Bantwal:ಅಡ್ಡೂರು ಸೇತುವೆಯಲ್ಲಿ ಬಸ್ ಸಂಚಾರಕ್ಕೆ ಆಗ್ರಹ; ವರದಿ ಬಳಿಕ ನಿರ್ಧಾರ: ಸ್ಪಷ್ಟನೆ
Team Udayavani, Aug 20, 2024, 11:56 PM IST
ಬಂಟ್ವಾಳ: ಘನ ವಾಹನ ಸಂಚಾರ ನಿಷೇಧಿಸಲ್ಪಟ್ಟಿರುವ ಪೊಳಲಿ ಸಮೀಪದ ಅಡ್ಡೂರು ಸೇತುವೆಯಲ್ಲಿ ಬಸ್ ಸಂಚಾರಕ್ಕೆ ಅವಕಾಶ ನೀಡಬೇಕೆಂಬ ಒತ್ತಾಯಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಸೇತುವೆ ಪರಿಶೀಲನ ಯಂತ್ರ (ಬ್ರಿಡ್ಜ್ ಇನ್‌ಸ್ಪೆಕ್ಷನ್ ಮೆಷಿನ್)ಆಗಮಿಸಿ ವರದಿ ನೀಡುವವರೆಗೆ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ. ಈ ನಿರ್ಧಾರಕ್ಕೆ ಸಾರ್ವಜನಿಕರು ಸಹಕಾರ ನೀಡುವಂತೆ ಮಂಗಳವಾರ ಸಂಜೆ ಅಡೂxರಿಗೆ ಭೇಟಿ ನೀಡಿದ ಅಧಿಕಾರಿಗಳ ತಂಡ ಸ್ಪಷ್ಟಪಡಿಸಿದೆ.
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ಆಯುಕ್ತ ಅನುಪಮ ಅಗರ್‌ವಾಲ್, ಸಹಾಯಕ ಕಮೀಷನರ್ ಹರ್ಷವರ್ಧನ ಪಿ.ಜೆ. ಅವರು ಸ್ಥಳೀಯ ಗ್ರಾ. ಪಂ. ಜನಪ್ರತಿನಿಧಿಗಳು, ಮಾಜಿ ಜನಪ್ರತಿನಿಧಿಗಳು ಸೇರಿದಂತೆ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ಬಸ್‌ಗಳು ಲಘು ವಾಹನವಾಗಿರುವುದರಿಂದ ಸಂಚಾರಕ್ಕೆ ಅವಕಾಶ ನೀಡಬೇಕು ಎಂದು ತಿಳಿಸಿದರು.
ಈ ವೇಳೆ ಅಧಿಕಾರಿಗಳು ಮಾತನಾಡಿ, ಪ್ರಸ್ತುತ 2.75 ಮೀ. ಎತ್ತರದವರೆಗೆ ವಾಹನ ಸಂಚಾರಕ್ಕೆ ಅವಕಾಶವಿದ್ದು, ಬಸ್ಸಿಗೆ ಬೇಕಾಗಿ 4.50 ಮೀ.ಗೆ ಏರಿಸಬೇಕಾಗುತ್ತದೆ. ಆಗ ಲಾರಿ ಸೇರಿದಂತೆ ಇತರ ಘನ ವಾಹನಗಳು ಕೂಡ ಸಂಚರಿಸುತ್ತದೆ. ಹಗಲು ಹೊತ್ತಿನಲ್ಲಿ ಕಾವಲು ಇದ್ದರೂ, ರಾತ್ರಿ ಕಾವಲು ಸಾಧ್ಯವಿಲ್ಲ ಎಂದರು.
ಈ ಭಾಗದಲ್ಲಿ ಅಕ್ರಮ ಮರಳುಗಾರಿಕೆ ನಡೆಯುವುದು ಗಮನಕ್ಕೆ ಬಂದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಸೇತುವೆ ಪರಿಶೀಲನ ಯಂತ್ರ ಬಂದು ವರದಿ ನೀಡಿದ ಬಳಿಕ ಜಿಲ್ಲಾಡಳಿತ ನಿರ್ಧಾರ ಕೈಗೊಳ್ಳುತ್ತದೆ ಎಂದರು. ದ.ಕ. ಡಿಸಿ ಮುಲ್ಲೈ ಮುಗಿಲನ್ ಆಗಮಿಸುತ್ತಾರೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಸಾರ್ವಜನಿಕರು ಸೇರಿದ್ದರು.
ಆ. 26: ಪರಿಶೀಲನ ಯಂತ್ರ ಆಗಮನ
ಸೇತುವೆ ಸಾಮರ್ಥ್ಯ ಪರಿಶೀಲನ ಯಂತ್ರವು ಆ. 26ರಂದು ಬೆಂಗಳೂರಿನಿಂದ ದ.ಕ.ಜಿಲ್ಲೆಗೆ ಆಗಮಿಸಿ ಇಲ್ಲಿನ ಸೇತುವೆಗಳ ಪರಿಶೀಲನ ಕಾರ್ಯ ಮಾಡಲಿದೆ. ಸುಮಾರು ಒಂದು ವಾರಗಳ ಕಾಲ ಜಿಲ್ಲೆಯಲ್ಲಿದ್ದು, ಅಪಾಯಕಾರಿಯಾಗಿರುವ ಎಲ್ಲ ಸೇತುವೆಗಳನ್ನೂ ಪರಿಶೀಲಿಸಲಿದೆ. ಸಾಮರ್ಥ್ಯ ಕಳೆದುಕೊಂಡಿರುವ ಸೇತುವೆಗಳನ್ನು ದುರಸ್ತಿ ಮಾಡಬಹುದೇ ಅಥವಾ ಹೊಸ ನಿರ್ಮಾಣ ಬೇಕೇ ಎಂಬುದರ ಕುರಿತು ವರದಿ ನೀಡಲಿದೆ. ಅದರ ಬಳಿಕ ಪ್ರಸ್ತಾವನೆ ಕಳುಹಿಸಿ ಅನುಮೋದನೆ ಪಡೆದು ಕಾಮಗಾರಿ ನಡೆಯಲಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.