ಮಾ.15ಕ್ಕೆ ಪಂಚಮಸಾಲಿ ಹೋರಾಟದ ರೂಪುರೇಷೆ ಬಗ್ಗೆ ತೀರ್ಮಾನ :ಬಸವ ಜಯಮೃತ್ಯುಂಜಯ ಸ್ವಾಮೀಜಿ
Team Udayavani, Mar 12, 2021, 6:38 PM IST
ಬೆಂಗಳೂರು : ಮಾ.15ರಂದು ಸೋಮವಾರ ಪಂಚಮಸಾಲಿ ಸಮುದಾಯದ ರಾಷ್ಟ್ರೀಯ ಘಟಕ, ರಾಜ್ಯ, ಜಿಲ್ಲಾ, ತಾಲೂಕು, ನಗರ, ಹೋಬಳಿ ಘಟಕದ ಪದಾಧಿಕಾರಿಗಳು ಬೆಂಗಳೂರಿಗೆ ಆಗಮಿಸಲಿದ್ದಾರೆ. ಅಂದು ಮುಂದಿನ ಹೋರಾಟದ ರೂಪುರೇಷೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.
ರಾಜ್ಯ ಸರ್ಕಾರದಿಂದ ಈವರೆಗೂ, ಪಂಚಮಸಾಲಿ ಸಮುದಾಯಕ್ಕೆ ಸ್ಪಷ್ಟ ನಿರ್ಧಾರ ತಲುಪದ ಹಿನ್ನೆಲೆಯಲ್ಲಿ 2ಎ ಮೀಸಲಾತಿಗೆ ಆಗ್ರಹಿಸಿ, ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರವೂ ಮುಂದುವರಿದ ಧರಣಿ ಸತ್ಯಾಗ್ರಹವನ್ನುದ್ದೇಶಿಸಿ ಅವರು ಮಾತನಾಡಿದರು.
ಮಾ.15 ರಂದು ಅಧಿಕೃತವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ, ಈ ಬಗ್ಗೆ ಸ್ಪಷ್ಟ ಉತ್ತರ ನೀಡಬೇಕು. ಇದರ ಹೊರತಾಗಿ, ಬೇರೆ ಯಾವ ಸಚಿವರು ಸಹ ಅವರ ಪರವಾಗಿ ಉತ್ತರ ಕೊಟ್ಟರೂ ನಾವು ಒಪ್ಪುವುದಿಲ್ಲ. ಮಾ.15ರವರೆಗೂ ನಮ್ಮ ಈ ಧರಣಿ ಸತ್ಯಾಗ್ರಹ ಮುಂದುವರಿಯಲಿದೆ ಎಂದು ಸರ್ಕಾರಕ್ಕೆ ಎಚ್ಚರಿಸಿದರು.
ಮಹಾ ಶಿವರಾತ್ರಿ ಪ್ರಯುಕ್ತ ಸಮುದಾಯದ ಹಲವರು ತಮ್ಮ ಊರುಗಳಿಗೆ ತೆರಳಿದ್ದಾರೆ. ಅವರೆಲ್ಲರೂ ಮರಳಿ ಬೆಂಗಳೂರಿಗೆ ಬರುತ್ತಾರೆ. ಬಳಿಕ ಸೋಮವಾರದವರೆಗೂ ಮುಂದುವರಿಯುವ ಹೋರಾಟದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಶಿವಾನುಭವ ಮಂಟಪ:
ಸ್ವತಂತ್ರ ಉದ್ಯಾನದಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟ 20ನೇ ದಿನ ಪೂರೈಸಿದೆ. ಮಹಾ ಶಿವರಾತ್ರಿ ಪ್ರಯುಕ್ತ ಗುರುವಾರ ರಾತ್ರಿ ಹಳೆ ಸೆಂಟರ್ ಜೈಲು, ಶಿವಾನುಭವ ಮಂಟಪವಾಗಿ ಪರಿವರ್ತನೆಯಾಗಿತ್ತು. ಅಹೋರಾತ್ರಿ ಇಷ್ಟಲಿಂಗ ಪೂಜೆ, ಭಜನೆ ಹಾಗೂ ಇನ್ನಿತರ ಸಂಗೀತ ಕಾರ್ಯಕ್ರಮ ಮೂಲಕ ಜಾಗರಣೆ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್, ಪಂಚಸೇನೆ ರಾಜ್ಯ ಅಧ್ಯಕ್ಷ ಡಾ.ಬಸನಗೌಡ ಪಾಟೀಲ, ಯುವ ಘಟಕದ ಪ್ರಧಾನ ಕಾರ್ಯದರ್ಶಿ ಶಂಕರಗೌಡ ಬಿರಾದಾರ, ಮಲ್ಲನಗೌಡ ಎಸ್.ಬಿರಾದರ್, ರಾಜ್ಯ ಯುವ ಘಟಕದ ಕಾರ್ಯಾಧ್ಯಕ್ಷ ವಿರಾಜ್ ಪಾಟೀಲ್, ಮುಖಂಡ ಮಹಾಂತೇಶ್, ವಿಜಯ್, ಸಂಜು ಬಿರಾದರ್ ಮತ್ತಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.