BJP-JDS ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಲಾಭ: ಎಚ್.ವಿಶ್ವನಾಥ್

ಸದ್ಯಕ್ಕೆ ಯಾವ ರಾಜಕೀಯ ಪಕ್ಷದಲ್ಲಿಲ್ಲ... ರಾಜಕೀಯ ನಿವೃತ್ತಿ ಆಗಲ್ಲ

Team Udayavani, Sep 10, 2023, 6:51 PM IST

1-sadsad

ವಿಜಯಪುರ : ಜೆಡಿಎಸ್ ಪಕ್ಷದೊಂದಿಗೆ ಚುನಾವಣಾ ಪೂರ್ವ ಮೈತ್ರಿ ಹಾಗೂ ಸ್ಥಾನ ಹಂಚಿಕೆ ಆಗಿರುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದ್ದಾರೆ, ಎರಡೂ ಪಕ್ಷಗಳ ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಲಾಭವಾಗಲಿದೆ ಎಂದು ಮೇಲ್ಮನೆ ಹಿರಿಯ ಶಾಸಕರಾದ ಶಫರ್ಡ್ಸ್ ಇಂಡಿಯಾ ಇಂಟರನ್ಯಾಶನಲ್ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಎಚ್.ವಿಶ್ವನಾಥ್ ಅಭಿಪ್ರಾಯಪಟ್ಟರು.

ಭಾನುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜಕೀಯವಾಗಿ ಪರಸ್ಪರ ಹೊಂದಾಣಿ ಮಾಡಿಕೊಳ್ಳುವ ವಿಷಯವೇನೂ ಹೊಸದಲ್ಲ. ಕರ್ನಾಟಕಕ್ಕೂ ಮೊದಲಲ್ಲ. ಆದರೆ ರಾಜ್ಯದ ಮತದಾರರು ಈ ಮೈತ್ರಿಯಿನ್ನು ಹೇಗೆ ಸ್ವೀಕರಿಸುತ್ತಾರೆ ಎಂಬುದು ಚುನಾವಣೆ ಫಲಿತಾಂಶ ಹೊರ ಬಿದ್ದಾಗ ತಿಳಿಯಲಿದೆ ಎಂದರು.

ಕುಟುಂಬ ಸದಸ್ಯರಿಗೆ ಯಾವ್ಯಾವ ಕ್ಷೇತ್ರದಲ್ಲಿ ಟಿಕೆಟ್ ಕೊಡಬೇಕು ಎಂದು ಚರ್ಚೆ ನಡೆಸಿದ್ದಾರೆ. ಈ ಹಿಂದೆ ದಲಿತ, ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ಕೇಳಿದರೂ ಕೊಡಲಿಲ್ಲ. ಆಗ ಗೆಜ್ಜೆ ಪೂಜೆ, ಈಗ ನಿಜವಾದ ಸೀರಿಯಲ್. ಜಡಿಎಸ್ ಪಕ್ಷ ಜಾತ್ಯತೀತ ಎಂದು ಇರಿಸಿಕೊಂಡಿರುವುದು ಹೆಸರಿಗೆ ಮಾತ್ರ ಎಂದು ವಾಗ್ದಾಳಿ ನಡೆಸಿದರು.

ಏಕೆಂದರೆ ಲೋಕಸಭೆ ಕಳೆದ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡ ಕಾರಣ ಬಿಜೆಪಿ ಪಕ್ಷಕ್ಕೆ ಲಾಭವಾಯ್ತು. ಇದೀಗ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದು ಪರಿಣಾಮ ಸಕಾರಾತ್ಮಕವೋ ಅಥವಾ ನಕಾರಾತ್ಮಕವೋ ಎಂಬುದನ್ನು ಈಗಲೇ ಹೇಳಲಾಗದು. ಆದರೆ ರಾಜ್ಯದ ಮಟ್ಟಿಗೆ ಕಾಂಗ್ರೆಸ್ ಪಕ್ಷಕ್ಕೆ ಲಾಭ ತರಲಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸದ್ಯಕ್ಕೆ ನಾನು ಯಾವುದೇ ರಾಜಕೀಯ ಪಕ್ಷದಲ್ಲಿಲ್ಲ. ಹಾಗಂತ ನಾನು ರಾಜಕೀಯ ನಿವೃತ್ತಿ ಆಗುವುದಿಲ್ಲ. ನನ್ನ ಜೀವಿತಾವಧಿಯುದ್ದಕ್ಕೂ ಸಕ್ರೀಯ ರಾಜಕೀಯ ಮಾಡುತ್ತೇನೆ ಎಂದರು.

