![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 29, 2022, 10:55 AM IST
ಸಾಗರ: ನಗರದ ಆರ್‌ಎಂಸಿ ರಸ್ತೆಯಲ್ಲಿ ಶುಕ್ರವಾರ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ನಡೆದ ರಸ್ತೆ ಅಪಘಾತದಲ್ಲಿ ಚಾರ್ಟೆಡ್ ಅಕೌಂಟೆಂಟ್ ರಾಜೇಶ್ ಎಸ್. (45) ಹಾಗೂ ಹರೀಶ್ ಮುಂಡಗೋಡು (24) ಮೃತಪಟ್ಟ ಘಟನೆ ನಡೆದಿದೆ.
ನಗರದ ಆರ್‌ಎಂಸಿ ರಸ್ತೆಯಲ್ಲಿರುವ ತಮ್ಮ ಮನೆಯಿಂದ ಸ್ಕೂಟಿಯಲ್ಲಿ ಹೊರಟಿದ್ದ ರಾಜೇಶ್ ಅವರಿಗೆ ಅದೇ ರಸ್ತೆಯಲ್ಲಿ ವೇಗವಾಗಿ ಬರುತ್ತಿದ್ದ ಬೈಕ್ ಮುಖಾಮುಖಿ ಢಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಾಜೇಶ್ ಅವರ ತಲೆ ಭಾಗಕ್ಕೆ ಗಂಭೀರ ಸ್ವರೂಪದ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟರೆ ಸ್ಕೂಟಿಯ ಹಿಂಭಾಗ ಕುಳಿತಿದ್ದ ಚಂದನ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕಳಿಸಲಾಗಿದೆ. ಬೈಕ್ ಸವಾರ ಹರೀಶ್‌ಗೆ ಕೂಡ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು ಸರ್ಕಾರಿ ಆಸ್ಪತ್ರೆಗೆ ತರುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ.
ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದಲ್ಲಿ ಕಳೆದ ಐದಾರು ವರ್ಷಗಳಿಂದ ಚಾರ್ಟೆಡ್ ಅಕೌಂಟೆಂಟ್ ಆಗಿ ಸೇವೆ ಸಲ್ಲಿಸುತ್ತಿದ್ದ ರಾಜೇಶ್ ಅವರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.