ಪುಂಜಾಲಕಟ್ಟೆ: ಬೈಕ್ ಗಳೆರಡರ ಢಿಕ್ಕಿಯಾಗಿ ಹೆಡ್ ಕಾನ್ಸ್ ಟೇಬಲ್ ಸಾವು, ಇನ್ನೋರ್ವ ಗಂಭೀರ
Team Udayavani, Oct 15, 2021, 4:49 PM IST
ಪುಂಜಾಲಕಟ್ಟೆ: ದ್ವಿಚಕ್ರ ವಾಹನಗಳೆರಡು ಮುಖಾಮುಖಿ ಢಿಕ್ಕಿ ಹೊಡೆದು ಹೆಡ್ ಕಾನ್ಸ್ ಟೇಬಲ್ ಓರ್ವರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪಿಲಾತಬೆಟ್ಟು ಗ್ರಾಮದ ಮೂರ್ಜೆ ಸಮೀಪದ ನೇರಳಕಟ್ಟೆ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ.
ಮೃತ ದುರ್ದೈವಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್, ವೇಣೂರಿನ ಮರೋಡಿ ನಿವಾಸಿ ಎಚ್.ಸಿ ಅಬೂಬಕ್ಕರ್ (47)ಎನ್ನುವವರಾಗಿದ್ದಾರೆ.
ಇವರು ವಾಮದಪದವಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ವಾಪಾಸಾಗುತ್ತಿದ್ದ ವೇಳೆ ನೇರಳಕಟ್ಟೆ ಬಳಿ ಎದುರಿನಿಂದ ಬಂದ ಇನ್ನೊಂದು ದ್ವಿಚಕ್ರ ವಾಹನ ಢಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಇನ್ನೊಂದು ಬೈಕಿನ ಸವಾರ ಇರ್ವತ್ತೂರು ನಿವಾಸಿ ದುರ್ಗಾಪ್ರಸಾದ್ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪುಂಜಾಲಕಟ್ಟೆಯ ಇತರ ಸಿಬಂದಿ ಗಳೊಂದಿಗೆ ಕಾರ್ಯಕ್ರಮಕ್ಕೆ ತೆರಳಿದ್ದ ಅಬೂಬಕ್ಕರ್ ಅವರು ತನ್ನ ಬೈಕಿನಲ್ಲಿ ವಾಪಸಾಗುತ್ತಿದ್ದರೆ, ಉಳಿದವರು ಇಲಾಖಾ ಜೀಪಿನಲ್ಲಿ ಹಿಂಬಂದಿಯಿಂದ ಆಗಮಿಸುತ್ತಿದ್ದರು. ನೇರಳಕಟ್ಟೆ ಸಮೀಪ ಎರಡು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.
ಹಿಂಬದಿಯಿಂದ ಜೀಪಿನಲ್ಲಿ ಬರುತ್ತಿದ್ದ ಪೊಲೀಸ್ ಸಿಬಂದಿ ಗಳು ಗಾಯಗಳುಗಳನ್ನು ಕೂಡಲೇ ಜೀಪಿನಲ್ಲಿ ಆಸ್ಪತ್ರೆಗೆ ಸಾಗಿಸಿದ್ದು ಅಬೂಬಕ್ಕರ್ ಅವರು ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಆಸ್ಪತ್ರೆಗೆ ಬೀಗ!
ಗಾಯಾಳು ಆಬೂಬಕ್ಕರ್ ಅವರನ್ನು ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತರಲಾಯಿತು. ಈ ವೇಳೆ ಆಸ್ಪತ್ರೆಗೆ ಬೀಗ ಹಾಕಲಾಗಿತ್ತು. ಇಲ್ಲಿನ ವೈದ್ಯರು ರಜೆಯ ಮೇಲೆ ತೆರಳಿದ್ದರೆ ಇತರ ಸಿಬ್ಬಂದಿ ಗಳು ಕೂಡ ಆಸ್ಪತ್ರೆಯಲ್ಲಿ ಇರಲಿಲ್ಲ.
ಚಿಂತಾಜನಕ ಸ್ಥಿತಿಯಲ್ಲಿ ದ್ದ ಅಬೂಬಕ್ಕರ್ ಅವರನ್ನು ಅದೇ ಜೀಪಿನಲ್ಲಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ.
ಹೆದ್ದಾರಿ ಯಲ್ಲಿರುವ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಮತ್ತು ಯಾವುದೇ ಸಿಬ್ಬಂದಿ ಗಳಿಲ್ಲದೆ ಬೀಗ ಹಾಕಿರುವುದು ಸ್ಥಳೀಯ ರ ಆಕ್ರೋಶ ಕ್ಕೆ ಕಾರಣವಾಗಿದೆ.ಜೀವ ಉಳಿಸಬೇಕಾದ ಸರಕಾರಿ ಆಸ್ಪತ್ರೆಗಳ ಬೇಜಾವಬ್ದಾರಿತನಕ್ಕೆ ಇದೊಂದು ಉದಾಹರಣೆ ಆಗಿದೆ.
ಈ ಹಿಂದೆಯೂ ಕೂಡ ಇದೇ ರೀತಿಯ ಘಟನೆಗಳಾದಗಲೂ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ, ಗಾಯಳುಗಳು , ರೋಗಿಗಳು ಸೂಕ್ತ ಚಿಕಿತ್ಸೆ ಸಿಗದೆ ಪರದಾಡಿದ ಪ್ರಸಂಗಗಳು ನಡೆದಿದೆ ಎಂದು ಸ್ಥಳೀಯ ರು ಆರೋಪಿಸಿದ್ದಾರೆ.
ಪುಂಜಾಲಕಟ್ಟೆ ಪೋಲೀಸ್ ಠಾಣೆಯ ಸಿಬ್ಬಂದಿಗಳು ಕಣ್ಣೆದುರಲ್ಲೆ ಪ್ರಾಣ ಬಿಟ್ಟ ಸಹೋದ್ಯೋಗಿ ಯ ಜೀವ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಕಂಬನಿ ಮಿಡಿದಿದ್ದಾರೆ.
ಸಹೋದ್ಯೋಗಿ ಅಬೂಬಕ್ಕರ್ ಅವರ ಅಕಾಲಿಕ ಸಾವಿನಿಂದ ಪುಂಜಾಲಕಟ್ಟೆ ಠಾಣೆ ಶೋಕತಪ್ತವಾಗಿದೆ.
ಮೃತರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್‌ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
Daily Horoscope; ಇಷ್ಟಾರ್ಥ ಸಿದ್ಧಿಯ ದಿನ..ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ
Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ
Congress: ಜಮೀರ್ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.