ಸಾಂಕ್ರಾಮಿಕ ರೋಗಗಳ ಬಗ್ಗೆ ಇರಲಿ ಇನ್ನಿಲ್ಲದ ಎಚ್ಚರ
Team Udayavani, Apr 17, 2023, 5:46 AM IST
ರಾಜ್ಯದಲ್ಲಿ ಬೇಸಗೆಯ ಪ್ರಖರತೆ ಹೆಚ್ಚಾಗುತ್ತಿದ್ದು, ಜತೆ ಜತೆಯಲ್ಲೇ ಕೊರೊನಾ ಕೇಸುಗಳ ಸಂಖ್ಯೆಯಲ್ಲೂ ಹೆಚ್ಚಳವಾಗುತ್ತಿದೆ. ಬೇಸಗೆಯ ಧಗೆಯನ್ನು ತಾಳಲಾರದೇ ಜನ ಒದ್ದಾಡುತ್ತಿರುವುದೂ ಕಂಡು ಬರುತ್ತಿದೆ. ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳುವುದು ಹೇಗೆ ಎಂಬುದು ಜನರಲ್ಲಿ ಬಗೆಹರಿಯಲಾಗದ ವಿಷಯವಾಗಿದೆ.
ಇತ್ತೀಚೆಗಷ್ಟೇ ಹವಾಮಾನ ಇಲಾಖೆಯೂ ಕರ್ನಾಟಕದಲ್ಲಿ ಭಾರೀ ಪ್ರಮಾಣದ ಬಿಸಿಲ ಬೇಗೆ ಕಾಡಲಿದೆ ಎಂದು ಹೇಳಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ವಾರಗಳ ಕಾಲ ಬಿಸಿಗಾಳಿಯ ಪರಿಣಾಮಗಳು ಹೆಚ್ಚಾಗಬಹುದು ಎಂದಿದೆ. ಗರಿಷ್ಠ ತಾಪಮಾನವೂ 38ರಿಂದ 39 ಡಿಗ್ರಿ ಸೆಲ್ಸಿಯಸ್ ವರೆಗೆ ಮುಟ್ಟಬಹುದು ಎಂದು ಎಚ್ಚರಿಕೆ ನೀಡಿದೆ.
ಅಲ್ಲದೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ತಾಪಮಾನ 43-44 ಡಿಗ್ರಿ ಸೆಲ್ಸಿಯಸ್‌ವರೆಗೆ ಮುಟ್ಟಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ವಿಚಿತ್ರವೆಂದರೆ, ಈಗಾಗಲೇ ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚೇ ಇದ್ದು, ಜನ ಕಷ್ಟ ಪಡುತ್ತಿದ್ದಾರೆ. ಕಲಬುರಗಿ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ಗಿಂತಲೂ ಹೆಚ್ಚೇ ಆಗಿದೆ. ಇನ್ನು ಮೈಸೂರು ಸಹಿತ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ 36ರಿಂದ 37 ಡಿಗ್ರಿ ಸೆಲ್ಸಿಯಸ್ ತಾಪಮಾನ ಕಾಣಿಸುತ್ತಿದೆ. ಸಾಮಾನ್ಯವಾಗಿ ಕರಾವಳಿ ಜಿಲ್ಲೆಗಳಲ್ಲಿ ಬೇಸಿಗೆ ಕಾಲದಲ್ಲಿ 37ರಿಂದ 38 ಡಿಗ್ರಿ ಸೆಲ್ಸಿಯಸ್ ತಾಪಮಾನ ಕಾಣಿಸುತ್ತದೆ. ಆದರೆ ಈ ಬಾರಿ ಒಂದೆರಡು ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗಿರುವುದು ಆತಂಕದ ವಿಚಾರವಾಗಿದೆ.
ಇನ್ನು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿಯೂ ಪ್ರತೀ ಬೇಸಗೆ ಕಾಲಕ್ಕಿಂತ ಈ ಬಾರಿ 2 ರಿಂದ 3 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೆಚ್ಚೇ ಕಾಣಿಸುತ್ತಿದೆ. ಇನ್ನೊಂದೆಡೆ ಕರಾವಳಿ ಸಹಿತ ಇತರೆ ಭಾಗಗಳಲ್ಲಿ ಆಗ್ಗಾಗ್ಗೆ ಮಳೆ ಸುರಿಯಲಿದ್ದು, ಇದಾದ ಬಳಿಕವೂ ಬಿಸಿಲ ಪ್ರಕೋಪ ಹೆಚ್ಚಾಗುತ್ತಿರುತ್ತದೆ ಎಂದೇ ಹವಾಮಾನ ಇಲಾಖೆ ಹೇಳಿಕೊಂಡಿದೆ.
