ಬಂಟ್ವಾಳ: ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ವಿದ್ಯಾರ್ಥಿಯ ರಕ್ಷಣೆ
Team Udayavani, Aug 9, 2022, 6:00 PM IST
ಬಂಟ್ವಾಳ: ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದು ವಿದ್ಯಾರ್ಥಿಯೊಬ್ಬ ನೀರು ಪಾಲಾಗಿದ್ದು, ಬಳಿಕ ಸಾರ್ವಜನಿಕರು ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ ಘಟನೆ ಬರಿಮಾರು ಗ್ರಾಮದ ಕಾಗೆಕಾನ ಎಂಬಲ್ಲಿ ನಡೆದಿದೆ.
ಬರಿಮಾರ್ ಗ್ರಾಮದ ಪಾಪೆತ್ತಿಮಾರು ನಿವಾಸಿ ರಕ್ಷಣ್(16) ನೀರಿಗೆ ಬಿದ್ದಿದ್ದ ವಿದ್ಯಾರ್ಥಿ.
ಸ್ಥಳೀಯ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು, ಕಾಲೇಜಿಗೆ ರಜೆ ಇದ್ದ ಹಿನ್ನೆಲೆಯಲ್ಲಿ ನೇತ್ರಾವತಿ ನದಿ ಬಳಿಗೆ ಹೋಗಿದ್ದಾಗ ಈ ಘಟನೆ ಸಂಭವಿಸಿದೆ. ಬಳಿಕ ಸ್ಥಳೀಯರು ಮತ್ತು ಅಗ್ನಿಶಾಮಕದಳವರು ವಿದ್ಯಾರ್ಥಿಯನ್ನು ಕಾರ್ಯಾಚರಣೆ ನಡೆಸಿ, ಆಂಬ್ಯುಲೆನ್ಸ್ ಮೂಲಕ ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ತುಂಬೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ: ಆರ್ ಜೆಡಿ ಜತೆ ಸಖ್ಯ- ನಿತೀಶ್ ಬಿಹಾರದ ಜನತೆಗೆ ದ್ರೋಹ ಎಸಗಿದ್ದಾರೆ: ಬಿಜೆಪಿ ಆಕ್ರೋಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.