Bantwal ಲಾರಿ ಹರಿದು ಬೈಕ್ ಸವಾರ ಸಾವು; ಸಹಸವಾರ ಗಂಭೀರ
Team Udayavani, May 14, 2024, 11:21 PM IST
ಬಂಟ್ವಾಳ: ಫರಂಗಿಪೇಟೆ ಸಮೀಪದ ಮಾರಿಪಳ್ಳ ಸುಜೀರ್ಕ್ರಾಸ್ನಲ್ಲಿ ಲಾರಿ ಹರಿದು ಬೈಕ್ ಸವಾರ ಮೃತಪಟ್ಟು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ.
ಘಟನೆಯಲ್ಲಿ ಉತ್ತರಪ್ರದೇಶ ಮೂಲದ ಸವಾರ ಸೋನು (19) ಮೃತಪಟ್ಟಿದ್ದು, ಸಹಸವಾರ ಕಾರ್ಕಳ ನಿವಾಸಿ ಪ್ರಸಾದ್ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಲಾರಿ ಚಾಲಕನ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಅಪಘಾತ ಸಂಭವಿಸಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಸವಾರರಿಬ್ಬರು ನೆಲ್ಯಾಡಿಯ ಹೊಟೇಲೊಂದರ ಕಾರ್ಮಿಕರಾಗಿದ್ದು, ಅಲ್ಲಿಂದ ಮಂಗಳೂರಿಗೆ ತೆರಳುತ್ತಿರುವಾಗ ಘಟನೆ ನಡೆದಿದೆ. ಮೃತ ಸವಾರನ ಸಂಬಂಧಿಕರು ಉತ್ತರಪ್ರದೇಶದಿಂದ ಬರಬೇಕಿದ್ದು, ಈ ಹಿನ್ನೆಲೆಯಲ್ಲಿ ಮೃತದೇಹವನ್ನು ವೆನ್ಲಾಕ್ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.