ಬೆಂಗಳೂರು: ಬೈಕ್ ಕಳ್ಳತನ ದಂಧೆಗೆ ಪೊಲೀಸ್ ಕಾನ್‌ಸ್ಟೆಬಲ್ ಕಿಂಗ್ ಪಿನ್!
77 ಲಕ್ಷ ಮೌಲ್ಯದ 53 ಬೈಕ್‌ಗಳ ವಶ
Team Udayavani, Dec 24, 2021, 7:23 PM IST
ಬೆಂಗಳೂರು: ಪೊಲೀಸರು ಶುಕ್ರವಾರ ಬೆಂಗಳೂರಿನಲ್ಲಿ ಕಳವಾಗಿದ್ದ 77 ಲಕ್ಷ ಮೌಲ್ಯದ 53 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದು, ದಂಧೆಯ ಹಿಂದೆ ಪೊಲೀಸನೇ ಕಿಂಗ್ ಪಿನ್ ಎಂದು ತಿಳಿದು ಬಂದಿದೆ.
ಆರೋಪಿ ವಿದ್ಯಾರಣ್ಯಪುರ ಪೊಲೀಸ್ ಠಾಣೆಯ ಕ್ರೈಂ ಪೊಲೀಸ್ ಕಾನ್‌ಸ್ಟೆಬಲ್ ಹೊನ್ನಪ್ಪ ದುರದಪ್ಪ ಮಾಳಗಿ ಬೈಕ್ ಗ್ಯಾಂಗ್ ನ ನೇತೃತ್ವ ವಹಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ರಮೇಶ ಎಂಬಾತನನ್ನೂ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದು, ಕಾನ್‌ಸ್ಟೆಬಲ್ ಮಾಳಗಿ ಜತೆ ಕೈಜೋಡಿಸಿದ್ದ ಎಂದು ತಿಳಿದು ಬಂದಿದೆ. ಆರೋಪಿ ರಮೇಶ ಪೊಲೀಸ್ ಕಾನ್‌ಸ್ಟೆಬಲ್ ಮಾಳಗಿ ನಿರ್ದೇಶನದ ಮೇರೆಗೆ ಬೈಕ್ ಕಡಿಯುವ ಕಾರ್ಯದಲ್ಲಿ ತೊಡಗಿದ್ದ, ಜೊತೆಯಲ್ಲಿ ಇಬ್ಬರು ಅಪ್ರಾಪ್ತ ವಯಸ್ಕ ಬಾಲಕರನ್ನೂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಆರೋಪಿಗಳು ಸೆಕೆಂಡ್ ಹ್ಯಾಂಡ್ ಬೈಕ್‌ಗಳನ್ನು ಮಾರಾಟ ಮಾಡುವ ಪೋರ್ಟಲ್‌ಗಳಿಗೆ ಹೋಗಿ ನೋಂದಣಿ ಸಂಖ್ಯೆಗಳನ್ನು ಸಂಗ್ರಹಿಸಿ ಕಳ್ಳತನ ಮಾಡಿದ ವಾಹನಗಳ ಮೇಲೆ ಆ ನೋಂದಣಿ ಸಂಖ್ಯೆಗಳನ್ನು ಹಾಕಿ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದರು. ಬ್ಯಾಂಕ್ ಸಾಲ ಮರುಪಾವತಿ ಮಾಡಬೇಕಾಗಿರುವುದರಿಂದ ವಾಹನಗಳ ದಾಖಲೆಗಳನ್ನು ನೀಡಲು ಸಾಧ್ಯವಿಲ್ಲ ಎಂದು ಗ್ರಾಹಕರಿಗೆ ಹೇಳುತ್ತಿದ್ದರು.
@ACPVijayanagar ಅಪರಾಧ ತಂಡದಿಂದ ಅಮೋಘ ಕಾರ್ಯಚರಣೆ.
5️⃣3️⃣ ಮೋಟಾರ್ ಸೈಕಲ್ ಗಳ ಕಳವು ಮಾಡಿದ್ದ 2 ಆರೋಪಿಗಳ ಬಂಧಿಸಿದ #ಮಾಗಡಿರಸ್ತೆ ಪೊಲೀಸರು.
@BlrCityPolice ಠಾಣೆಗಳ ವ್ಯಾಪ್ತಿಯಲ್ಲಿ ವರದಿಯಾಗಿದ್ದ ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ಸು ಸಾಧಿಸಲಾಗಿದೆ. ಪ್ರಕರಣದ ತನಿಖೆ ಪ್ರಗತಿಯಲ್ಲಿದೆ @MagadiRoadPS2. pic.twitter.com/Qku3tKhWqn— Dr. Sanjeev M Patil, IPS (@DCPWestBCP) December 24, 2021
ಬೈಕ್ ಕಳ್ಳತನ ಮಾಡಿ ಅಪ್ರಾಪ್ತ ಬಾಲಕರು ಪೊಲೀಸರಿಗೆ ಸಿಕ್ಕಿ ಬಿದ್ದಾಗಲೆಲ್ಲ ಆರೋಪಿಗಳು ಪೊಲೀಸರಿಗೆ ಕರೆ ಮಾಡಿ ತಾವು ಸಂಬಂಧಿಕರು ಎಂದು ಹೇಳುತ್ತಿದ್ದರು. ನಂದಿನಿ ಲೇಔಟ್, ಯಶವಂತಪುರ, ಎಚ್‌ಎಂಟಿ ಲೇಔಟ್, ಜಾಲಗಳ್ಳಿ ಕ್ರಾಸ್, ಹೆಬ್ಬಾಳ, ಜ್ಞಾನಭಾರತಿ, ಪೀಣ್ಯ, ರಾಜಗೋಪಾಲನಗರ ಮತ್ತಿತರ ಪ್ರದೇಶಗಳಲ್ಲಿ ಮಾಳಗಿ ಸರಣಿ ಬೈಕ್ ಕಳ್ಳತನ ಮಾಡುತ್ತಿದ್ದ ದಂಧೆಯ ಮಾಸ್ಟರ್ ಮೈಂಡ್ ಆಗಿದ್ದ.
ಪೊಲೀಸರು ಶುಕ್ರವಾರ ಮೂರು ಬೈಕ್‌ಗಳನ್ನು ಮಾಲೀಕರಿಗೆ ಹಸ್ತಾಂತರಿಸಿದ್ದಾರೆ. ವಾಹನ ಖರೀದಿಯಲ್ಲಿ ಎಚ್ಚರಿಕೆ ವಹಿಸುವಂತೆ ಡಿಸಿಪಿ ಪಾಟೀಲ್ ಜನರಲ್ಲಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.