ಬಿಜೆಪಿ ಗೆಲುವಿಗೆ ಯಾವುದೇ ಸಮಸ್ಯೆಯಿಲ್ಲ: ಸಿಎಂ ಬೊಮ್ಮಾಯಿ
Team Udayavani, Dec 7, 2021, 11:30 AM IST
ಹುಬ್ಬಳ್ಳಿ: ಲಖನ್ ಜಾರಕಿಹೊಳಿ ಕಾಂಗ್ರೆಸ್ ರೆಬಲ್ ಅಭ್ಯರ್ಥಿ. ಹೀಗಾಗಿ ಬಿಜೆಪಿ ಗೆಲುವಿಗೆ ಯಾವುದೇ ಸಮಸ್ಯೆಯಿಲ್ಲ. ನಮ್ಮ ಅಭ್ಯರ್ಥಿಯ ಗೆಲುವು ನಿಶ್ಚಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಖನ್ ಜಾರಕಿಹೊಳಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವುದರಿಂದ ಪಕ್ಷದ ಅಭ್ಯರ್ಥಿಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಅಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಬೇಕಾದ ಏನೆಲ್ಲಾ ಕೆಲಸ ಕಾರ್ಯಗಳನ್ನು ಮಾಡಬೇಕು ಎನ್ನುವುದರ ಕುರಿತು ಅಲ್ಲಿನ ನಾಯಕರು, ಕಾರ್ಯಕರ್ತರೊಂದಿಗೆ ಚರ್ಚಿಸಲಿದ್ದೇನೆ. ನಮ್ಮ ಪಕ್ಷದ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಎಲ್ಲಾ ಕಡೆ ಪ್ರವಾಸ ಮಾಡಿದ್ದಾರೆ. ಅವರ ಗೆಲುವು ನಿಶ್ಚಿತ ಎಂದರು.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮೇಲೆ ಬಹಳ ಗೌರವವಿತ್ತು. ಆದರೆ ಇತ್ತೀಚೆಗೆ ಅವರು ನೀಡುತ್ತಿರುವ ಹೇಳಿಕೆಗಳು ಅವರ ಬಗ್ಗೆ ಸಾಕಷ್ಟು ನಿರಾಸೆ ತಂದಿದೆ. ಚುನಾವಣಾ ಪ್ರಚಾರಕ್ಕಾಗಿ ಈ ರೀತಿ ಸುಳ್ಳುಗಳನ್ನು ಹೇಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದರು.
ಇದನ್ನೂ ಓದಿ:ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 400ಕ್ಕೂ ಅಧಿಕ ಅಂಕ ಜಿಗಿತ;17,000 ಅಂಕ ದಾಟಿದ ನಿಫ್ಟಿ
ಪ್ರತಿಯೊಂದು ಜಿಲ್ಲೆಯಲ್ಲಿ ಕೊರೋನಾ ಪರೀಕ್ಷೆಗಳು ಕಡ್ಡಾಯವಾಗಿ ನಡೆಸಲಾಗುತ್ತಿದೆ. ಸಂದೇಹ ಇರುವಂತಹ ಕೊರೋನಾ ಸೋಂಕಿತರಿಗೆ ಮಾತ್ರ ಜೀನೋಮ್ ಸೀಕ್ವೆನ್ಸ್ ಟೆಸ್ಟ್ ಮಾಡಲಾಗುತ್ತಿದೆ. ಅಷ್ಟೇ ಅಲ್ಲದೆ ಹೆಚ್ಚಿನ ಪರೀಕ್ಷೆಗಾಗಿ ರಾಷ್ಟ್ರೀಯ ಜೈವಿಕ ವಿಜ್ಞಾನ ಕೇಂದ್ರ (ಎನ್ ಸಿ ಬಿಎಸ್) ಗೆ ಕಳುಹಿಸಿಕೊಡಲಾಗಿದೆ ಕಡಿಮೆ ಸಮಯದಲ್ಲಿ ವರದಿಗಳು ಬರುತ್ತಿವೆ ಎಂದರು.
ಜೇನೋಮ್ ಸೀಕ್ವೆನ್ಸ್ ಪ್ರಯೋಗಾಲಯ ಮಾಡುವುದಕ್ಕೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಅದಕ್ಕೆ ಬೇಕಾಗಿರುವ ಪರಿಣಿತರ ಮತ್ತು ತಂತ್ರಜ್ಞಾನಗಳ ತೆಗೆದುಕೊಳ್ಳುವುದರ ಕುರಿತು ಆರೋಗ್ಯ ಕಾರ್ಯದರ್ಶಿ ಸೂಚಿಸಲಾಗಿದೆ ಎಂದು ತಿಳಿಸಿದರು.
ಸಚಿವ ಸಂಪುಟ ವಿಸ್ತರಣೆ ಕುರಿತು ಅವರಿವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ರೇಣುಕಾರ್ಚಾ ಅವರ ಹೇಳಿಗೆ ಟಾಂಗ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.