ಜನರ ಖಾಸಗಿತನದ ಸುರಕ್ಷತೆ ಬಗ್ಗೆ ಇರಲಿ ಕಾಳಜಿ


Team Udayavani, Jun 13, 2023, 6:10 AM IST

mobile

ಟೆಲಿಗ್ರಾಂ ಸಾಮಾಜಿಕ ಜಾಲತಾಣದ ಮೂಲಕ ದೇಶದ ಕೆಲವು ರಾಜಕಾರಣಿಗಳು, ಪತ್ರಕರ್ತರ ಖಾಸಗಿ ಮಾಹಿತಿಗಳು ಸೋರಿಕೆಯಾಗಿದ್ದು, ಇದು ಜನರ ಖಾಸಗಿತನದ ಬಗ್ಗೆ ಆತಂಕ ಮೂಡಿಸಿದ್ದವು. ಅದರಲ್ಲೂ ಕೊವಿನ್‌ ಮೂಲಕ ಯಾರ್ಯಾರು ಲಸಿಕೆ ಪಡೆದಿರುವ ಎಲ್ಲರ ಮಾಹಿತಿಗಳು ಇದೇ ರೀತಿ ಜಾಹೀರು ಆಗಬಹುದು ಎಂಬ ಆತಂಕವೂ ಸೃಷ್ಟಿಯಾಗಿತ್ತು.

ಅಂದರೆ ಸೋಮವಾರ ಬೆಳಗ್ಗೆ ರಾಜ್ಯಸಭಾ ಉಪ ಸಭಾಪತಿ ಹರಿವಂಶ ನಾರಾಯಣ್‌ ಸಿಂಗ್‌, ಆರೋಗ್ಯ ಕಾರ್ಯದರ್ಶಿ ರಾಜೇಶ್‌ ಭೂಷಣ್‌, ಕಾಂಗ್ರೆಸ್‌ ನಾಯಕರಾದ ಪಿ.ಚಿದಂಬರಂ, ಜೈರಾಮ್‌ ರಮೇಶ್‌, ಅಭಿಷೇಕ್‌ ಮನು ಸಿಂಘ್ವಿ, ಕೆ.ಸಿ.ವೇಣುಗೋಪಾಲ್‌, ತೃಣಮೂಲ ಕಾಂಗ್ರೆಸ್‌ನ ಡೆರೇಕ್‌ ಓಬ್ರಿಯಾನ್‌, ಸುಷ್ಮಿತಾ ದೇವ್‌, ಶಿವಸೇನೆ ಉದ್ಧವ್‌ ಬಣದ ಸಂಜಯ್‌ ರೌತ್‌, ಬಿಜೆಪಿಯ ಅಣ್ಣಾಮಲೈ, ಕೇಂದ್ರ ಸಚಿವೆ ಮೀನಾಕ್ಷಿ ಲೇಖೀ, ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಸಹಿತ ಹಲವರ ಮಾಹಿತಿಗಳು ಸೋರಿಕೆಯಾಗಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗಿತ್ತು.

ಇದರ ಬೆನ್ನಲ್ಲೇ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದ್ದು, ಕೊವಿನ್‌ನ ಎಲ್ಲ ಮಾಹಿತಿ ಸುಭದ್ರವಾಗಿದ್ದು, ಅದರಿಂದ ಮಾಹಿತಿ ಕದಿಯಲು ಸಾಧ್ಯವೇ ಇಲ್ಲ ಎಂದು ಹೇಳಿದೆ. ಅಲ್ಲದೇ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯವೂ ಸ್ಪಷ್ಟನೆ ನೀಡಿದ್ದು, ಇದು ಕೊವಿನ್‌ ಕಡೆಯಿಂದ ಆಗಿರುವ ಮಾಹಿತಿ ಸೋರಿಕೆಯಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಹೀಗಾಗಿ ಮೂರನೇ ವೇದಿಕೆ ಮೂಲಕ ಈ ಮಾಹಿತಿ ಹಂಚಿಕೆಯಾಗಿರಬಹುದು ಎಂಬ ಅನುಮಾನದ ಹಿನ್ನೆಲೆಯಲ್ಲಿ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ತನಿಖೆಗೆ ಆದೇಶ ನೀಡಿದೆ.

