ಮೇಕೆದಾಟು ಯೋಜನೆ ವಿಚಾರದಲ್ಲಿ ಸರ್ಕಾರ ಯಾವುದೇ ಉಲ್ಲಂಘನೆ ಮಾಡಿಲ್ಲ : ಗೃಹ ಸಚಿವ ಬೊಮ್ಮಾಯಿ
Team Udayavani, Jun 18, 2021, 6:24 PM IST
ಬೆಂಗಳೂರು: ಅದು ಮಹದಾಯಿ ಯೋಜನೆಯೇ ಇರಲಿ. ಮೇಕೆದಾಟು ಯೋಜನೆಯೇ ಇರಲಿ. ಯಾವುದೇ ಸಂದರ್ಭದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಹಿಂದೆ ಮುಂದೆ ನೋಡುವುದಿಲ್ಲ. ರಾಜ್ಯದ ನೆಲ ಜಲ ಹಿತರಕ್ಷಣೆಗೆ ಅತ್ಯಂತ ಬದ್ಧತೆಯಿಂದ ಕೆಲಸ ಮಾಡುತ್ತೇವೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು.
ಶುಕ್ರವಾರ ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆಯಲ್ಲಿ ರಾಜ್ಯ ಸರ್ಕಾರ ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿದೆ ಎಂದರು.
ಚೆನ್ನೈನಲ್ಲಿರುವ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಮೇಕೆದಾಟು ಯೋಜನೆಗೆ ಸಂಬಂಧಪಟ್ಟಂತೆ ಸ್ವಯಂಪ್ರೇರಿತವಾಗಿ ಪ್ರಕರಣದ ವಿಚಾರಣೆ ನಡೆಸಿತ್ತು. ನ್ಯಾಯಾಲಯದ ಈ ಕ್ರಮವನ್ನು ನಮ್ಮ ಸರ್ಕಾರ ಪ್ರಶ್ನಿಸಿತ್ತು. ಈ ಪ್ರಕರಣದ ಕುರಿತು ವಿಚಾರಣೆ ನೆನ್ನೆ ನಡೆದಿದೆ. ನಮ್ಮ ಸರ್ಕಾರದ ಪರವಾಗಿ ವಕೀಲರು ಈ ಪ್ರಕರಣದಲ್ಲಿ ಅತ್ಯುತ್ತಮ ರೀತಿಯಲ್ಲಿ ವಾದ ಮಂಡಿಸಿದ್ದಾರೆ ಎಂದು ಅವರು ಹೇಳಿದರು.
ಇದನ್ನೂ ಓದಿ :ಕೋವಿಡ್ ಸೋಂಕಿನ 2ನೇ ಅಲೆಯಿಂದಾಗಿ 2 ಲಕ್ಷ ಕೋಟಿ ರೂ. ಉತ್ಪಾದನಾ ನಷ್ಟ : ಆರ್ ಬಿ ಐ
ಮೇಕೆದಾಟು ಯೋಜನೆಯಲ್ಲಿ ರಾಜ್ಯ ಸರ್ಕಾರ ಯಾವುದೇ ರೀತಿಯ ಉಲ್ಲಂಘನೆಗಳನ್ನು ಮಾಡಿಲ್ಲ. ನಮಗೆ ತೊಂದರೆ ಆಗುವುದಿಲ್ಲ ಎಂಬ ವಿಶ್ವಾಸವಿದೆ.
– ಬಸವರಾಜ್ ಬೊಮ್ಮಾಯಿ, ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?
Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ
CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ
Siddaramaiah; ಕೊಳ್ಳೆ ಹೊಡೆಯುತ್ತಿದ್ದರೂ ನಿಮ್ಮನ್ನು ಮುಟ್ಟಬಾರದಾ: ಎಚ್‌ಡಿಕೆ
Minister K.J. George ಪುತ್ರನ ಅರ್ಜಿ: ಸರಕಾರಕ್ಕೆ ಹೈಕೋರ್ಟ್ ನೋಟಿಸ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.