ʻಅಜ್ಜʼನಾದ ಬಿಲ್‌ಗೇಟ್ಸ್: ಮೊದಲ ಮಗುವಿಗೆ ಜನ್ಮ ನೀಡಿದ ಬಿಲ್‌ಗೇಟ್ಸ್ ಪುತ್ರಿ
Team Udayavani, Mar 5, 2023, 7:41 PM IST
ವಾಷಿಂಗ್ಟನ್: ಬಿಲ್‌ಗೇಟ್ಸ್ ಮತ್ತು ಮಿಲಿಂಡಾ ಗೇಟ್ಸ್ ಅವರ ಹಿರಿಯ ಮಗಳು ಜೆನ್ನಿಫರ್ ತಮ್ಮ ಮೊದಲ ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್‌ಗೇಟ್ಸ್ ʻಅಜ್ಜʼನಾಗಿದ್ದಾರೆ.
ಈತ್ತೀಚೆಗಷ್ಟೇ ಭಾರತಕ್ಕೆ ಭೇಟಿ ನೀಡಿದ ಈ ದಿಗ್ಗಜ ಉದ್ಯಮಿ ಭಾರತದ ನಾಯಕರು, ತಾರೆಯರ ಜೊತೆಗೆ ಮಾತುಕತೆ ನಡೆಸಿದ್ದರು. ಭಾರತದ ಆರ್ಥಿಕತೆ, ಆರೋಗ್ಯ ವ್ಯವಸ್ಥೆ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುವ ಮೂಲಕ ಸುದ್ದಿಯಾಗಿದ್ದರು. ಆದರೆ ಇದೀಗ ಬಿಲ್‌ಗೇಟ್ಸ್ ಅಜ್ಜನಾಗುವ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.
ಬಿಲ್‌ಗೇಟ್ಸ್ ಮಗಳು ಜೆನ್ನಿಫರ್ ತಮ್ಮ ಮೊದಲ ಮಗುವಿಗೆ ಜನ್ಮ ನೀಡಿದ್ದು, ಈ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ʻನಮ್ಮ ಆರೋಗ್ಯವಂತ ಪುಟ್ಟ ಕುಟುಂಬದಿಂದ ಪ್ರೀತಿಯನ್ನು ಕಳುಹಿಸುತ್ತಿದ್ದೇವೆʼ ಎಂದು ಬರೆದುಕೊಂಡಿದ್ದಾರೆ.
View this post on Instagram
ಇದೇ ಪೋಸ್ಟನ್ನು ಬಿಲ್‌ಗೇಟ್ಸ್ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲೂ ಹಂಚಿಕೊಂಡಿದ್ದಾರೆ. ಅಲ್ಲದೆ ಮಿಲಿಂದಾ ಗೇಟ್ಸ್ ಕೂಡಾ ಸಂತಸ ವ್ಯಕ್ತಪಡಿಸಿ ಕಾಮೆಂಟ್ ಮಾಡಿದ್ದಾರೆ.
ಜೆನ್ನಿಫರ್ ಗೇಟ್ಸ್ ಮತ್ತು ನಯೆಲ್ ನಾಸರ್ 5 ವರ್ಷದ ಪ್ರೀತಿಯ ಬಳಿಕ 2021ರ ಅಕ್ಟೋಬರ್‌ನಲ್ಲಿ ವಿವಾಹವಾಗಿದ್ದರು. ಜೆನ್ನಿಫರ್ ಮತ್ತು ನಾಸರ್ ಇಬ್ಬರೂ ಇಕ್ವೆಸ್ಟ್ರಿಯನ್ ಸ್ಪರ್ಧೆಯಲ್ಲಿ ಭಾಗವಹಿಸುವವರಾಗಿದ್ದು ಪತಿ ನಾಸರ್ ಒಲಂಪಿಕ್ಸ್‌ನಲ್ಲೂ ಸ್ಪರ್ಧಿಸಿದ್ದಾರೆ.
View this post on Instagram
ಕಳೆದ ವರ್ಷ ನವೆಂಬರ್‌ನಲ್ಲಿ ಜೆನ್ನಿಫರ್ ತಾನು ಪ್ರಗ್ನೆಂಟ್ ಆಗಿರುವುದಾಗಿ ಹೇಳಿಕೊಂಡಿದ್ದರು. ಅಲ್ಲದೇ ನಯೆಲ್ ಜತೆಗಿನ ಫೋಟೋಗಳನ್ನು ಇನ್ಸ್ಟಾದಲ್ಲಿ ಹಂಚಿಕೊಂಡಿದ್ದರು.
ಇದನ್ನೂ ಓದಿ : Anti-Bullying Squad…13ನೇ ವಯಸ್ಸಿನಲ್ಲೇ ಆ್ಯಪ್ ಕಂಡು ಹಿಡಿದ ದಿಟ್ಟೆ…ಯಾರೀಕೆ ಅನುಷ್ಕಾ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.