ಕಿರುಕುಳ ನೀಡುತ್ತಿದ್ದ ಪತಿಯ ಹತ್ಯೆ ಸುಪಾರಿ ಕೊಟ್ಟ ಪತ್ನಿ, ಪುತ್ರ ಸೇರಿ ಐವರ ಬಂಧನ


Team Udayavani, Mar 1, 2021, 11:20 PM IST

ಕಿರುಕುಳ ನೀಡುತ್ತಿದ್ದ ಪತಿಯ ಹತ್ಯೆ ಸುಪಾರಿ ಕೊಟ್ಟ ಪತ್ನಿ, ಪುತ್ರ ಸೇರಿ ಐವರ ಬಂಧನ

ಬೆಂಗಳೂರು: ಪುತ್ರಿಯರ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದ ಪತಿಯನ್ನು ಸುಪಾರಿ ನೀಡಿ ಹತ್ಯೆಗೈದ ಆರೋಪದಲ್ಲಿ ಮಹಿಳೆ, ಆಕೆಯ ಪುತ್ರ ಸೇರಿದಂತೆ ಐವರು ಆರೋಪಿಗಳನ್ನು ರಾಜಗೋಪಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹೆಗ್ಗನಹಳ್ಳಿ ನಿವಾಸಿ ಸರ್ವರಿ ಬೇಗಂ (42), ಆಕೆಯ ಪುತ್ರ ಶಫಿ ಉರ್‌ ರೆಹಮಾನ್‌ (20), ಸುಪಾರಿ ಪಡೆದುಕೊಂಡಿದ್ದ ಥಣಿಸಂದ್ರದ ನಿವಾಸಿ ಅಫ್ತಾಬ್‌ (21), ಆತನ ಸಹಚರರಾದ ಪೀಣ್ಯದ ಸೈಯದ್‌ ಅವೆಜ್‌ ಪಾಷಾ (23) ಹಾಗೂ ಮಹಮ್ಮದ್‌ ಸೈಫ್ (20) ಎಂಬಾತನನ್ನು ಬಂಧಿಸಲಾಗಿದೆ. ಆರೋಪಿಗಳು ಮಹಮ್ಮದ್‌ ಹಂಜಲ (52) ಕೊಲೆಗೈದಿದ್ದರು. ಆರೋಪಿಗಳಿಂದ 98 ಸಾವಿರ ಹಣ ಜಪ್ತಿ ಮಾಡಲಾಗಿದೆ. ಘಟನೆ ನಡೆದ 18 ದಿನಗಳ ಬಳಿಕ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

ಕೊಲೆಯಾದ ಮಹಮ್ಮದ್‌ ಹಂಜಲ್‌ ಚಪ್ಪಲಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ. ಮೃತನಿಗೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಮೂವರು ಹೆಣ್ಣು ಮಕ್ಕಳು ಹಾಗೂ ಒಬ್ಬ ಪುತ್ರನಿದ್ದಾನೆ. ಮಹಮ್ಮದ್‌ ಹೆಣ್ಣು ಮಕ್ಕಳು ಬಟ್ಟೆ ಬದಲಾಯಿಸುವಾಗ, ಸ್ನಾನಕ್ಕೆ ಹೋದಾಗ ಕದ್ದು ನೋಡುತ್ತಿದ್ದ. ಅದನ್ನು ಗಮನಿಸಿದ್ದ ಸರ್ವರಿ ಬೇಗಂ, ಪತಿಗೆ ಹಲವು ಬಾರಿ ಎಚ್ಚರಿಕೆ ನೀಡಿದ್ದಳು. ಆದರೂ ಮೃತ ವ್ಯಕ್ತಿ ತನ್ನ ಚಾಳಿಯನ್ನು ಬಿಟ್ಟಿರಲಿಲ್ಲ. ಅಲ್ಲದೆ, ಪತ್ನಿಯ ಶೀಲ ಶಂಕಿಸಿ ಆಗ್ಗಾಗ್ಗೆ ಜಗಳವಾಡುತ್ತಿದ್ದ. ಪತಿ ವರ್ತನೆಯಿಂದ ಬೇಸತ್ತ ಸರ್ವರಿ ಬೇಗಂ, ಪುತ್ರ ಶಫಿ ಉರ್‌ ರೆಹಮಾನ್‌ ಜತೆ ಸೇರಿ ಕೊಲೆಗೆ ಸಂಚು ರೂಪಿಸಿದ್ದಳು ಎಂದು ಪೊಲೀಸರು ಹೇಳಿದರು.