ಬೆಂಗಳೂರು ವಿಚಾರದಲ್ಲಿಯೂ ಬಿಸಿಲ ಬೇಗೆ ಹೆಚ್ಚಾಗಿದೆ. ಇಲ್ಲಿ ಸಾಮಾನ್ಯ ಉಷ್ಣಾಂಶಕ್ಕಿಂತ ಈ ಬಾರಿ 2 ಡಿಗ್ರಿ ಸೆಲ್ಸಿಯಸ್ ಹೆಚ್ಚು ಕಂಡು ಬರುತ್ತಿದೆ. ತಂಪು ನಗರ ಎಂದೇ ಪ್ರಸಿದ್ಧಿಯಾಗಿರುವ ಬೆಂಗಳೂರಿನಲ್ಲಿಯೂ ಬಿಸಿಲ ಬೇಗೆಯಿಂದ ಜನ ಕಷ್ಟಪಡುತ್ತಿದ್ದಾರೆ.
ಬೇಸಗೆ ಕಾಲದಲ್ಲಿ ಜನತೆ ನಿರ್ಜಲೀಕರಣದಿಂದಾಗಿ ಬಳಲುತ್ತಾರೆ. ಏಕೆಂದರೆ ಮನುಷ್ಯರ ದೇಹಕ್ಕೆ ಉಷ್ಣಾಂಶ ಸಹಿಸಿಕೊಳ್ಳುವುದು ತುಂಬಾ ಕಷ್ಟದ ವಿಚಾರ. ಅಲ್ಲದೆ ದೇಹದಲ್ಲಿನ ನೀರಿನ ಅಂಶವೆಲ್ಲವೂ ಹೆಚ್ಚಿನ ಉಷ್ಣಾಂಶದಿಂದಾಗಿ ಹೀರಿಕೊಳ್ಳುವುದರಿಂದ ಸುಸ್ತು ಹೆಚ್ಚಾಗುತ್ತದೆ.
ಇದರ ಜತೆಗೆ ಡೆಂಗ್ಯೂ, ಮಲೇರಿಯಾ, ಕೊರೊನಾದಂಥ ರೋಗಗಳ ಕಾಟವೂ ಈ ಸಂದರ್ಭದಲ್ಲಿ ಹೆಚ್ಚು. ಅಂದರೆ ಡೆಂಗ್ಯೂ ಮತ್ತು ಮಲೇರಿಯಾ ಬದಲಾದ ವಾತಾವರಣಕ್ಕೆ ತಕ್ಕಂತೆ ಕಾಣಿಸಿಕೊಳ್ಳುತ್ತವೆ. ಜತೆಗೆ ದೇಶಾದ್ಯಂತ ಕೊರೊನಾ ಕೂಡ ಜಾಸ್ತಿಯಾಗುತ್ತಿದ್ದು, ಬಿಸಿಲ ಜತೆಗೆ ಇದೂ ಕೂಡ ಆತಂಕದ ವಿಚಾರವಾಗಿದೆ. ಅಲ್ಲದೆ, ಸಾಮಾನ್ಯ ಜ್ವರ ಪ್ರಕರಣಗಳೂ ಹೆಚ್ಚಾಗುತ್ತಿವೆ.
ಇಂಥ ಸಂದರ್ಭದಲ್ಲಿ ಆದಷ್ಟು ಜನ ಜಾಗರೂಕತೆಯಿಂದ ಇರಬೇಕಾಗುತ್ತದೆ. ಸುಖಾಸುಮ್ಮನೆ ಬಿಸಿಲಲ್ಲಿ ಓಡಾಡುವುದನ್ನು ಬಿಡಬೇಕಾಗುತ್ತದೆ. ಆಗಾಗ ನೀರು ಕುಡಿಯುವುದು, ಹಣ್ಣಿನ ಜ್ಯೂಸ್ ಕುಡಿಯುವುದನ್ನು ಮಾಡಬೇಕಾಗುತ್ತದೆ. ಒಂದು ವೇಳೆ ಜ್ವರದ ಬಾಧೆ ಹೆಚ್ಚಾದರೆ, ಆಸ್ಪತ್ರೆಗೆ ಹೋಗಿ ವೈದ್ಯರಲ್ಲಿತೋರಿಸಿಕೊಳ್ಳಬೇಕು.
ಇದರ ಜತೆಗೆ ಸರಕಾರವೂ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಕೊರೊನಾ ಹೆಚ್ಚಳದ ಆತಂಕ ಎದುರಾಗಿದ್ದು, ಆಸ್ಪತ್ರೆಗಳನ್ನು ಸನ್ನದ್ಧವಾಗಿಡುವುದು, ವೈದ್ಯರು ಲಭ್ಯರಿರುವಂತೆ ಮಾಡಬೇಕು. ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಕಂಡರೂ ಅದನ್ನು ನಿವಾರಿಸಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.