ಪಿಯುಸಿ ಫಲಿತಾಂಶ; 18ನೇ ಸ್ಥಾನಕ್ಕೆ ಜಿಗಿದ ಬೀದರ್ ! ಕಳಚಿದ ಕೊನೆ ಸ್ಥಾನದ ಅಪಖ್ಯಾತಿ

Team Udayavani, Jul 14, 2020, 6:44 PM IST

ಪಿಯುಸಿ ಫಲಿತಾಂಶ; 18ನೇ ಸ್ಥಾನಕ್ಕೆ ಜಿಗಿದ ಬೀದರ್ ! ಕಳಚಿದ ಕೊನೆ ಸ್ಥಾನದ ಅಪಖ್ಯಾತಿ

ಬೀದರ್ : ಫಲಿತಾಂಶದಲ್ಲಿ ಕಳಪೆ ಸಾಧನೆಯೊಂದಿಗೆ ಕೊನೆ ಸ್ಥಾನದ ಅಪಖ್ಯಾತಿಗೆ ಹೊತ್ತುತ್ತಿದ್ದ ಗಡಿ ನಾಡು ಬೀದರ್ ಈ ಬಾರಿ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅಮೋಘ ಸಾಧನೆ ಮಾಡಿದೆ. ಶೇ. 64.61 ರಷ್ಟು ಫಲಿತಾಂಶ ಪಡೆದಿರುವ ಬೀದರ್ ರಾಜ್ಯದಲ್ಲಿ 30ರಿಂದ 18ನೇ ಸ್ಥಾನಕ್ಕೆ ಜಿಗಿಯುವ ಮೂಲಕ ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಹೊಸ ಆಶಾಭಾವ ಮೂಡಿಸಿದೆ.

ಪ್ರತಿ ವರ್ಷ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಕೊನೆಯ ಎರಡು ಸ್ಥಾನಕ್ಕೆ ಅಂಟಿಕೊಳ್ಳುತ್ತಿದ್ದ ಬೀದರ್ ನಿರಾಶೆ ಮೂಡಿಸುತ್ತಿತ್ತು. ಆದರೆ, ಈ ಬಾರಿ ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಯ ಪಿಯು ಫಲಿತಾಂಶದ ಸಾಧನೆ ಅಚ್ಚರಿ ಮೂಡಿಸಿದೆ. ಕಳೆದ ವರ್ಷ ಶೇ. 55.75 ರಷ್ಟು ಅಂಕಗಳೊಂದಿಗೆ 30ನೇ ಸ್ಥಾನದಲ್ಲಿದ್ದ ಬೀದರ್ ಶೇ. 8.86ರಷ್ಟು ಹೆಚ್ಚುವರಿ ಅಂಕಗಳೊಂದಿಗೆ ಶೇ. 64.61 ರಷ್ಟು ಫಲಿತಾಂಶ ಬಂದಿದ್ದು, ಜಿಲ್ಲಾವಾರು ಫಲಿತಾಂಶದಲ್ಲಿ 18ನೇ ಸ್ಥಾನಕ್ಕೆ ಏರಿಕೆ ಕಂಡಿದೆ.

ಗ್ರಾಮೀಣ ಮಕ್ಕಳು ಮೇಲುಗೈ:
ಈ ಬಾರಿ ಜಿಲ್ಲೆಯಲ್ಲಿ ಪರೀಕ್ಷೆ ಬರೆದಿದ್ದ 14285 ವಿದ್ಯಾರ್ಥಿಗಳಲ್ಲಿ 9229 ಮಕ್ಕಳು ಉತ್ತೀರ್ಣರಾಗಿದ್ದಾರೆ. ಪ್ರತಿ ಸಲದಂತೆ ಗ್ರಾಮೀಣ ಪ್ರದೇಶದ ಪರೀಕ್ಷಾರ್ಥಿಗಳೇ ಮೇಲುಗೈ ಸಾಧಿಸಿದ್ದಾರೆ. ನಗರ ಪ್ರದೇಶದ ಒಟ್ಟು 11,373 ಮಕ್ಕಳು ಹಾಜರಾಗಿದ್ದು, ಅದರಲ್ಲಿ 7101 (ಶೇ. 62.44) ಮಕ್ಕಳು ಪಾಸಾಗಿದ್ದರೆ, ಗ್ರಾಮೀಣ ಪ್ರದೇಶದ 2912 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2128 (ಶೇ. 73.08) ಮಕ್ಕಳು ತೇರ್ಗಡೆಯಾಗಿದ್ದಾರೆ.

