ಬೆಂಗಳೂರು ರೋಸ್ ತಳಿಯ ಈರುಳ್ಳಿ ರಫ್ತು ನಿರ್ಭಂದ ತೆಗೆಯುವಂತೆ ಕೇಂದ್ರಕ್ಕೆ ಪತ್ರ
Team Udayavani, Sep 21, 2020, 6:33 PM IST
ಬೆಂಗಳೂರು: ರಾಜ್ಯದಲ್ಲಿ ಬೆಳೆಯುವ ಬೆಂಗಳೂರು ರೋಸ್ ತಳಿಯ ಈರುಳ್ಳಿ ರಫ್ತು ನಿರ್ಭಂದ ತೆಗೆಯುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರದಿಂದ ಮನವಿ ಮಾಡಲಾಗಿದೆ. ತೋಟಗಾರಿಕೆ, ಪೌರಾಡಳಿತ ಹಾಗೂ ರೇಷ್ಮೆ ಇಲಾಖೆ ಸಚಿವ ಡಾ| ನಾರಾಯಣ ಗೌಡ ಈ ಸಂಬಂಧ ಕೇಂದ್ರ ಸಚಿವ ಪಿಯುಷ್ ಗೋಯಲ್ ಅವರಿಗೆ ಪತ್ರ ಬರೆದಿದ್ದಾರೆ. ರೈತರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ರಫ್ತು ನಿರ್ಭಂದ ಸಡಿಲಗೊಳಿಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಬೆಂಗಳೂರು ರೋಸ್ ಈರುಳ್ಳಿ ವಿಶೇಷ ತಳಿಯಾಗಿದೆ. ಸಣ್ಣ ಹಿಡುವಳಿ ರೈತರು ಇದ್ದನ್ನ ನಮ್ಮ ರಾಜ್ಯದಲ್ಲಿ ಹೆಚ್ಚಾಗಿ ಬೆಳೆಯುತ್ತಿದ್ದಾರೆ. ಸ್ಥಳೀಯ ಮಾರ್ಕೇಟ್ನಲ್ಲಿ ಇದಕ್ಕೆ ಬೇಡಿಕೆ ಕಡಿಮೆ ಇದೆ. ರಫ್ತು ಮಾಡುವುದೊಂದೇ ರೈತರಿಗೆ ಇರುವ ಪರಿಹಾರ. ನಿರ್ಭಂದ ಸಡಿಲಿಸಿದರೆ ರೈತರು ಹಾಗೂ ರಫ್ತು ದಾರರು ನಿರಾಳರಾಗುತ್ತಾರೆ. ನಿರ್ಭಂದ ಹೇರಿರುವ ಕಾರಣ ರೈತರು ಸಹಜವಾಗಿ ಆತಂಕಕ್ಕೆ ಈಡಾಗಿದ್ದಾರೆ.
ರಫ್ತಿಗೆ ಅವಕಾಶ ಮಾಡಿಕೊಡುವುದರ ಜೊತೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೆಚ್ಚಿನ ಅವಕಾಶ ಮಾಡಿಕೊಟ್ಟರೆ ಬೆಂಗಳೂರು ರೋಸ್ ಆನಿಯನ್ಗೆ ಇನ್ನಷ್ಟು ಉತ್ತೇಜನ ಸಿಗಲಿದೆ. ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ರಫ್ತು ನಿಷೇಧಿಸಿದ್ದು, ಆ ಪಟ್ಟಿಯಲ್ಲಿ ಬೆಂಗಳೂರು ರೋಸ್ ಆನಿಯನ್ ಕೂಡ ಸೇರಿಕೊಂಡಿದೆ. ಆದ್ರೆ ಬೆಂಗಳೂರು ರೋಸ್ ಆನಿಯನ್ಗೆ ಸ್ಥಳೀಯವಾಗಿ ಬೇಡಿಕೆ ಕಡಿಮೆ ಇದೆ. ಹಾಗಾಗಿ ರಫ್ತಿಗೆ ಅವಕಾಶ ಮಾಡಿಕೊಡಬೇಕು ಎಂದು ಕೇಂದ್ರ ಸಚಿವ ಪಿಯುಷ್ ಗೋಯಲ್ ಅವರಿಗೆ ಸಚಿವ ಡಾ| ನಾರಾಯಣ ಗೌಡ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.