Bantwal ಬಿ.ಸಿ.ರೋಡು: ಅಕ್ರಮ ಮರಳು ಸಾಗಾಟ ವಶ
Team Udayavani, May 12, 2024, 10:02 PM IST
ಬಂಟ್ವಾಳ: ಬಿ.ಸಿ.ರೋಡಿನ ಸರ್ಕಲ್ ಬಳಿ ಮೇ 11ರ ಬೆಳಗ್ಗೆ ಬಂಟ್ವಾಳ ನಗರ ಪೊಲೀಸರು 2 ಟಿಪ್ಪರ್ ಲಾರಿಗಳನ್ನು ತಪಾಸಣೆ ನಡೆಸಿದಾಗ ಅಕ್ರಮ ಮರಳು ಸಾಗಿಸುತ್ತಿರುವುದು ಪತ್ತೆಯಾಗಿದ್ದು, ಪೊಲೀಸರು ಮರಳು ಸಹಿತ ಲಾರಿಗಳನ್ನು ವಶಪಡಿಸಿಕೊಂಡು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಲಾರಿ ಚಾಲಕರಾದ ಪುಣಚ ಗ್ರಾಮ ನಿವಾಸಿ ವಿಶ್ವಾಸ್ ಎಚ್. ಹಾಗೂ ವಿಟ್ಲ ಕಸಬಾ ಗ್ರಾಮ ನಿವಾಸಿ ಮುಹಮ್ಮದ್ ರಿಯಾಝ್ ಆರೋಪಿಗಳಾಗಿದ್ದಾರೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಆಂಜನೇಯ ರೆಡ್ಡಿ ಅವರು ಲಾರಿಗಳನ್ನು ತಡೆದು ಚಾಲಕರಲ್ಲಿ ವಿಚಾರಿಸಿದಾಗ ಯಾವುದೇ ಪರವಾನಿಗೆ ಇಲ್ಲದೆ ವಳಚ್ಚಿಲ್‌ನ ನೇತ್ರಾವತಿ ನದಿಯಿಂದ ಅಕ್ರಮ ಮರಳು ಸಾಗಾಟ ನಡೆಸಿಕೊಂಡಿರುವುದಾಗಿ ಒಪ್ಪಿಕೊಂಡಿದ್ದಾರೆ.
ಪೊಲೀಸರು ಮರಳು ಸಹಿತ 2 ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ.
ಅಕ್ರಮ ಮರಳು ಸಾಗಾಟ; ದಾಳಿ
ಸುಳ್ಯ: ಕುಮಾರಧಾರ ನದಿಯಿಂದ ಅಕ್ರಮವಾಗಿ ಮರಳು ಕಳ್ಳತನ ಮಾಡಿ ಸಾಗಾಟ ನಡೆಸುತ್ತಿದ್ದ ವೇಳೆ ಬೆಳ್ಳಾರೆ ಪೊಲೀಸರು ದಾಳಿ ನಡೆಸಿ ಮರಳು ಸಾಗಾಟಕ್ಕೆ ಬಳಸುತ್ತಿದ್ದ ಟಿಪ್ಪರ್ ವಾಹನಗಳನ್ನು ಹಾಗೂ ಟಿಪ್ಪರ್‌ನಲ್ಲಿದ್ದ ಅಪಾರ ಮರಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಳ್ಳಾರೆ ಪೋಲೀಸ್ ಠಾಣಾ ವ್ಯಾಪ್ತಿಯ ಕಡಬ ತಾಲೂಕಿನ ಕುದ್ಮಾರು ಗ್ರಾಮದ ನೂಜಿ ಎಂಬಲ್ಲಿಂದ ಕುಮಾರಧಾರ ನದಿಯಿಂದ ಅಕ್ರಮವಾಗಿ ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿರುವ ಖಚಿತ ಮಾಹಿತಿಯಂತೆ ಮೇ 8ರಂದು ದಾಳಿ ಮಾಡಲಾಗಿದೆ.
ದಾಳಿ ವೇಳೆ ಟಿಪ್ಪರ್, ಹಿಟಾಚಿ ಚಾಲಕರು ಪರಾರಿಯಾಗಿದ್ದಾರೆ. ಅಕ್ರಮವಾಗಿ ಮರಳು ಸಾಗಾಟಕ್ಕೆ ಬಳಸಿದ ಹಲವು ಟಿಪ್ಪರ್ ವಾಹನ, ಹಿಟಾಚಿ, ಹಾಗೂ ಟಿಪ್ಪರ್‌ನಲ್ಲಿದ್ದ ಮರಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಆರು ಪ್ರತ್ಯೇಕ ಪ್ರಕರಣಗಳು ಬೆಳ್ಳಾರೆ ಠಾಣೆಯಲ್ಲಿ ದಾಖಲಾಗಿದೆ. ಚೆನ್ನಪ್ಪ ಗೌಡ ಮತ್ತು ದಿನೇಶ್ ಎಂ. ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.