Belthangady ಮನೆಗೆ ಅಕ್ರಮ ಪ್ರವೇಶಿಸಿ ಹಲ್ಲೆಗೆ ಯತ್ನ, ದೂರು ದಾಖಲು
Team Udayavani, Mar 26, 2024, 8:41 PM IST
ಬೆಳ್ತಂಗಡಿ: ಮಗ ಮತ್ತು ಸೊಸೆ ಮಹಿಳೆಯೋರ್ವರಿಗೆ ಹಲ್ಲೆ ನಡೆಸಲು ಮುಂದಾಗಿ ಬೆದರಿಕೆ ಒಡ್ಡಿದ ಘಟನೆ ನಡೆದಿದೆ. ಈ ಬಗ್ಗೆ ಬಡಗಕಾರಂದೂರು ನಿವಾಸಿ ಸಿಸಿಲಾ ವೇಗಸ್ (79) ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮಾ. 15ರಂದು ಮಗ ಸವೇರ ಪಿರೇರ ದೊಣ್ಣೆ ಹಿಡಿದು ಮನೆ ಗೇಟಿನ ಹೊರಗಡೆ ನಿಂತುಕೊಂಡಿದ್ದು, ಆತನ ಪತ್ನಿ ಶಾಂತಿ ಗ್ರೇಟಾ ಪಿರೇರಾಳು ಕಲ್ಲನ್ನು ಹಿಡಿದುಕೊಂಡು ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಕಲ್ಲಿನಿಂದ ಹೊಡೆಯಲು ಯತ್ನಿಸಿ ಜೀವಬೆದರಿಕೆ ಒಡ್ಡಿರುತ್ತಾರೆ ಎಂದು ಹೇಳಲಾಗಿದೆ.
ಮಾ. 26ರಂದು ಕೂಡ ಮಗ ಸವೇರ ಪಿರೇರ ಮನೆಯ ಬೇಲಿಯ ಸುತ್ತಲು ತಿರುಗಾಡುತ್ತಿದ್ದು, ಇದರಿಂದ ಮಹಿಳೆ ಹಾಗೂ ಅವರ ಗಂಡನಿಗೆ ಪ್ರಾಣ ಭಯ ಉಂಟಾಗಿರುತ್ತದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Badagannur: ಆರೋಗ್ಯ ಕೇಂದ್ರ, ಆ್ಯಂಬುಲೆನ್ಸ್‌ಗೆ ಗ್ರಾಮಸ್ಥರ ಬೇಡಿಕೆ
Bantwal: ಕಂಬಳದ ತೆರೆಮರೆ ಹೀರೊಗಳ ದಾಖಲೀಕರಣ
Punjalkatte: ಘನತ್ಯಾಜ್ಯ ಘಟಕ ಆರಂಭಕ್ಕೆ ಇನ್ನೂ ಮೀನ ಮೇಷ ಎಣಿಕೆ
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.