ಕಾಲಮಿತಿಯೊಳಗೆ ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿ ಪೂರ್ಣ: ಸಚಿವ ಭೈರತಿ ಬಸವರಾಜ್
Team Udayavani, Mar 9, 2021, 7:30 PM IST
ವಿಧಾನಪರಿಷತ್ತು: ಸ್ಮಾರ್ಟ್ ಸಿಟಿ ಯೋಜನೆಯಡಿ ಬೆಳಗಾವಿಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಕಾಮಗಾರಿಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ನಿಗದಿಪಡಿಸಿದ ಅವಧಿಯೊಳಗೆ ಪೂರ್ಣಗೊಳಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ತಿಳಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಮಹಾಂತೇಶ ಕವಟಗಿಮಠ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸ್ಮಾರ್ಟ್ ಸಿಟಿ ಯೋಜನೆಯನ್ನು 2021-22ರೊಳಗೆ ಪೂರ್ಣಗೊಳಿಸಬೇಕಾಗಿದೆ. ಯೋಜನೆಯಡಿಯ ರಸ್ತೆ ಅಭಿವೃದ್ಧಿ, ಒಳಚರಂಡಿ ಹಾಗೂ ಇನ್ನಿತರೆ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳನ್ನು ನಗರದ ಜನನಿಬಿಡ ಪ್ರದೇಶಗಳಲ್ಲಿ ಅನುಷ್ಠಾನಗೊಳಿಸಬೇಕಾಗಿರುವುದರಿಂದ ಹಾಗೂ ಈ ಯೋಜನೆಗಳಲ್ಲಿ ಎಸ್ಕಾಂ, ಬಿಎಸ್‌ಎನ್‌ಎಲ್ ಹಾಗೂ ಇತರೆ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಬೇಕಾಗಿದೆ, ಕೇಂದ್ರ ರಕ್ಷಣಾ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ಪಡೆಯಲು ವಿಳಂಬವಾಗಿದೆ. ಟಿಳಕವಾಡಿ ಯೋಜನೆಯಲ್ಲಿ ನ್ಯಾಯಾಲಯದ ವ್ಯಾಜ್ಯ ಇರುವುದರಿಂದ ಅನುಷ್ಠಾನದಲ್ಲಿ ವಿಳಂಬವಾಗಿದೆ. ಆದಾಗ್ಯೂ ಕೇಂದ್ರ ಮತ್ತು ರಾಜ್ಯ ಸರ್ಕಾರ ನಿಗದಿಪಡಿಸಿರುವ ಕಾಲಾವಧಿಯಲ್ಲಿ ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದರು.
ಇದನ್ನೂ ಓದಿ:ಒಪ್ಪೋದಿಂದ ಎರಡು ಹೊಸ ಮೊಬೈಲ್ ಮತ್ತು ಸ್ಮಾರ್ಟ್ ಬ್ಯಾಂಡ್ ಬಿಡುಗಡೆ
ಬೆಳಗಾವಿ ನಗರವನ್ನು 2016ರಲ್ಲಿ ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆ ಮಾಡಲಾಗಿದೆ. 5 ವರ್ಷಗಳ ಅವಧಿಗೆ 500 ಕೋಟಿ ರೂ. ಅನುದಾನ ನಿಗಡಿಪಡಿಸಲಾಗಿದೆ. ಇದರಲ್ಲಿ ಕೇಂದ್ರ ಸರ್ಕಾರ 294 ಕೋಟಿ ಮತ್ತು ರಾಜ್ಯ ಸರ್ಕಾರ 300 ಕೋಟಿ ಅನುದಾನ ಬಿಡುಗಡೆ ಮಾಡಿದೆ. 410 ಕೋಟಿ ರೂ. ವೆಚ್ಚ ಮಾಡಲಾಗಿದೆ. ದೇಶದ 110 ಸ್ಮಾರ್ಟ್ ಸಿಟಿಗಳ ಪೈಕಿ ಬೆಳಗಾವಿ 35ನೇ ಸ್ಥಾನದಲ್ಲಿದೆ. ಸ್ಮಾರ್ಟ್ ಸಿಟಿ ಅನುದಾನ ಮತ್ತು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಪ್ರಸ್ತಾಪಿಸಲಾಗಿರುವ 999 ಕೋಟಿ ಮೊತ್ತದ 108 ಕಾಮಗಾರಿಗಳ ಪೈಕಿ 95.28 ಕೋಟಿ ಮೊತ್ತದ 32 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. 750 ಕೋಟಿ ಮೊತ್ತದ 67 ಕಾಮಗಾರಿಗಳು ಪ್ರಗತಿಯಲ್ಲಿದೆ. 153 ಕೋಟಿ ಮೊತ್ತದ 9 ಕಾಮಗಾರಿಗಳು ಟೆಂಡರ್ ಹಂತದಲ್ಲಿವೆ ಎಂದು ಸಚಿವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.