![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 27, 2021, 6:37 PM IST
ಘಟಪ್ರಭಾ : ಮೊನ್ನೆಯಷ್ಟೇ ಕ್ರೂರಿಗಳು ಮೈಸೂರಿನಲ್ಲಿ ಕಾಲೇಜು ಯುವತಿಯ ಮೇಲೆ ಗ್ಯಾಂಗ್ ರೇಪ್ ಮಾಡಿ ಅಟ್ಟಹಾಸ ಮೆರೆದಿರುವ ಘಟನೆ ಮಾಸುವ ಮುನ್ನವೇ ಇಂತಹದೆ ಹೀನ ಕೃತ್ಯ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಒಂದು ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಸುಮಾರು 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ 5 ಜನ ಕ್ರೂರಿ ಕಾಮುಕರು ಪುಸಲಾಯಿಸಿ ಕರೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಗೋಕಾಕ ತಾಲ್ಲೂಕಿನ ಘಟಪ್ರಭಾ ಪೊಲೀಸ್ ಠಾಣೆಯ ವ್ಯಾಪ್ತಿಯ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಜುಲೈ 12 ರಂದು ಈ ಹೀನ ನಡೆದಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಒಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದ್ದು, ಆತನ ಶೋಧ ಕಾರ್ಯಾಚರಣೆ ನಡೆಸಲಾಗಿದೆ.
ಇದನ್ನೂ ಓದಿ :‘ದೇಶ್ ಕಾ ಮೆಂಟರ್ಸ್’ಗೆ ರಾಯಭಾರಿ: ದೆಹಲಿ ಸರ್ಕಾರದ ಯೋಜನೆಗೆ ಸೂನು ಸಾಥ್
ಘಟನೆ : ತೋಟದಲ್ಲಿರುವ ತನ್ನ ಮನೆಯಿಂದ ಕೆಲಸದ ನಿಮಿತ್ತ ಊರಿಗೆ ಬಂದು ಮರಳಿ ಮನೆಗೆ ಹೋಗುತ್ತಿರುವಾಗ ಅದೆ ಗ್ರಾಮದ ಐದು ಜನ ಕಾಮುಕರು ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಯಾರು ಇಲ್ಲದನ್ನು ಗಮನಿಸಿ ಅತ್ಯಾಚಾರ ಎಸಗಿದ್ದಾರೆಂದು ಹೇಳಲಾಗುತ್ತಿದೆ. ಅಲ್ಲದೆ ಬಾಲಕಿಗೆ ಯಾರಿಗಾದರು ಹೇಳಿದರೆ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾರೆ.
ಹೀಗಾಗಿ ಬಾಲಕಿ ಅಂಜಿ ಈ ವಿಚಾರ ಮನೆಯವರಲ್ಲಿ ತಿಳಿಸಲಿಲ್ಲ. ದಿನ ಕಳೆದಂತೆ ಬಾಲಕಿ ಮಾನಸಿಕವಾಗಿ ಕುಂದುತ್ತಿರುವುದನ್ನು ಗಮನಿಸಿದ ಮನೆಯವರು ಸೂಕ್ಷ್ಮವಾಗಿ ವಿಚಾರಿಸಿದಾಗ ಈ ಹೀನ ಕೃತ್ಯ ನಡೆದಿರುವುದು ತಿಳಿದಿದು ಬೆಳಕಿಗೆ ಬಂದಿದೆ.
ವಿಚಾರ ಗೊತ್ತಾದ ಬಳಿಕ ಮನೆಯವರು ಘಟಪ್ರಭಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.