ಇದನ್ನೂ ಓದಿ:ಜಿ-23ಯಲ್ಲಿ ಗುರುತಿಸಿಕೊಳ್ಳಲ್ಲ: ಮಾಜಿ ಮುಖ್ಯಮಂತ್ರಿ ಮೊಯ್ಲಿ ಸ್ಪಷ್ಟನೆ

4.5 ಲಕ್ಷ ರೂ.ಗೆ ಸುಪಾರಿ
ಆರೋಪಿಗಳ ಪೈಕಿ ಅಫ್ತಾಬ್‌ ವಿರುದ್ಧ 2019ರಲ್ಲಿ ರಾಜಗೋಪಾಲನಗರ ಠಾಣೆಯಲ್ಲಿ ದಾಖಲಾಗಿದ್ದ ಕೊಲೆಯತ್ನ ಪ್ರಕರಣ ಮತ್ತು ತುಮಕೂರು ಠಾಣೆಯಲ್ಲಿ ಮೊಬೈಲ್‌ ಕಳವು ಪ್ರಕರಣಗಳು ದಾಖಲಾಗಿವೆ. ಈತನನ್ನು ಸಂಪರ್ಕಿಸಿದ ಶಫಿ ಉರ್‌ ರೆಹಮಾನ್‌ ಮತ್ತು ತಾಯಿ ಬೇಗಂ, 4.5 ಲಕ್ಷ ರೂ.ಗೆ ಪತಿಯ ಹತ್ಯೆಗೆ ಸುಪಾರಿ ಕೊಟ್ಟಿದ್ದರು. ಈ ಸಂಬಂಧ ಅಫ್ತಾಬ್‌, ತನ್ನ ಸಹಚರರಾದ ಮಹಮ್ಮದ್‌ ಸೈಫ್ ಹಾಗೂ ಸೈಯದ್‌ ಅವೆಜ್‌ ಜತೆ ಸೇರಿಕೊಂಡು ಮಹಮ್ಮದ್‌ ಹಂಜಲ್‌ ಹತ್ಯೆಗೆ ಸಂಚು ರೂಪಿಸಿದ್ದ.

ಫೆ.10ರಂದು ರಾತ್ರಿ ಸರ್ವರಿ ಬೇಗಂ ಪತಿಯ ಊಟದಲ್ಲಿ ಆರು ನಿದ್ರೆ ಮಾತ್ರೆ ಬೆರೆಸಿ ಕೊಟ್ಟಿದ್ದಳು. ಊಟ ಮಾಡಿ ಮಹಮ್ಮದ್‌ ನಿದ್ರೆಗೆ ಜಾರಿದ್ದ. ಬೆಳಗಿನ ಜಾವ 3.30ರ ಸುಮಾರಿಗೆ ಅಫ್ತಾಬ್‌ ತನ್ನ ಸಹಚರರ ಜತೆ ಮನೆಗೆ ಬಂದು ಮಹಮ್ಮದನನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿ ಪರಾರಿಯಾಗಿದ್ದರು ಎಂದು ಪೊಲೀಸರು ಹೇಳಿದರು.

ಹೃದಯಾಘಾತದ ಕಥೆ ಕಟ್ಟಿದ ಪತ್ನಿ, ಪುತ್ರ
ಮರು ದಿನ ಪತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಪತ್ನಿ, ಪುತ್ರ ಸುಳ್ಳು ಸುದ್ದಿ ಹಬ್ಬಿಸಿದ್ದರು. ಅಲ್ಲದೆ, ಮೃತ ದೇಹವನ್ನು ತಿಗಳರಪಾಳ್ಯದ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ಮಾಡಿದ್ದರು. ಅನಂತರ ಕೆಲ ದಿನಗಳ ಬಳಿಕ ಸ್ಥಳೀಯರೊಬ್ಬರು ಆರೋಪಿಗಳ ವರ್ತನೆ ಗಮನಿಸಿ ಅನುಮಾನಗೊಂಡು ಠಾಣೆಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇನ್‌ಸ್ಪೆಕ್ಟರ್‌ ಐಯಣ್ಣ ಬಿ.ರೆಡ್ಡಿ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಬಳಿಕ ಸರ್ವರಿ ಬೇಗಂನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯಾಂಶ ಬೆಳಕಿಗೆ ಬಂದಿದೆ. ಬಳಿಕ ಎಲ್ಲ ಆರೋಪಿಗಳನ್ನು ಬಂಧಿಸಲಾಗಿದೆ. ಮೃತ ದೇಹವನ್ನು ಹೊರಗೆ ತೆಗೆದು ಮರಣೋತ್ತರ ಪರೀಕ್ಷೆ ನಡೆಸಬೇಕಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

MNG-hosp

Mangaluru: ವೆನ್ಲಾಕ್‌ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್‌

Jameer

Illegal Property Case: ಸಚಿವ ಜಮೀರ್‌ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್‌

Gsat20

Space Science: ಸ್ಪೇಸ್‌ಎಕ್ಸ್‌ನಿಂದ ಮೊದಲ ಬಾರಿ ಇಸ್ರೋ ಉಪಗ್ರಹ ನಭಕ್ಕೆ!

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

1-jenu

GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!

GTD

Court Judgement: ತಪ್ಪಿತಸ್ಥ ಎಂದಾದರೆ ಮಾತ್ರ ರಾಜೀನಾಮೆ ನೀಡಬೇಕು: ಜಿ.ಟಿ.ದೇವೇಗೌಡ

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jameer

Illegal Property Case: ಸಚಿವ ಜಮೀರ್‌ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್‌

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

1-jenu

GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!

KH-Muniyappa

Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Jameer

Illegal Property Case: ಸಚಿವ ಜಮೀರ್‌ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್‌

MNG-hosp

Mangaluru: ವೆನ್ಲಾಕ್‌ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್‌

Gsat20

Space Science: ಸ್ಪೇಸ್‌ಎಕ್ಸ್‌ನಿಂದ ಮೊದಲ ಬಾರಿ ಇಸ್ರೋ ಉಪಗ್ರಹ ನಭಕ್ಕೆ!

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

1-jenu

GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.