Bangladesh Crisis: ಭಾರತಕ್ಕೆ ಬಂದ ಶೇಖ್ ಹಸೀನಾ; ಲಂಡನ್‌ಗೆ ತೆರಳುವ ಸಾಧ್ಯತೆ
ದೆಹಲಿ ಬಳಿಯ ಹಿಂಡನ್ ವಾಯುನೆಲೆಯಲ್ಲಿ ಹಸೀನಾ- ಅಜಿತ್ ಧೋವಲ್ ಮಾತುಕತೆ, ಪ್ರಧಾನಿ ಮೋದಿ, ರಾಹುಲ್‌ಗೆ ಸಚಿವ ಜೈಶಂಕರ್ ವಿವರಣೆ
Team Udayavani, Aug 5, 2024, 7:48 PM IST
ಹೊಸದಿಲ್ಲಿ: ಬಾಂಗ್ಲಾದೇಶ(Bangladesh)ದಲ್ಲಿ ಸರ್ಕಾರಿ ಹುದ್ದೆಗಳಲ್ಲಿ ಮೀಸಲು ಕಡಿತಕ್ಕೆ ಆಗ್ರಹಿಸಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯಿಂದ ಭಾರಿ ಹಿಂಸಾಚಾರ ಭುಗಿಲೆದ್ದು ಸೇನೆಯ ಕ್ಷಿಪ್ರ ಕ್ರಾಂತಿಯ ಪರಿಣಾಮ ಪ್ರಧಾನಿ ಶೇಖ್ ಹಸೀನಾ (Sheikh Hasina) ರಾಜೀನಾಮೆ ಸಲ್ಲಿಸಿದ್ದು, ಬಾಂಗ್ಲಾದಲ್ಲಿನ ಆತಂಕಕಾರಿ ಬೆಳವಣಿಗೆಯಿಂದ ಮಾಜಿ ಪ್ರಧಾನಿ ಹಸೀನಾ ಭಾರತದ ಗಡಿ ಪ್ರವೇಶಿಸಿ ಗಾಜಿಯಾಬಾದ್‌ನ ಹಿಂಡನ್ ವಾಯುನೆಲೆಗೆ ಆಗಮಿಸಿ ಅಲ್ಲಿಂದ ಲಂಡನ್‌ಗೆ ತೆರಳಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಎನ್‌ಎಎಸ್ ಅಜಿತ್ ಭೇಟಿ; ಹಸೀನಾ-ಧೋವಲ್ ಮಾತುಕತೆ:
ಢಾಕಾದಿಂದ ದೆಹಲಿ ಬಳಿ ಇರುವ ಗಾಜಿಯಾಬಾದ್‌ನ ಹಿಂಡನ್ ವಾಯುನೆಲೆಗೆ ಆಗಮಿಸಿದ ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಎಸ್) ಅಜಿತ್ ದೋವಲ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಬಾಂಗ್ಲಾ ಸೇನಾ ಮುಖ್ಯಸ್ಥ ವಕಾರ್ ಕೈಯಲ್ಲಿ ಮಧ್ಯಂತರ ಮಿಲಿಟರಿ ಆಡಳಿತ
ಶೇಖ್ ಹಸೀನಾ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ, ಪಲಾಯನಗೈದ ಬೆನ್ನಲ್ಲೇ ಬಾಂಗ್ಲಾದೇಶದಲ್ಲಿ ಮಧ್ಯಂತರ ಮಿಲಿಟರಿ ಆಡಳಿತ ಜಾರಿಗೆ ಬಂದಿದೆ. ದೇಶದ ಆಡಳಿತದ ಚುಕ್ಕಾಣಿ ಬಾಂಗ್ಲಾ ಮಿಲಿಟರಿ ಮುಖ್ಯಸ್ಥ ವಕಾರ್ ಉಜ್ ಜಮಾನ್ ವ್ಯಾಪ್ತಿಗೆ ಬಂದಿದೆ. ಸೇನೆಯೇ ಆಡಳಿತ ನಡೆಸುವುದರಿಂದ ಬಾಂಗ್ಲಾದೇಶದಲ್ಲಿ ಕಠಿಣ ನಿಯಮಗಳು ಜಾರಿಯಾಗಿ, ಜನ ಇನ್ನಷ್ಟು ದಂಗೆಯೇಳಬಹುದು. ಮೀಸಲಾತಿ ರದ್ದಾಗುವವರೆಗೂ ಬಾಂಗ್ಲಾದೇಶದಲ್ಲಿ ಅರಾಜಕತೆ ಮುಂದುವರಿಯಬಹುದು. ಇಲ್ಲವೇ, ಪ್ರತಿಪಕ್ಷಗಳು ಒಗ್ಗೂಡಿ ಸರ್ಕಾರ ರಚನೆಗೆ ಮುಂದಾಗಬಹುದು.