ಇನ್ನೂ ವಿಭಾಗವಾರುದಲ್ಲಿ ವಿಜ್ಞಾನ ವಿಭಾಗಕ್ಕೆ ಶೇ. 75.65 ರಷ್ಟು ಫಲಿತಾಂಶ ಬಂದಿದ್ದರೆ, ಕಲಾ ವಿಭಾಗ ಶೇ. 48.24 ಮತ್ತು ವಾಣಿಜ್ಯ ವಿಭಾಗಕ್ಕೆ ಶೇ. 54.81 ರಷ್ಟು ಫಲಿತಾಂಶ ಇದೆ. ಪರೀಕ್ಷೆ ಬರೆ ವಿಜ್ಞಾನ ವಿಭಾಗದ 7951 ಮಕ್ಕಳಲ್ಲಿ 6015 ಜನ ಉತ್ತೀರ್ಣರಾಗಿದ್ದರೆ ಕಲಾ ವಿಭಾಗ 3922ರಲ್ಲಿ 1892 ಪರೀಕ್ಷಾರ್ಥಿ ಹಾಗೂ ವಾಣಿಜ್ಯ ವಿಭಾಗದಲ್ಲಿ 2412 ರಲ್ಲಿ 1322 ಮಕ್ಕಳು ತೇರ್ಗಡೆಯಾಗಿದ್ದಾರೆ.

ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಯೋಜನಾ ಬದ್ಧ ಕಾರ್ಯಕ್ರಮ, ಪರಿಶ್ರಮದ ಫಲವಾಗಿ ಫಲಿತಾಂಶ ಸುಧಾರಣೆ ಕಂಡಿದೆ. ಉಪನ್ಯಾಸಕರಿಗೆ ತಜ್ಞರಿಂದ ವಿಷಯವಾರು ತರಬೇತಿ ಮತ್ತು ವಿದ್ಯಾರ್ಥಿಗಳಿಗೆ ನಿರಂತರ ಕಾರ್ಯಾಗಾರ ನಡೆಸಲಾಗಿತ್ತು. ಜತೆಗೆ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ಸಂಘದಿಂದ ಪ್ರಕಟಿಸಿ ಪರೀಕ್ಷಾರ್ಥಿಗಳಿಗೆ ವಿತರಿಸಿದ್ದ ‘ಮಾರ್ಗದರ್ಶಿ’ ಕಿರು ಹೊತ್ತಿಗೆಯಿಂದಲೂ ಸಾಕಷ್ಟು ಪ್ರಯೋಜನವಾಗಿದೆ.

ಜಿಲ್ಲೆಯಲ್ಲಿ ಫಲಿತಾಂಶದ ಏರಿಳಿತ…
ಜಿಲ್ಲೆಯಲ್ಲಿ ಕಳೆದ 10 ವರ್ಷಗಳಲ್ಲಿ ಪಿಯು ಫಲಿತಾಂಶದಲ್ಲಿ ಏರಿಳಿತ ಕಂಡಿದೆ. 2010-11ರಲ್ಲಿ ಶೇ. 45ರಷ್ಟು, 2011-12ರಲ್ಲಿ ಶೇ. 40.32ರಷ್ಟು, 2012- 13ರಲ್ಲಿ ಶೇ. 44.24ರಷ್ಟು, 2013-14ರಲ್ಲಿ ಶೇ. 44.95ರಷ್ಟು, 2015ರಲ್ಲಿ ಶೇ. 54.4, 2016ರಲ್ಲಿ ಶೇ. 52.07, 2017ರಲ್ಲಿ ಶೇ. 42.05, 2018ರಲ್ಲಿ ಶೇ. 52.63 ಮತ್ತು 2019ರಲ್ಲಿ ಶೇ. 55.78ರಷ್ಟು ಅಂಕ ಪಡೆದಿತ್ತು. ಈ ಬಾರಿ ಶೇ. 8.86ರಷ್ಟು ಅಂಕ ಹೆಚ್ಚಿಸಿಕೊಂಡು ಸಾಧನೆ ಮಾಡಿದೆ.

ಪಿಯುಸಿಯಲ್ಲಿ ಬೀದರ್ ಜಿಲ್ಲೆಗೆ ಉತ್ತಮ ಫಲಿತಾಂಶ ಬಂದಿದ್ದು, ಇದಕ್ಕೆ ಯೋಜನಾ ಬದ್ಧ ಕಾರ್ಯಕ್ರಮ, ತಂಡದ ಪರಿಶ್ರಮದ ಫಲವೇ ಕಾರಣ. ಫಲಿತಾಂಶದಲ್ಲಿ ಸುಧಾರಣೆ ನಿರೀಕ್ಷೆ ಇತ್ತು. ಆದರೆ, ಜಿಲ್ಲಾವಾರು ಪಟ್ಟಿಯಲ್ಲಿ ೧೮ನೇ ಸ್ಥಾನಕ್ಕೆ ಜಿಗಿಯುತ್ತದೆ ಅಂದುಕೊಂಡಿರಲಿಲ್ಲ. ವಿದ್ಯಾರ್ಥಿಗಳು, ಉಪನ್ಯಾಸಕರಿಗೆ ಅಭಿನಂದನೆಗಳು.

– ರಮೇಶ ಬೇಜಗಂ, ಡಿಡಿಪಿಯು, ಬೀದರ್

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.