ಮಾಫಿಯಾದಲ್ಲಿ ಇರುವವರ ಜತೆ ಸ್ನೇಹ ಬೇಡ : ಐಪಿಎಸ್‌ ಅಧಿಕಾರಿಗಳ ಸಮಾವೇಶದಲ್ಲಿ ಸಿಎಂ


Team Udayavani, Sep 6, 2021, 6:32 PM IST

ಕ್ರಿಮಿನಲ್‌ಗ‌ಳ ಜತೆ ಸ್ನೇಹ ಬೇಡ : ಐಪಿಎಸ್‌ ಅಧಿಕಾರಿಗಳ ಸಮಾವೇಶದಲ್ಲಿ ಸಿಎಂ

ಬೆಂಗಳೂರು : “ಭೂ ವಿವಾದ ಮತ್ತು ಮರಳು ಮಾಫಿಯಾದಲ್ಲಿ ಸಕ್ರಿಯರಾಗಿರುವವರಿಗೆ ಸಿಂಹಸ್ವಪ್ನ ಆಗಿರಬೇಕೇ ಹೊರತು, ಅವರ ಜತೆ ಸ್ನೇಹ ಸಂಬಂಧಗಳನ್ನು ಇಟ್ಟುಕೊಳ್ಳುವುದು ಸರಿಯಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಾಕೀತು ಮಾಡಿದರು.

ರಾಜ್ಯ ಪೊಲೀಸ್‌ ಮಹಾನಿರ್ದೇಶಕರ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಹಿರಿಯ ಐಪಿಎಸ್‌ ಅಧಿಕಾರಿಗಳ ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಂಗಳೂರು ಸುತ್ತ ಹಲವು ಭೂ ವಿವಾದಗಳಿದ್ದು, ಸಿವಿಲ್‌ ವಿಚಾರಗಳಲ್ಲಿ ಸಾಮಾನ್ಯವಾಗಿ ಪೊಲೀಸರು ಕೈಹಾಕಬಾರದು. ಆದರೆ, ಈ ವ್ಯವಹಾರಗಳಲ್ಲಿ ಪೊಲೀಸರ ಮಧ್ಯಪ್ರವೇಶದ ಬಗ್ಗೆ ದೂರುಗಳು ಕೇಳಿಬಂದಿವೆ. ಇದರಲ್ಲಿ ಅನಗತ್ಯ ಮೂಗು ತೂರಿಸಬಾರದು. ಜತೆಗೆ ನದಿಪಾತ್ರದಿಂದ ಅಕ್ರಮವಾಗಿ ಮರಳು ಸಾಗಿಸುವವರೊಂದಿಗೂ ಕೈಜೋಡಿಸಬಾರದು ಎಂದರು.

ಕಾನೂನು-ಸುವ್ಯವಸ್ಥೆ ಸಂಪೂರ್ಣ ಹತೋಟಿಯಲ್ಲಿರಬೇಕು. ಯಾವುದೇ ಪ್ರಕರಣಗಳಲ್ಲಿ ನಿಷ್ಪಕ್ಷಪಾತ ತನಿಖೆಗಳಾಗಬೇಕು. ಕರ್ನಾಟಕ ಪೊಲೀಸರು ಅತ್ಯಂತ ದಕ್ಷವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಮಧ್ಯೆ ಡಾರ್ಕ್‌ ವೆಬ್‌ ಭೇದಿಸುವುದು, ಸೈಬರ್‌ ಅಪರಾಧ ತಡೆ ಸಹಿತ ಹೊಸ ಸವಾಲುಗಳು ಮುಂದಿವೆ. ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಸಮರ್ಥವಾಗಿ ಎದುರಿಸಬೇಕಿದೆ. ಠಾಣಾ ಹಂತದಲ್ಲಿ “ಜನ ಸ್ನೇಹಿ’ ವ್ಯವಸ್ಥೆಯ ಪರಿಣಾಮಕಾರಿ ಜಾರಿಗೆ ಒತ್ತು ನೀಡಬೇಕು ಎಂದರು.

