ಉಪ ಚುನಾವಣೆಯಲ್ಲಿ ದಾಖಲೆ ಮತಗಳ ಅಂತರದಿಂದ ಗೆಲ್ಲುತ್ತೇವೆ : ಬಸವರಾಜ ಬೊಮ್ಮಾಯಿ
Team Udayavani, Mar 16, 2021, 8:20 PM IST
ಬೆಂಗಳೂರು: ರಾಜ್ಯದಲ್ಲಿ ಘೋಷಣೆಯಾಗಿರುವ ಒಂದು ಲೋಕಸಭೆ ಹಾಗೂ 2 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ದಾಖಲೆ ಮತಗಳ ಅಂತರದಿಂದ ಜಯ ಗಳಿಸುತ್ತೇವೆ ಎಂಬ ವಿಶ್ವಾಸವನ್ನು ಗೃಹ, ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಭ್ಯರ್ಥಿಗಳ ಆಯ್ಕೆಯನ್ನು ಪಕ್ಷದವರು ಸಮಿತಿಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.
ಕಳೆದ ಬಾರಿ ರಾಜ್ಯದಲ್ಲಿ 15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಜಯ ಗಳಿಸಿದ್ದೆವು. ನಂತರ ರಾಜರಾಜೇಶ್ವರಿನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕೂಡ ಬಿಜೆಪಿ ಅಭರ್ಥಿ ದಾಖಲೆ ಮತಗಳ ಅಂತರದಿಂದ ಜಯ ಗಳಿಸಿದ್ದರು. ಈ ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನಾಯಕತ್ವದಲ್ಲಿ ಬಿಜೆಪಿ ಅಭ್ಯರ್ಥಿಗಳು ದಾಖಲೆ ಮತಗಳ ಅಂತರದಿಂದ ಜಯಗಳಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ :ಹಿಂದೂ ವ್ಯಕ್ತಿಗೆ ಮುಸ್ಲಿಂ ಸಂಪ್ರದಾಯದಲ್ಲಿ ಅಂತ್ಯಸಂಸ್ಕಾರ! ಹೈ ಕೋರ್ಟ್ ಮೆಟ್ಟಿಲೇರಿದ ಪತ್ನಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಬೆಳಗಾವಿ ಲೋಕಸಭೆ ಕ್ಷೇತ್ರದ ಜನತೆ ಈಗಾಗಲೇ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಬೆಳಗಾವಿಯಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಂದರ್ಭದಲ್ಲಿ ಸೇರಿದ್ದ ಅಪಾರ ಜನಸ್ತೋಮವೇ ಇದಕ್ಕೆ ನಿದರ್ಶನ ಎಂದು ಬೊಮ್ಮಾಯಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.