ರಾಜ್ಯದಲ್ಲಿ ಕೃಷಿಗೆ ಹೆಚ್ಚಿನ ಆದ್ಯತೆ ನೀಡಲು ಬಿ.ಸಿ.ಪಾಟೀಲ್ ಮನವಿ
ದೆಹಲಿಯಲ್ಲಿ ಶೋಭಾ ಕರಂದ್ಲಾಜೆ, ಭಗವಂತ ಕೂಬಾ ಜತೆ ಸಮಾಲೋಚನೆ
Team Udayavani, Aug 10, 2021, 9:15 PM IST
ಬೆಂಗಳೂರು: ರಾಜ್ಯದಲ್ಲಿ ಕೃಷಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಹಾಗೂ ಭಗವಂತ ಖೂಬಾ ಅವರಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಮನವಿ ಮಾಡಿದ್ದಾರೆ.
ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ ಅವರು, ಕೃಷಿ ಚಟುವಟಿಕೆಗಳಿಗೆ ಯೂರಿಯಾ ಸೇರಿದಂತೆ ಅಗತ್ಯ ಪ್ರಮಾಣದ ರಸಗೊಬ್ಬರ ಪೂರೈಕೆ ಮಾಡುವಂತೆ ಕೋರಿದರು.
ರಾಜ್ಯದಲ್ಲಿ ಕಳೆದ ವರ್ಷ ನಿರೀಕ್ಷೆ ಮೀರಿ ಸುಮಾರು 77 ಲಕ್ಷ ಹೆಕ್ಟೇರ್ ದಾಖಲೆಯ ಪ್ರಮಾಣದಷ್ಟು ಬಿತ್ತನೆ ಆಗಿತ್ತು. ಈ ಬಾರಿಯೂ ಕೂಡ ಉತ್ತಮ ಬಿತ್ತನೆಯಾಗಿದ್ದು,ಕೃಷಿ ಚಟುವಟಿಕೆ ಚುರುಕುಪಡೆದಿದೆ. ಈ ಬಾರಿಯೂ ಸಹ ಯಾವುದೇ ರೀತಿಯ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ರಾಜ್ಯದಲ್ಲಿ ಎಣ್ಣೆಕಾಳು ಬೆಳೆಗಳಿಗೆ ಉತ್ತೇಜನ ಮಾಡಲು ಹೆಚ್ಚಿನ ಕಾರ್ಯಕ್ರಮಗಳನ್ನು ನೀಡಬೇಕು.ಹಾಗೂ ಕೃಷಿ ಉತ್ಪನ್ನಗಳ ಹೆಚ್ಚಳಕ್ಕೆ ಹೆಚ್ಚು ಉತ್ತೇಜನ ನೀಡಬೇಕೆಂದು ಕೇಂದ್ರದ ಉಭಯ ಸಚಿವರಲ್ಲಿ ಮನವಿ ಮಾಡಿದರು.
ಇದನ್ನೂ ಓದಿ:ಕೋವಿಡ್: ರಾಜ್ಯದಲ್ಲಿಂದು 1338 ಪಾಸಿಟಿವ್ ಪ್ರಕರಣ: 31 ಜನರು ಸಾವು
ಕಳೆದ ಬಾರಿಯಂತೆ ಈ ಬಾರಿಯೂ 10 ಸಾವಿರ ಮಿನಿಕಿಟ್ ಗಳನ್ನು ರಾಜ್ಯ ಬೀಜ ನಿಗಮ ಮೂಲಕ ನೀಡಲು ಕೇಂದ್ರ ಸರ್ಕಾರ ಹಂಚಿಕೆ ಮಾಡುವಂತೆ ಇದೇ ಸಂದರ್ಭದಲ್ಲಿ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ಬರಗಾಲ ಸಂದರ್ಭದಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಬಹಳ ಉಪಯುಕ್ತವಾಗಿದ್ದು, ಇದರಿಂದ ರೈತರಿಗೆ ಸಾಕಷ್ಟು ಅನುಕೂಲವಾಗಿದೆ. ಹೀಗಾಗಿ ಯೋಜನೆಯಡಿ ಜಲಾನಯನ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವಂತೆ ಮನವರಿಕೆ ಮಾಡಿಕೊಟ್ಟರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜಕುಮಾರ ಕತ್ರಿ, ಅಪರ ಕೃಷಿ ನಿರ್ದೇಶಕ(ಸಾವಯವ ಕೃಷಿ) ವೆಂಟಕರಮಣರೆಡ್ಡಿ, ಸಾವಯವ ಮಿಷನ್ ಅಧ್ಯಕ್ಷ ಆನಂದ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.