ಏನೇ ಆಗಲಿ ಇದು ಕೊವಿನ್‌ ಮೂಲಕ ಆಗದೇ, ಬೇರೊಂದು ವೇದಿಕೆ ಮೂಲಕವೇ ಆಗಿದೆ ಎಂದು ಅಂದುಕೊಂಡರೂ, ಖಾಸಗಿತನದ ವಿಚಾರದಲ್ಲಿ ಇದು ಅತ್ಯಂತ ಅಪಾಯಕಾರಿ ಬೆಳವಣಿಗೆ. ಸದ್ಯದ ಪರಿಸ್ಥಿತಿಯಲ್ಲಿ ಸೈಬರ್‌ ಅಪರಾಧಗಳು ಎಗ್ಗಿಲ್ಲದೇ ಬೆಳೆಯುತ್ತಿವೆ. ಅಮಾಯಕ ಜನರು, ತಮ್ಮ ಖಾತೆಯಿಂದ ಲಕ್ಷಾಂತರ ಹಣವನ್ನೂ ಕಳೆದುಕೊಳ್ಳುತ್ತಿದ್ದಾರೆ. ಇಂಥ ಹೊತ್ತಿನಲ್ಲಿ ಅತ್ಯಂತ ಸುರಕ್ಷಿತವಾಗಿ ಇರಬೇಕಾದ ಆಧಾರ್‌ ಸಂಖ್ಯೆಯಂಥ ಮಾಹಿತಿ ಸೋರಿಕೆಯಾಗುವುದು ಎಂದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದೇ ಅರ್ಥ.

ಅದಲ್ಲದೇ ಕೊವಿನ್‌ನಲ್ಲಿ ಸದ್ಯ ಭಾರತದ 100 ಕೋಟಿಗೂ ಹೆಚ್ಚು ಮಂದಿಯ ಆಧಾರ್‌ ಸಂಖ್ಯೆ ಸೇರಿದಂತೆ ಖಾಸಗಿ ಮಾಹಿತಿ ಸಂಗ್ರಹವಾಗಿದೆ. ಒಂದೇ ಕಡೆಯಿಂದ ಈ ಪ್ರಮಾಣದ ಮಾಹಿತಿ ಇರುವುದು ಕೊವಿನ್‌ನಲ್ಲಿ ಮಾತ್ರ. ಇಂಥ ವೇದಿಕೆಗೆ ಹೆಚ್ಚಿನ ಸುರಕ್ಷತೆ ನೀಡುವುದು ಕೇಂದ್ರ ಸರಕಾರದ ಆದ್ಯ ಕರ್ತವ್ಯವಾಗಿದೆ.

ಅಲ್ಲದೆ ಪಾಸ್‌ಪೋರ್ಟ್‌ ಸಂಖ್ಯೆ, ಜನನ ದಿನಾಂಕ, ಆಧಾರ್‌ ಸಂಖ್ಯೆ, ಮೊಬೈಲ್‌ ಸಂಖ್ಯೆಯಂಥ ಮಾಹಿತಿ ಒಟ್ಟಾಗಿ ಸಿಕ್ಕರೆ ಸೈಬರ್‌ ಕಳ್ಳರಿಗೆ ಕಳ್ಳತನ ಮಾಡಲು ಸುಲಭದಾರಿ ಸಿಕ್ಕಂತಾಗುತ್ತದೆ. ಈ ನಿಟ್ಟಿನಲ್ಲಿ ಸದ್ಯ ಟೆಲಿಗ್ರಾಂ ಬಾಟ್‌ ಮೂಲಕ ಸೋರಿಕೆ ಹೇಗಾಯ್ತು? ಇದರ ಹಿಂದಿರುವ ಹ್ಯಾಕರ್‌ ಯಾರು? ಯಾವ ವೇದಿಕೆಯಿಂದ ಈ ಮಾಹಿತಿಗಳು ಕಳವಾಗಿವೆ ಎಂಬ ಬಗ್ಗೆ ಕೇಂದ್ರ ಸರಕಾರ ಆದಷ್ಟು ಬೇಗ ತನಿಖೆ ನಡೆಸಬೇಕು. ಅಲ್ಲದೆ ಎಲ್ಲರ ಮಾಹಿತಿಗಳ ಭದ್ರತೆಗೂ ಪರಮೋತ್ಛ ಆದ್ಯತೆ ನೀಡಬೇಕು.

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Editorial: ನೈಜ ಕ್ರೀಡಾ ಸಾಧಕರಿಗೆ ಸಂದ ದೇಶದ ಅತ್ಯುನ್ನತ ಕ್ರೀಡಾ ಗೌರವ

Government Transport: ಸರಕಾರಿ ಸಾರಿಗೆ ಸಂಸ್ಥೆಗಳಿಗೆ ಬೇಕಿದೆ ಸುಧಾರಣ ಚಿಕಿತ್ಸೆ

Government Transport: ಸರಕಾರಿ ಸಾರಿಗೆ ಸಂಸ್ಥೆಗಳಿಗೆ ಬೇಕಿದೆ ಸುಧಾರಣ ಚಿಕಿತ್ಸೆ

2025; May the mantra of peace and coexistence resonate throughout the world

Editorial; ಜಗತ್ತಿನೆಲ್ಲೆಡೆ ಅನುರಣಿಸಲಿ ಶಾಂತಿ, ಸಹಬಾಳ್ವೆಯ ಮಂತ್ರ

Exam

ಕೆಪಿಎಸ್‌ಸಿ ಲೋಪಗಳಿಲ್ಲದಂತೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಿ

JAmmu

Jammu-Kashmir: ಉಗ್ರರನ್ನು ಮಟ್ಟ ಹಾಕಿದ‌ ಭದ್ರತಾ ಪಡೆಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.