ಅಭಿವೃದ್ಧಿ ವಿಚಾರದಲ್ಲಿ ನಾನು ಹೆದರೋ ಮಗ ಅಲ್ಲ : ಸರಕಾರದ ವಿರುದ್ಧ ಮತ್ತೆ ಗುಡುಗಿದ ಯತ್ನಾಳ್
Team Udayavani, Jan 6, 2021, 2:24 PM IST
ಬೆಂಗಳೂರು : ಅಭಿವೃದ್ಧಿ ವಿಚಾರವಾಗಿ ಮಾತನಾಡಲು ಹೆದರುವ ಮಗ ನಾನಲ್ಲ ಎಂದು ಸರಕಾರದ ವಿರುದ್ಧ ರೆಬೆಲ್ ಶಾಸಕ ಯತ್ನಾಳ್ ಗುಡುಗಿದ್ದಾರೆ.
ವಿಧಾನ ಸೌಧದಲ್ಲಿ ಮಾತನಾಡಿದ ಅವರು ನಾನು ಮೊನ್ನೆ ಸಭೆಯಲ್ಲಿ ಮಾತಾಡಿದ್ದು ನಿಜ ಅಭಿವೃದ್ಧಿ ಬಗ್ಗೆ ನಾನು ಮಾತಾಡಿದ್ದೆ ಹಾಗಾಗಿ ನನಗೆ ಹಿಂಜರಿಕೆ ಇಲ್ಲ, ನಾನು ಹೆದರೋ ಮಗ ಅಲ್ಲ, ಯಾವಾಗ ಬಾಣ ಬಿಡಬೇಕು, ಯಾವಾಗ ಮೌನವಾಗಿರಬೇಕು ಎಂಬುದು ನನಗೆ ಗೊತ್ತಿದೆ ಮೊನ್ನೆ ಕೂಡ ಒಬ್ಬನೇ ಗಲಾಟೆ ಮಾಡಿದ್ದು ಉಳಿದ ಶಾಸಕರು ಎಲ್ಲರೂ ಸುಮ್ಮನಿದ್ದರು ಎಂದರು ಅಲ್ಲದೆ ಹಾದಿ ಬೀದಿಲಿ ಕೆಲವರು ಹೇಳಿಕೆ ಕೊಡುತಿದ್ದಾರಲ್ಲಾ ಯಡಿಯೂರಪ್ಪ ಸಭೆಯಲ್ಲಿ ಒಬ್ಬರೇ ಶಾಸಕರು ಗಲಾಟೆ ಮಾಡಿದ್ದು ಅಂತ ಹಾಗಾಗಿ ಕಾರಜೋಳ ಹೇಳಿದ್ದು ಸತ್ಯ ಇದೆ ಅದರಲ್ಲಿ ಯಾವುದೇ ಸಂದೇಹ ಬೇಡ ಎಂದರು.
ಯಡಿಯೂರಪ್ಪನವರ ಮನೆಗೆ ನಾನು ಮಂತ್ರಿ ಸಲುವಾಗಿ ಎಂದೂ ಹೋಗಿಲ್ಲ ಬದಲಾಗಿ ಜನರ ಭಾವನೆಗಳನ್ನು ಹೇಳುವ ಕೆಲಸ ಮಾಡಿದ್ದೇನೆ ನಾನು ಯಾವುದಕ್ಕೂ ಅಂಜುವ ಮಗ ಅಲ್ಲ ನಾನು ಉತ್ತರ ಕರ್ನಾಟಕದವನು, ನಾನು ಕ್ಷಮೆ ಯಾಚಿಸ್ತೇನೆ ಅಂತ ಹೇಳೋನೇ ಅಲ್ಲ, ನನ್ನ ಮಾತನ್ನು ಮಾಧ್ಯಮದವರು ತಿರುಚಿದ್ದಾರೆ ಅಂತ ಹೇಳೋನೂ ನಾನಲ್ಲ ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ನಾನು ಮಾತನಾಡುತ್ತೇನೆ ಜನಪರ ವಿಚಾರಗಳನ್ನೇ ನಾನು ಮಾತನಾಡಿದ್ದೇನೆ ಎಂದು ಹೇಳಿದರು.
ಇದನ್ನೂ ಓದಿ:ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ
ಸರ್ಕಾರ ತಪ್ಪು ಮಾಡಿದಾಗ ನಾನು ಎಚ್ಚರಿಸಿದ್ದೇನೆ, ಅದು ಪಕ್ಷ ವಿರೋಧಿ ಕೆಲಸ ಅಲ್ಲ, ಅಭಿವೃದ್ಧಿ ಪರ ನನ್ನ ಧ್ವನಿ ಅದನ್ನು ಯಾರೂ ನಿಲ್ಲಿಸಲು ಸಾಧ್ಯವಿಲ್ಲ, ನಾನು ಮಾತನಾಡುವಾಗ ಯಾರೂ ಖಂಡಿಸಿಲ್ಲ ಒಬ್ಬರೇ ಒಬ್ಬರು ಗಲಾಟೆ ಮಾಡಿದ್ರು ಬಿಟ್ಟರೆ ಬೇರೆ ಯಾರೂ ನನಗೆ ವಿರೋಧ ಮಾಡಲಿಲ್ಲ ಅಂದರೆ ಉಳಿದ ಶಾಸಕರಿಗೂ ನಾನು ಹೇಳಿದ್ದು ಸಹಮತ ಇದೆ ಅಂತ ಅರ್ಥ ಅಲ್ಲವೇ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Putin Apologizes: ಅಜರ್‌ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
Udupi; ಗೀತಾರ್ಥ ಚಿಂತನೆ 139: ನಿರಂತರಾಭ್ಯಾಸದಿಂದ ಅಭಿಮಾನತ್ಯಾಗ ಸಾಧ್ಯ
Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!
Jagjit Singh Dallewal: ರೈತ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲು ಡಿ.31ರ ಗಡುವು
Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.