![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 1, 2020, 12:59 PM IST
ಮುಂಬೈ: ಮಹಾರಾಷ್ಟ್ರ ಪೊಲೀಸರ ಅನುಮತಿ ಇಲ್ಲದೇ ಯಾವುದೇ ಕಾರಣಕ್ಕೂ ಬಿಹಾರ ಪೊಲೀಸರು ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆ ನಡೆಸುವಂತಿಲ್ಲ ಎಂದು ಸಚಿವ ಶಂಭುರಾಜ್ ದೇಸಾಯಿ ತಿಳಿಸಿದ್ದಾರೆ.
ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದ ಬಗ್ಗೆ ಯಾವುದೇ ತನಿಖೆ ನಡೆಸುವ ಮುನ್ನ ಬಿಹಾರ ಪೊಲೀಸರು ಮುಂಬೈ ಪೊಲೀಸರಿಗೆ ಮಾಹಿತಿ ನೀಡಲೇಬೇಕು ಎಂದು ಸ್ಪಷ್ಟಪಡಿಸಿರುವುದಾಗಿ ವರದಿ ವಿವರಿಸಿದೆ.
ಜೀ ಮೀಡಿಯಾ ಜತೆಗಿನ ವಿಶೇಷ ಮಾತುಕತೆಯಲ್ಲಿ ಮಾತನಾಡಿದ ಅವರು, ಬಿಹಾರ ಪೊಲೀಸರು ದಾಖಲಿಸಿರುವ ಎಫ್ ಐಆರ್ ನಲ್ಲಿ ಸುಶಾಂತ್ ಸಿಂಗ್ ಕುಟುಂಬದವರು ಯಾರ ಹೆಸರನ್ನೂ ನಮೂದಿಸದಿರುವಂತೆ ಮುಂಬೈ ಪೊಲೀಸರು ಮಾಹಿತಿ ನೀಡಿರುವುದಾಗಿ ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಬಾಲಿವುಡ್ ನ ಗಣ್ಯರನ್ನೂ ವಿಚಾರಣೆಗೊಳಪಡಿಸುತ್ತಿದೆ. ಅಲ್ಲದೇ ಪ್ರಕರಣ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಹೇಳಿದರು.
ಏತನ್ಮಧ್ಯೆ ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿ ಕೂಡಾ ನಟ ಸುಶಾಂತ್ ಸಾವಿನ ಪ್ರಕರಣದಲ್ಲಿನ ತನ್ನ ಕೈವಾಡದ ಆರೋಪದ ಕುರಿತ ತನಿಖೆಯನ್ನು ಮುಂಬೈ ಪೊಲೀಸರಿಗೆ ವರ್ಗಾಯಿಸಬೇಕೆಂದು ಕೋರಿ ಸುಪ್ರೀಂಕೋರ್ಟ್ ಕಟಕಟೆ ಏರಿರುವುದಾಗಿ ವರದಿ ತಿಳಿಸಿದೆ. ಆದರೆ ರಿಯಾ ಮನವಿಯನ್ನು ಕೋರ್ಟ್ ಪುರಸ್ಕರಿಸಬಾರದು ಎಂದು ಸುಶಾಂತ್ ಕುಟುಂಬದವರು ಕೇವಿಯಟ್ ದಾಖಲಿಸಿರುವುದಾಗಿ ವರದಿ ಹೇಳಿದೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.