ಇದನ್ನೂ ಓದಿ :ಭಾರತದ ಒಲಂಪಿಕ್ಸ್‌ ಸಾಧನೆ ಜಗತ್ತಿನ ಕಣ್ಣು ತೆರೆಸಿದೆ : ಸಚಿವ ಸುನೀಲ್‌ ಕುಮಾರ್‌

ಪ್ರತ್ಯೇಕ ಡ್ಯಾಶ್‌ ಬೋರ್ಡ್‌ಗೆ ಸೂಚನೆ
ಅಪರಾಧ ಪ್ರಕರಣಗಳ ನಿಯಮಿತ ನಿರ್ವಹಣೆ, ವಿಶ್ಲೇಷಣೆ, ತಪ್ಪಿತಸ್ಥರಿಗೆ ಶಿಕ್ಷೆ ಒದಗಿಸುವಲ್ಲಿ ಯಾವುದೇ ರೀತಿ ಕಾನೂನು ಪ್ರಕ್ರಿಯೆಯಲ್ಲಿ ಲೋಪ ಉಂಟಾಗದಂತೆ ಎಚ್ಚರ ವಹಿಸಲು ಡಿಜಿಪಿಯಿಂದ ಹಿಡಿದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳವರೆಗೆ ಅಧಿಕಾರಿಗಳು ಪ್ರತ್ಯೇಕ ಡ್ಯಾಶ್‌ ಬೋರ್ಡ್‌ ಹೊಂದಬೇಕು. ಇದರಲ್ಲಿ ಅಪರಾಧ ಕೃತ್ಯಗಳ ಮಾಹಿತಿಯನ್ನು ಕ್ರೋಡೀಕರಿಸಿರಬೇಕು ಎಂದು ಸೂಚಿಸಿದರು.

ರಾಜ್ಯದಲ್ಲಿ ಅಪರಾಧ ಪ್ರಕರಣಗಳಲ್ಲಿ ಶಿಕ್ಷಾ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಹಿನ್ನಡೆ ಕಂಡಿದೆ. ಈ ಹಿನ್ನೆಲೆಯಲ್ಲಿ ಡ್ಯಾಶ್‌ಬೋರ್ಡ್‌ ಅನುಕೂಲ ಆಗುತ್ತದೆ ಎಂದು ಅಭಿಪ್ರಾಯಪಟ್ಟ ಮುಖ್ಯಮಂತ್ರಿ, ಅಪರಾಧ ಪ್ರಕರಣಗಳ ಸಂಬಂಧ ತನಿಖೆ ಬಗ್ಗೆ ಪೊಲೀಸ್‌ ಮಹಾನಿರ್ದೇಶಕರು, ಆಯುಕ್ತರು, ಐಜಿಪಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ನಿರಂತರವಾಗಿ ಮೇಲ್ವಿಚಾರಣೆ ನಡೆಸಬೇಕು ಎಂದರು.

ರಾಜ್ಯ ಪೊಲೀಸ್‌ ಇಲಾಖೆಯ ಬಲವರ್ಧನೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಕೆಎಸ್‌ಆರ್‌ಪಿಗೆ ಮತ್ತೂಂದು ಬೆಟಾಲಿಯನ್‌, ಹೊಸದಾಗಿ ಆರು ವಿಧಿ ವಿಜ್ಞಾನ ಪ್ರಯೋಗಾಲಯಗಳ (ಎಫ್ಎಸ್‌ಎಲ್‌) ಸ್ಥಾಪನೆ ಹಾಗೂ ಅಗ್ನಿ ಶಾಮಕ ಮತ್ತು ತುರ್ತು ಸೇವಾ ದಳಕ್ಕೆ ಹೊಸ ಅತ್ಯಾಧುನಿಕ ಉಪಕರಣ ಖರೀದಿಗೆ ಮಂಜೂರಾತಿ ನೀಡಲಾಗಿದೆ. ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳಿಗೆ ಕೇಂದ್ರ ರಕ್ಷಣ ತರಬೇತಿ (ಎನ್‌ಡಿಎ) ಮಟ್ಟದ ತರಬೇತಿಗೆ ಹೊಸ ಕೇಂದ್ರ ಸ್ಥಾಪನೆಗೂ ಕ್ರಮ ಕೈಗೊಳ್ಳಲಾಗಿದೆ. ಆರ್ಥಿಕ ವಂಚನೆಗಳು ಹಾಗೂ ಸೈಬರ್‌ ಕ್ರೈಂ ನಿಯಂತ್ರಣಕ್ಕೆ ಪ್ರತ್ಯೇಕ ತಾಂತ್ರಿಕ ವಿಭಾಗವನ್ನು ರಚಿಸಲಾಗುತ್ತದೆ ಎಂದು ವಿವರಿಸಿದರು.

ಗೃಹ ಸಚಿವ ಆರಗ ಜ್ಞಾನೇಂದ್ರ, ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ ಹಾಗೂ ಪೊಲೀಸ್‌ ಮಹಾ ನಿರ್ದೇಶಕ ಪ್ರವೀಣ್‌ ಸೂದ್‌ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ರಾಜ್ಯ ಪೊಲೀಸ್‌ ಇಲಾಖೆಯ ಕಾಫಿ ಟೇಬಲ್‌ ಬುಕ್‌ ಅನ್ನು ಬಿಡುಗಡೆ ಮಾಡಲಾಯಿತು. ಅಲ್ಲದೆ, ಅಪರಾಧ ಹಿನ್ನೆಲೆವುಳ್ಳ ವ್ಯಕ್ತಿಗಳ ಮುಖ ಚಹರೆ ಗುರುತಿಸುವ ವ್ಯವಸ್ಥೆ (ಫೇಶಿಯಲ್‌ ರೆಕಗ್ನಿಷನ್‌ ಸಿಸ್ಟ್‌ಂ)ಗೆ ಚಾಲನೆ ದೊರೆಯಿತು.

ಟಾಪ್ ನ್ಯೂಸ್

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.