![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Feb 3, 2023, 2:55 PM IST
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮತ್ತು 2002ರ ಗುಜರಾತ್ ಗಲಭೆ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಸರ್ಕಾರ ನಿಷೇಧ ಹೇರಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಮೂರು ವಾರಗಳಲ್ಲಿ ಈ ವಿಷಯದ ಬಗ್ಗೆ ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸುವಂತೆಯೂ ಉನ್ನತಾಧಿಕಾರಿಗಳು ಕೇಂದ್ರಕ್ಕೆ ಸೂಚಿಸಿರುವ ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ಏಪ್ರಿಲ್‌ನಲ್ಲಿ ವಿಚಾರಣೆಗೆ ಮುಂದೂಡಿದೆ.
ಈ ಹಿಂದೆ ಹಿರಿಯ ಪತ್ರಕರ್ತ ಎನ್ ರಾಮ್, ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಮತ್ತು ವಕೀಲ ಪ್ರಶಾಂತ್ ಭೂಷಣ್ ಸಲ್ಲಿಸಿದ್ದ ಅರ್ಜಿಯನ್ನು ಕೈಗೆತ್ತಿಕೊಳ್ಳಲು ಒಪ್ಪಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಂಎಂ ಸುಂದರೇಶ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ಈ ಆದೇಶವನ್ನು ನೀಡಿತು.
ಎರಡು ಭಾಗಗಳ ಬಿಬಿಸಿ ಸಾಕ್ಷ್ಯಚಿತ್ರವು ‘ಇಂಡಿಯಾ: ದಿ ಮೋದಿ ಕ್ವೆಶ್ಶನ್’ ಎಂಬ ಶೀರ್ಷಿಕೆಯಡಿ ಬಿಡುಗಡೆಯಾದಾಗಿನಿಂದ ಸುದ್ದಿಯಲ್ಲಿದ್ದು,ಇದನ್ನು ಸರಕಾರವು ಪಕ್ಷಪಾತದ “ಪ್ರಚಾರದ ತುಣುಕು” ಎಂದು ತಳ್ಳಿಹಾಕಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.