ಮೂರನೇ ಆಲೆ ಆತಂಕ: ಪರಿಷತ್ ಸಭಾಪತಿ ಹೊರಟ್ಟಿ ಸಲಹೆ
Team Udayavani, May 23, 2021, 10:05 PM IST
ಬೆಂಗಳೂರು: ಕರೊನಾ ಮೂರನೇ ಅಲೆ ಮಕ್ಕಳನ್ನು ಬಾಧಿಸುವ ಸಾಧ್ಯತೆ ಬಗ್ಗೆ ಪರಿಣಿತರು ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ಸರ್ಕಾರ ಅಧ್ಯಯನ ನಡೆಸಿ ಸೂಕ್ತ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸಲಹೆ ನೀಡಿದ್ದಾರೆ.
ಈ ಕುರಿತು ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರಿಗೆ ಪತ್ರ ಬರೆದಿರುವ ಅವರು, ಮೂರನೇ ಆಲೆಯು ಭವಿಷ್ಯದ ವಾರಸುದಾರರಾದ ಮಕ್ಕಳ ಮೇಲೆ ಬೀರಬಹುದ ಪರಿಣಾಮಗಳ ಬಗ್ಗೆ ತಿಳಿದುಕೊಂಡು ಈಗಲೇ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ಮೂರನೇ ಅಲೆಯು ಮಕ್ಕಳ ಮೇಲೆ ಹೆಚ್ಚು ಪ್ರಮಾಣದಲ್ಲಿ ಭಾಧಿಸಬಹುದು ಎಂದು ಹೇಳಿರುವುದು ಭಯದ ವಾತಾವರಣಕ್ಕೆ ಕಾರಣಾಗಿದೆ.ಈಗಾಗಲೇ ಬೇರೆ ಬೇರೆ ದೇಶಗಳಲ್ಲಿ ಎರಡನೇ ಹಾಗೂ ಮೂರನೇ ಅಲೆಯಿಂದ ಸಾವು ನೋವುಗಳು ಸಂಭವಿಸಿವೆ. ಇದು ನಮಗೆ ಪಾಠವಾಗಬೇಕು. ಪ್ರತ್ಯೇಕ ಸಮಿತಿ ರಚಿಸಬೇಕು. ಮಕ್ಕಳ ಮೇಲಿನ ಪರಿಣಾಮಗಳ ಬಗೆಗಿನ ವರದಿಗಳಿಂದ ಪಾಲಕ-ಪೋಷಕರು ಹಾಗೂ ಶಿಕ್ಷಣ ವ್ಯವಸ್ಥೆಯೇ ಭಯ ಭೀತವಾಗಿದೆ ಎಂದು ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ :ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ನ ಮೂಲ ಪತ್ತೆ ಹಚ್ಚಲು ತಜ್ಞರಿಗೆ ಡಿಸಿಎಂ ಸೂಚನೆ
ರಾಜ್ಯ ಸರ್ಕಾರ ಲಾಕ್‌ಡೌನ್ ಜೂ.7 ರವರೆಗೂ ಮುಂದುವರಿಸಿರುವುದು ಸಮಯೋಚಿತವಾಗಿದೆ. ಇತೀ¤ಚೆಗೆ ಬ್ಲಾಕ್ ಫಂಗಸ್ ಮತ್ತು ವೈಟ್ ಫಂಗಸ್ ಸೇರಿ ಹೊಸ ಹೊಸ ಕಾಯಿಲೆಗಳು ಬೆಳಕಿಗೆ ಬರುತ್ತಿವುದರಿಂದ ಪರಿಣಿತರ ವರದಿ ನಿರ್ಲಕ್ಷé ಮಾಡಬಾರದು ಎಂದು ಸಲಹೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.