ಬಿರ್‌ಭೂಮ್ ಹಿಂಸಾಚಾರ : ಸ್ವತಂತ್ರ ಸಿಬಿಐ ತನಿಖೆಗೆ ಕಲ್ಕತ್ತಾ ಹೈಕೋರ್ಟ್ ಆದೇಶ
Team Udayavani, Mar 25, 2022, 12:41 PM IST
ಕೋಲ್ಕತಾ: ಕನಿಷ್ಠ 8 ಜನರನ್ನು ಕೊಂದ ಬಿರ್‌ಭೂಮ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಸ್ವತಂತ್ರ ಸಿಬಿಐ ತನಿಖೆಗೆ ಕಲ್ಕತ್ತಾ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ. ನ್ಯಾಯಾಲಯದ ಆದೇಶದಂತೆ ಸಿಬಿಐ ಏಪ್ರಿಲ್ 7 ರೊಳಗೆ ವರದಿ ಸಲ್ಲಿಸಬೇಕಿದೆ.
ಕೇಂದ್ರ ತನಿಖಾ ಸಂಸ್ಥೆಯಿಂದ ಪ್ರಕರಣದ ಸ್ವತಂತ್ರ ತನಿಖೆಯನ್ನು ಕೋರಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ನಂತರ ನ್ಯಾಯಾಲಯ ಈ ತೀರ್ಪು ನೀಡಿದೆ.
ಪಶ್ಚಿಮ ಬಂಗಾಳದಲ್ಲಿ ಭಾರೀ ರಾಜಕೀಯ ಕೋಲಾಹಲವನ್ನು ಸೃಷ್ಟಿಸಿರುವ ಬಿರ್‌ಭೂಮ್ ಘಟನೆಯು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ರಾಜೀನಾಮೆಯನ್ನು ಕೋರಿ, ಕಾನೂನು ಸುವ್ಯವಸ್ಥೆಯ ಪರಿಸ್ಥಿತಿಯ ಕುರಿತು ಬಂಗಾಳ ಸರ್ಕಾರವನ್ನು ಬಿಜೆಪಿ ಒತ್ತಾಯಿಸಿ, ಕೇಂದ್ರ ಏಜೆನ್ಸಿಗಳಿಂದ ತನಿಖೆಗೆ ಆಗ್ರಹಿಸಿತ್ತು.
ಪ್ರಕರಣಕ್ಕೆ ಸಂಬಂಧಿಸಿ ಟಿಎಂಸಿಯ ಬ್ಲಾಕ್ ಅಧ್ಯಕ್ಷ ಅನಿರುಲ್ ಹೊಸ್ಸಾಯಿನ್ ರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಘಟನೆ ನಡೆದ ದಿನದಂದು ಅನಿರುಲ್ ಅದೇ ಪ್ರದೇಶದಲ್ಲಿ ತಿರುಗಿದ್ದಾಗಿ ಹೇಳಲಾಗಿದ್ದು, ಘಟನೆಯಲ್ಲಿ ಆತನ ಕೈವಾಡವಿದೆ ಎಂದು ಮೃತರ ಕುಟುಂಬಸ್ಥರು ದೂರಿದ್ದರು. ಬಿರ್‌ಭೂಮ್‌ಗೆ ಭೇಟಿ ನೀಡಿದ ಮಮತಾ ಬ್ಯಾನರ್ಜಿ ಅವರೂ ಅನಿರುಲ್‌ಗೆ ಪೊಲೀಸರೆದುರು ಶರಣಾಗುವಂತೆ ಸೂಚಿಸಿದ್ದರು. ಆತ ತಾರಾಪಿತ್‌ನ ಹೊಟೇಲ್ ಒಂದರಲ್ಲಿ ಅಡಗಿ ಕುಳಿತಿದ್ದಾಗಿ ಮೂಲಗಳು ತಿಳಿಸಿವೆ.
ಬೊಗ್ಟುಯಿ ಗ್ರಾಮದಲ್ಲಿ ಮಾರ್ಚ್ 21 ರಂದು ಸಂಜೆ ಸ್ಥಳೀಯ ಟಿಎಂಸಿ ನಾಯಕನ ಹತ್ಯೆಯ ಬಳಿಕ ಹಿಂಸಾಚಾರ ಭುಗಿಲೆದ್ದು, ಮೂವರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ ಎಂಟು ಜನರನ್ನು ಸಜೀವ ದಹನ ಮಾಡಿ ಹತ್ಯಾಕಾಂಡ ನಡೆಸಲಾಗಿತ್ತು.ಘಟನಾ ಸ್ಥಳಕ್ಕೆ ಸಿಎಂ ಮಮತಾ ಬ್ಯಾನರ್ಜಿ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.