್ದೇಶಿಸಲಾಗಿದೆ.
ಈ ಚಿತ್ರೋತ್ಸವದ ಸ್ಪರ್ಧಾತ್ಮಕ ವಿಭಾಗಕ್ಕೆ ಕಥಾ ಚಿತ್ರಗಳನ್ನು ಆಹ್ವಾನಿಸಲಾಗಿದೆ. ಏಷಿಯನ್, ಭಾರತೀಯ ಹಾಗೂ ಕನ್ನಡದ ಎಲ್ಲ ಉಪಭಾಷಾ ಚಲನಚಿತ್ರಗಳೂ ಸೇರಿದಂತೆ ಕನ್ನಡ ಸಿನಿಮಾಗಳು ಸ್ಪರ್ಧಾತ್ಮಕ ವಿಭಾಗದಲ್ಲಿರುತ್ತವೆ. ಪ್ರತಿಯೊಂದು ವಿಭಾಗದಲ್ಲೂ ಪ್ರಶಸ್ತಿ ವಿಜೇತ ಚಲನಚಿತ್ರಗಳಿಗೆ ನಗದು, ಸ್ಮರಣ ಫಲಕ ಹಾಗೂ ಪ್ರಮಾಣಪತ್ರಗಳನ್ನು ನೀಡಲಾಗುತ್ತದೆ.
ಸ್ಪರ್ಧಾತ್ಮಕ ವಿಭಾಗದಲ್ಲಿ ಪ್ರವೇಶ ಪಡೆಯಲು ಕಥಾಚಿತ್ರಗಳು 1, ಜನವರಿ 2021 ರಿಂದ 30 ನವೆಂಬರ್ 2021 ರ ಅವಧಿಯಲ್ಲಿ ನಿರ್ಮಾಣಗೊಂಡವಾಗಿರಬೇಕು. ಹಾಗೂ 70 ನಿಮಿಷದ ಅವಧಿಯ ಚಲನಚಿತ್ರವಾಗಿರಬೇಕು.
ಕನ್ನಡ ಹಾಗೂ ಕರ್ನಾಟಕದ ಉಪಭಾಷೆಗಳಲ್ಲಿ ಮತ್ತು ಇತರೆ ಭಾರತೀಯ ಭಾಷೆಗಳಲ್ಲಿ ತಯಾರಾದ ಚಿತ್ರಗಳ ನಿರ್ಮಾಣದ ದಿನಾಂಕವನ್ನು ಭಾರತ ಸರ್ಕಾರದ ಸೆಂಟ್ರಲ್ ಬೋರ್ಡ್ ಆಫ್ ಫಿಲಂ ಸರ್ಟಿಫಿಕೇಷನ್ ನೀಡಿದ ದಿನಾಂಕವನ್ನು ಆಧರಿಸಿ ಗಣನೆಗೆ ತೆಗೆದುಕೊಳ್ಳಲಾಗುವುದು.
ಸ್ಪರ್ಧಾತ್ಮಕ ವಿಭಾಗಕ್ಕೆ ಚಲನಚಿತ್ರಗಳನ್ನು ಸಲ್ಲಿಸಲು ಕಡೆಯ ದಿನಾಂಕ 27 ಡಿಸೆಂಬರ್ 2021
ಚಲನಚಿತ್ರಗಳನ್ನು ಸಲ್ಲಿಸಲು ಅನುಸರಿಸಬೇಕಾದ ನಿಯಮಾವಳಿ ಹಾಗೂ ಮಾರ್ಗಸೂಚಿಯನ್ನು ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಧಿಕೃತ ವೆಬ್ ಸೈಟ್ Biffes.org ನಿಂದ ಪಡೆಯಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.