![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Jul 21, 2023, 7:54 AM IST
ಬೆಂಗಳೂರು: ಮಧ್ಯಾಹ್ನದ ಬಿಸಿಯೂಟ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಮಂಜೂರಾತಿ ನೀಡಿದ್ದ ಶಿಕ್ಷಣಾಧಿಕಾರಿಗಳು ಸಹಿತ ಒಟ್ಟು 422 ಹುದ್ದೆಗಳನ್ನು 2024ರ ಮಾರ್ಚ್ ಅಂತ್ಯದ ವರೆಗೆ ತಾತ್ಕಾಲಿಕವಾಗಿ ಮುಂದುವರಿಸಿ ಸರಕಾರ ಆದೇಶಿಸಿದೆ.
ಯೋಜನೆಯ ಸಮರ್ಪಕ ಅನುಷ್ಠಾನದ ದೃಷ್ಟಿಯಿಂದ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್‌ಗಳಲ್ಲಿ ಶಾಲಾ ಶಿಕ್ಷಣ ಇಲಾಖೆಯಿಂದ ಈ ಹಿಂದಿನ ವರ್ಷದಲ್ಲಿ ಈ ಹುದ್ದೆಗಳನ್ನು ಸೃಜಿಸಲಾಗಿತ್ತು. ಆ ಎಲ್ಲ ಹುದ್ದೆಗಳನ್ನು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲೂ ಮುಂದುವರಿಸಲು ಇಲಾಖಾ ಆಯುಕ್ತರು ಸರಕಾರಕ್ಕೆ ಮನವಿ ಮಾಡಿದ್ದರು. ಅದರಂತೆ ಬಿಸಿಯೂಟಕ್ಕೆ ಸಂಬಂಧಿಸಿದಂತೆ ಸೃಜಿಸಲಾಗಿದ್ದ 30 ಶಿಕ್ಷಣಾಧಿಕಾರಿ, 178 ಸಹಾಯಕ ನಿರ್ದೇಶಕರು, 214 ಪ್ರಥಮ ದರ್ಜೆ ಸಹಾಯಕರು ಸಹಿತ 422 ಹುದ್ದೆಗಳನ್ನು 2023-24ನೇ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಮುಂದುವರಿಸಲು ಸರಕಾರ ಒಪ್ಪಿಗೆ ನೀಡಿದೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.