ಬಾಂಗ್ಲಾದಲ್ಲಿ ಹಿಂಸಾಚಾರ ಭಾರತಕ್ಕೆ ತಲೆನೋವು:
ಬಾಂಗ್ಲಾದೇಶದಲ್ಲಿ ಹಿಂಸಾಚಾರವು ಭುಗಿಲೆದ್ದ ಪರಿಣಾಮವು ಭಾರತದ ಮೇಲೂ ಬೀರುವ ಸಾಧ್ಯತೆ ಹೆಚ್ಚಿದ್ದು ಬಾಂಗ್ಲಾದಲ್ಲಿ ಶಾಂತಿ ನೆಲೆಸಿದ್ದಾಗಲೇ ನುಸುಳುಕೋರರು ಭಾರತ ಪ್ರವೇಶಿಸುತ್ತಿದ್ದರು. ಈಗ ಸುಮಾರು 4 ಲಕ್ಷ ಜನ ದಂಗೆಯೆದ್ದಿರುವ ಕಾರಣ ಮತ್ತಷ್ಟು ಮಂದಿ ಭಾರತವನ್ನು ಅಕ್ರಮವಾಗಿ ಪ್ರವೇಶಿಸಿ, ಅವರು ದೇಶಕ್ಕೆ ತಲೆನೋವಾಗಬಹುದು. ಬಾಂಗ್ಲಾದಲ್ಲಿ ಮಧ್ಯಂತರ ಮಿಲಿಟರಿ ಆಡಳಿತ ಜಾರಿಗೆ ಬಂದ ಕಾರಣ ಭಾರತ ಹಾಗೂ ಬಾಂಗ್ಲಾದೇಶದ ವ್ಯಾಪಾರ, ಒಪ್ಪಂದಗಳ ಮೇಲೆ ಪರಿಣಾಮ ಉಂಟಾಗುವ ಸಾಧ್ಯತೆ ಇದೆ.
ಮಿಲಿಟರಿ ಆಡಳಿತ ಕೊನೆಯಾಗಿ, ಹೊಸ ಸರ್ಕಾರ ರಚನೆಯಾಗಿ, ಪ್ರತಿಭಟನೆ ಶಾಂತವಾಗುವವರೆಗೂ ಭಾರತಕ್ಕೆ ಸಂಕಷ್ಟ ತಪ್ಪಿದ್ದಲ್ಲ ಎಂದೇ ವಿಶ್ಲೇಷಿಸಲಾಗುತ್ತಿದೆ. ಶೇಖ್ ಹಸೀನಾ ಭಾರತ ಪರ ನಿಲುವು ಹೊಂದಿದ್ದಾರೆ. ಹಾಗಾಗಿ ಪ್ರತಿಭಟನೆಕಾರರ ಕೋಪ ಭಾರತದ ಮೇಲೆ ತಿರುಗಬಹುದು. ಬಾಂಗ್ಲಾದಲ್ಲಿರುವ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿ ನಡೆಯುವ ಅಪಾಯವೂ ಇದೆ.
ಪ್ರಧಾನಿ ಮೋದಿ, ರಾಹುಲ್‌ಗೆ ವಿದೇಶಾಂಗ ಸಚಿವ ಜೈಶಂಕರ್‌ರಿಂದ ಮಾಹಿತಿ:
ಬಾಂಗ್ಲಾದೇಶದಲ್ಲಿ ನಡೆದ ಪ್ರಸಕ್ತ ಪರಿಸ್ಥಿತಿ, ವಿದ್ಯಾಮಾನಗಳ ಬಗ್ಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಹಿತಿ ನೀಡಿದ್ದಾರೆ. ಬಾಂಗ್ಲಾ ಬೆಳವಣಿಗೆ ಬಗ್ಗೆ ಕೇಂದ್ರ ಸರಕಾರವು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಗೂ ವಿದೇಶಾಂಗ ಸಚಿವ ಜೈ ಶಂಕರ್ ಸದನ ನಡುವೆಯೇ ವಿವರಣೆ ನೀಡಿದ್ದಾರೆ.
ಬಿಎಸ್‌ಎಫ್‌ನಿಂದ ಗಡಿಯಲ್ಲಿ ಹೈ ಅಲರ್ಟ್; ವಿಮಾನ, ರೈಲು ಸಂಚಾರ ಸ್ಥಗಿತ
ಬಾಂಗ್ಲಾದಲ್ಲಿ ಹಿಂಸಾಚಾರ ಪರಿಣಾಮ ಭಾರತ -ಬಾಂಗ್ಲಾದೇಶದ 4096 ಕಿ.ಮೀ. ಗಡಿಯಾದ್ಯಂತ ಬಿಎಸ್‌ಎಫ್ (ಗಡಿ ಸುರಕ್ಷಾ ದಳ) ಕಟ್ಟೆಚ್ಚರ ವಹಿಸಲು ಸಿದ್ಧತೆ ನಡೆಸಿದೆ. ಹಾಗೆಯೇ ಬಾಂಗ್ಲಾದಲ್ಲಿ ತುರ್ತು ಪರಿಸ್ಥಿತಿಯಿಂದ ಬಾಂಗ್ಲಾದ ಢಾಕಾಕ್ಕೆ ತೆರಳುವ ವಿಮಾನ ಹಾಗೂ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Rakesh Adiga: ನಾನು ಮಿಡಲ್ ಕ್ಲಾಸ್ ಹುಡುಗ ಮರ್ಯಾದೆ ಉಳಿಸಿ!
Thekkatte: ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ ಗೋ ಕಳವು ಪ್ರಕರಣ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.