ಮಸ್ಕಿಯಲ್ಲಿ ಬಿಜೆಪಿ, ತುರ್ವಿಹಾಳದಲ್ಲಿ ಕಾಂಗ್ರೆಸ್;ಕೆಲವೆಡೆ ಅತಂತ್ರ
Team Udayavani, Dec 30, 2021, 12:08 PM IST
ರಾಯಚೂರು: ಸ್ಥಳೀಯ ಸಂಸ್ಥೆಗಳ ಫಲಿತಾಂಶ ಹೊರಬಿದ್ದಿದ್ದು, ಮಸ್ಕಿ ಪುರಸಭೆ ಬಿಜೆಪಿ ತೆಕ್ಕೆಗೆ ಜಾರಿದರೆ, ತುರ್ವಿಹಾಳ ಕಾಂಗ್ರೆಸ್ ಪಾಲಾಗಿದೆ. ಇನ್ನೂ ಬಳಗಾನೂರು, ಕವಿತಾಳ, ಸಿರವಾರ ಪಟ್ಟಣ ಪಂಚಾಯಿತಿಯಲ್ಲಿ ಯಾವುದೇ ಪಕ್ಷಕ್ಕೆ ನಿಚ್ಚಳ ಬಹುಮತ ಸಿಗದ ಕಾರಣ ಅತಂತ್ರ ಸ್ಥಿತಿ ಏರ್ಪಟ್ಟಿದೆ. ಬಳಗಾನೂರು ಪಟ್ಟಣ ಪಂಚಾಯಿತಿಯಲ್ಲಿ ಪಕ್ಷೇತರರೇ ನಿರ್ಣಾಯಕರಾಗಿದ್ದಾರೆ.
ಮಸ್ಕಿ ಪುರಸಭೆಯಲ್ಲಿ ಒಟ್ಟು 23 ಸ್ಥಾನಗಳಲ್ಲಿ ಬಿಜೆಪಿಗೆ 14 ಲಭಿಸಿದರೆ, ಕಾಂಗ್ರೆಸ್ 9 ಸ್ಥಾನ ಪಡೆದಿದೆ. ಇನ್ನೂ ಬಳಗಾನೂರು ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿಗೆ 6 ಸ್ಥಾನ ಸಿಕ್ಕರೆ, ಕಾಂಗ್ರೆಸ್ 5, ಒಬ್ಬ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
ಸಿಂಧನೂರು ತಾಲೂಕಿನ ತುರುವಿಹಾಳ ಪಟ್ಟಣ ಪಂಚಾಯಿತಿ ಕಾಂಗ್ರೆಸ್ ಪಾಲಾಗಿದೆ. ಕಾಂಗ್ರೆಸ್ 9 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಅಧಿಕಾರ ಚುಕ್ಕಾಣಿ ಹಿಡಿದರೆ, ಬಿಜೆಪಿ ಕೇವಲ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಮೂವರು ಪಕ್ಷೇತರರು ಗೆಲುವು ಸಾಧಿಸಿದ್ದಾರೆ.
ಇನ್ನೂ ಸಿರವಾರ ಪಟ್ಟಣ ಪಂಚಾಯಿತಿಯಲ್ಲಿ ಒಟ್ಟು 20 ಸ್ಥಾನಗಳಲ್ಲಿ ಕಾಂಗ್ರೆಸ್ 9 ಸ್ಥಾನಗಳಲ್ಲಿ ಗೆಲವು ಸಾಧಿಸಿದರೆ, ಬಿಜೆಪಿ 6, ಜೆಡಿಎಸ್ 3 ಹಾಗೂ ಪಕ್ಷೇತರರು ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಇಲ್ಲೂ ಸದ್ಯಕ್ಕೆ ಅತಂತ್ರ ಪರಿಸ್ಥಿತಿ ಏರ್ಪಟ್ಟಿದೆ. ಕವಿತಾಳ ಪಟ್ಟಣ ಪಂಚಾಯಿತಿಯಲ್ಲಿಯೂ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಒಟ್ಟು 16 ಸ್ಥಾನಗಳಲ್ಲಿ 8ರಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದರೆ, 4 ಬಿಜೆಪಿ, ಮೂರು ಜೆಡಿಎಸ್ ಹಾಗೂ ಒಬ್ಬ ಪಕ್ಷೇತರರು ಗೆಲುವು ಸಾಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.