ಕೋವಿಡ್-19 ನಿಯಂತ್ರಣದಲ್ಲಿ ಬೆಂಗಳೂರು ಯಶಸ್ಸು ಕಂಡಿದೆ: ಡಿವಿಎಸ್
Team Udayavani, May 25, 2020, 7:45 PM IST
ಬೆಂಗಳೂರು: ಕೋವಿಡ್-19 ನಿಯಂತ್ರಣ ಮಾಡುವಲ್ಲಿ ಕರ್ನಾಟಕ ಯಶಸ್ಸು ಕಂಡಿದೆ, ಕೇಂದ್ರದ ಮಾರ್ಗಸೂಚಿ ಪಾಲನೆ ಮಾಡಿ ಪರಿಸ್ಥಿತಿ ಸಮರ್ಥವಾಗಿ ನಿಭಾಯಿಸಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.
ಕೋವಿಡ್-19 ಹಿನ್ನೆಲೆಯಲ್ಲಿ ರಾಜ್ಯದ ಸಚಿವರು, ಶಾಸಕರು, ಅಧಿಕಾರಿಗಳ ಜತೆ ಸೋಮವಾರ ವಿಕಾಸಸೌಧದಲ್ಲಿ ಸಭೆ ನಡೆಸಿದ ನಂತರ ಮಾತನಾಡಿದ ಅವರು,ಕೋವಿಡ್-19 ನಿಯಂತ್ರಣ ವಿಚಾರದಲ್ಲಿ ದೇಶದ ಇತರೆ ಮಹಾನಗರಗಳಿಗೆ ಹೋಲಿಸಿದರೆ ಬೆಂಗಳೂರು ಮೊದಲ ಸ್ಥಾನದಲ್ಲಿದೆ. ಇದಕ್ಕಾಗಿ ನಾನು ಡಾ.ಸಿ.ಎನ್.ಮಂಜುನಾಥ್ ನೇತೃತ್ವದ ತಜ್ಞರ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಕೋವಿಡ್-19 ನಿಯಂತ್ರಣದಲ್ಲಿ ಕರ್ನಾಟಕ ಯಶಸ್ಸು ಕಂಡಿದೆ. ಅದ್ಭುತ ಪ್ರಯತ್ನ ನಮ್ಮಲ್ಲಿ ಆಗುತ್ತಿದೆ. ಅದೇ ರೀತಿ ದೇಶದಲ್ಲಿಯೂ ಪ್ರಧಾನಿ ನರೇಂದ್ರಮೋದಿ ಅವರು ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಶ್ವದ ಪ್ರಶಂಸೆ ನಮಗೆ ಸಿಕ್ಕಿದೆ ಎಂದು ತಿಳಿಸಿದರು.
ಕೋವಿಡ್-19 ಸಂಬಂಧ ರಾಜ್ಯದಲ್ಲಿ ದಾಖಲಾಗಿರುವ 800 ರಿಂದ 900 ಪ್ರಕರಣಗಳು ಬೇರೆ ರಾಜ್ಯದಿಂದ ಇಲ್ಲಿಗೆ ಬಂದವರಲ್ಲಿ ಕಾಣಿಸಿಕೊಂಡಿದ್ದಾಗಿದೆ. ರಾಜ್ಯದಲ್ಲಿ ಪ್ರಾಯೋಗಾಲಯಗಳು ಹೆಚ್ಚಾಗಿರುವುದರಿಂದ ಕೋವಿಡ್-19 ಪರೀಕ್ಷೆ ಪ್ರಮಾಣವೂ ಹೆಚ್ಚಾಗಿದೆ ಎಂದು ತಿಳಿಸಿದರು.
ಕೋವಿಡ್-19 ಫಾರ್ಮಸಿ ಹೊಣೆಗಾರಿಕೆಯೂ ಇರುವುದರಿಂದ ದೆಹಲಿಯಿಂದಲೇ ರಾಜ್ಯದ ಪರಿಸ್ಥಿತಿ ಕುರಿತು ಮಾಹಿತಿ ಪಡೆಯುತ್ತಿದ್ದೆ. ಇಂದು ಸಭೆ ನಡೆಸಿದ್ದೇನೆ. ರಾಜ್ಯಕ್ಕೆ ಪಿಪಿಒ ಕಿಟ್‌ಗಳ ಅಗತ್ಯ ಇದೆ ಎಂಬುದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ, ಈ ಕುರಿತು ಗಮನಹರಿಸಲಾಗುವುದು ಎಂದು ಹೇಳಿದರು.
ವಲಸಿಗರನ್ನು ಅವರವರ ರಾಜ್ಯಕ್ಕೆ ಕಳುಹಿಸಲು ರಾಜ್ಯ ಸರ್ಕಾರ ಸಿದ್ದತೆ ಇದೆ. ಆದರೆ , ಅವರ ರಾಜ್ಯಗಳು ಇವರನ್ನು ಬಿಟ್ಟುಕೊಳ್ಳಲು ಒಪ್ಪಬೇಕು. ಅದಕ್ಕೆ ಎರಡು ರಾಜ್ಯಗಳ ಅಧಿಕಾರಿಗಳ ನಡುವೆ ಸಮಾಲೋಚನೆ, ಒಪ್ಪಿಗೆ ಪತ್ರ ಸೇರಿ ಹಲವು ಪ್ರಕ್ರಿಯೆ ನಡೆಯಬೇಕು, ಹೀಗಾಗಿ, ಒಂದಷ್ಟು ಗೊಂದಲ ಇದೆ ಎಂದರು.
ರಾಜ್ಯದಲ್ಲಿ ಹೋಟೆಲ್ ತೆರೆಯಬೇಕು ಎಂಬ ಬೇಡಿಕೆ ಇದೆ. ಈ ಕುರಿತು ಕೇಂದ್ರದ ಜತೆ ಮಾತನಾಡಿ ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳಲಾಗುವುದುಎ ಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ರಾಜ್ಯದಲ್ಲಿ ರಸಗೊಬ್ಬರ ದಾಸ್ತಾನು ಸಹ ಅಗತ್ಯ ಪ್ರಮಾಣದಲ್ಲಿ ಇದೆ. ಮುಂಗಾರು ಹಂಗಾಮಿಗೆ ಬೇಕಾಗುವಷ್ಟು ದಾಸ್ತಾನು ಮಾಡಲಾಗಿದೆ. ರೈತರು ಆತಂಕ ಪಡಬೇಕಿಲ್ಲ ಎಂದು ಸಚಿವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.