![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Nov 30, 2022, 9:03 PM IST
ಬೆಂಗಳೂರು: ಸೂಕ್ತ ದಾಖಲೆಗಳಿಲ್ಲದೆ 1.8 ಕೆಜಿ ಚಿನ್ನ ಮತ್ತು 22 ಲಕ್ಷ ರೂ ನಗದು ಹೊಂದಿದ್ದ ವ್ಯಕ್ತಿಯನ್ನು ಮಂಗಳವಾರ ಮಧ್ಯರಾತ್ರಿ ವೇಳೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುಡಿದ ಮತ್ತಿನಲ್ಲಿದ್ದ ವ್ಯಕ್ತಿ ಬ್ಯಾಗ್ ಸಮೇತ ನಗರದಲ್ಲಿ ತಿರುಗಾಡುತ್ತಿರುವುದು ಕಂಡು ಬಂದಿದೆ. ಪೊಲೀಸರನ್ನು ಕಂಡ ಕೂಡಲೇ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಪೊಲೀಸರಿಗೆ ಅನುಮಾನ ಬಂದು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಶಪಡಿಸಿಕೊಂಡ ವಸ್ತುಗಳಿಗೆ ಯಾವುದೇ ರಸೀದಿಗಳನ್ನು ಹಾಜರುಪಡಿಸಲು ಸಾಧ್ಯವಾಗದ ಕಾರಣ, ವ್ಯಕ್ತಿ ವಿರುದ್ಧ ಕಳ್ಳತನ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅಧಿಕಾರಿ ಹೇಳಿದರು.
ಹೆಚ್ಚಿನ ತನಿಖೆಗಳು ನಡೆಯುತ್ತಿವೆ.
You seem to have an Ad Blocker on.
To continue reading, please turn it off or whitelist Udayavani.