ಬೆಳ್ತಂಗಡಿ ಟ್ಯಾಕ್ಸಿ ಚಾಲಕನ ಮೇಲೆ ದಾಳಿ ಪ್ರಕರಣ : ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವು
Team Udayavani, Aug 24, 2020, 10:26 AM IST
ಬೆಳ್ತಂಗಡಿ : ವಾಕಿಂಗ್ ಮಾಡುತ್ತಿದ್ದ ಸಂದರ್ಭ ದುಷ್ಕರ್ಮಿಗಳ ದಾಳಿಯಿಂದ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಾಸು ಸಪಲ್ಯ(65) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಸೋಮವಾರ ಬೆಳಿಗ್ಗೆ ಬೆಳ್ತಂಗಡಿಯ ಜ್ಯೂನಿಯರ್ ಕಾಲೇಜ್ ರಸ್ತೆಯಲ್ಲಿ ವಾಕಿಂಗ್ ಹೋಗುತ್ತಿದ್ದ ವಾಸು ಸಪಲ್ಯ ಅವರ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿತ್ತು ಪರಿಣಾಮ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ವಾಸು ಸಪಲ್ಯ ವೃತ್ತಿಯಲ್ಲಿ ಬೆಳ್ತಂಗಡಿಯಲ್ಲಿ ಟ್ಯಾಕ್ಸಿ ವಾಹನದ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಮಗ ಕೂಡ ಚಾಲಕ ವೃತ್ತಿ ನಿರ್ವಹಿಸುತ್ತಿದ್ದು, ಮದ್ಯಪಾನ ಮಾಡಿ ತಂದೆ ಜೊತೆ ಗಲಾಟೆ ಅಗಿ ಈ ಹಿಂದೆ ಪ್ರಕರಣ ಠಾಣೆ ಮೆಟ್ಟಿಲೇರಿತ್ತು. ವಾಸು ಸಪಲ್ಯ ಅವರ ಎರಡನೇ ಮಗ ದಯಾನಂದ ಇಂದು ಬೆಳಗ್ಗೆ ನಾಪತ್ತೆಯಾಗಿದ್ದು, ಮೊಬೈಲ್ ಸ್ವಿಚ್ ಆಫ್ ಬರುತ್ತಿರುವುದರಿಂದ ಅನುಮಾನ ವ್ಯಕ್ತವಾಗಿದೆ.
ಘಟನೆ ನಡೆದ ಸ್ಥಳದಲ್ಲಿ ಕೃತ್ಯಕ್ಕೆ ಬಳಸಿದ ತಲವಾರ್ ಪತ್ತೆಯಾಗಿದೆ. ಬೆಳ್ತಂಗಡಿ ಪಿಎಸ್ಐ ನಂದಕುಮಾರ್ , ಇನ್ಸ್ಪೆಕ್ಟರ್ ಸಂದೇಶ್.ಪಿ.ಜಿ ತಂಡ ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Egg Thrown: “ಮೊಟ್ಟೆ ಅಟ್ಯಾಕ್’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.