ಸಚಿವ ಸ್ಥಾನ ಸಿಗದಿರುವ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ ಬಹಿರಂಗವಾಗಿ ನೋವು ಹೊರ ಹಾಕಬಾರದಿತ್ತು. ಅವರಿಗೆ ನೋವು ಇರವುದು ಸಹಜವೇ ಆದರೂ ಬಹಿರಂಗ ಹೇಳಿಕೆ ಸರಿಯಲ್ಲ. ಏಕೆಂದರೆರ ಈಡಗ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷ ನೀಡಿದಷ್ಟು ಅವಕಾಶವನ್ನು ಬೇರೆ ಯಾವುದೇ ಪಕ್ಷ ನೀಡಿಲ್ಲ ಎಂದರು.

ರಾಜಕೀಯ ಶಕ್ತಿಗಾಗಿ ಶಫರ್ಡ್ಸ್ ಇಂಡಿಯಾ ಇಂಟರನ್ಯಾಶನಲ್ ಸಂಘಟನೆಯನ್ನು 2014 ರಲ್ಲೇ ಹುಟ್ಟುಹಾಕಲಾಗಿದೆ. ನಾನು ಲೋಕಸಭೆ ಸದಸ್ಯನಾಗಿದ್ದಾಗಲೇ ರಾಷ್ಟ್ರ ವಿವಿಧ ರಾಜ್ಯಗಳಲ್ಲಿ ಹರಿದು-ಹಂಚಿಹೋಗಿರುವ ಕುರುಗಾಯಿ ಸಮುದಾಯದ ಸಂಘಟನೆಗಾಗಿ ಈ ಸಂಸ್ಥೆಯನ್ನು ಸ್ಥಾಪಿಸಲಾಗಿದೆ. ಇದು ರಾಜಕೀಯ ಕಾರಣಕ್ಕೆ ಈಗ ಹುಟ್ಟುಹಾಕಿದ ಸಂಘಟನೆಯಲ್ಲ ಎಂದು ಸ್ಪಷ್ಟಪಡಿಸಿದರು.

ರಾಜಕೀಯವಾಗಿ ದುರ್ಬಲವಾಗಿರುವ ಕುರಿಗಾಯಿ ಸಮುದಾಯದ ಸಂಘಟನೆಗಾಗಿ ರಾಷ್ಟ್ರ ಮಟ್ಟದಲ್ಲಿ ಸಂಘಟನೆ ಮಾಡುತ್ತ ಬರಲಾಗಿದೆ. ಈಗಾಗಲೇ ದೇಶದ ಹಲವು ರಾಜ್ಯಗಳಲ್ಲಿ 8 ಸಮಾವೇಶ ಮಾಡಿದ್ದು, ಇದೀಗ ಕರ್ನಾಟಕದ ಬೆಳಗಾವಿ ಜಿಲ್ಲೆಯಲ್ಲಿ ಆಕ್ಟೋಬರ್ 3 ರಂದು 9ನೇ ರಾಷ್ಟ್ರೀಯ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.

ಪರಿಶಿಷ್ಟ ಪಂಗಡದ ಸಮುದಾಯದ ಪಟ್ಟಿಗೆ ಸೇರಿಸುವ ಕುರಿತು ಸಮಾವೇಶದಲ್ಲಿ ಕೇಂದ್ರದ ಮೇಲೆ ಒತ್ತಡ ಹೇರಲು ಚರ್ಚೆ ನಡೆಯಲಿದೆ. ಇಂತ ಸಮಾವೇಶದ ಕುರಿಗಾಯಿ ವೃತ್ತಿಯ ನಮ್ಮ ಸಮುದಾಯವನ್ನು ಸಂಘಟಿಸುವ ಜೊತೆಗೆ ರಾಜಕೀಯ ಜಾಗೃತಿ ಹಾಗೂ ರಾಜಕೀಯ ಶಕ್ತಿ ಪಡೆಯುವ ಉದ್ದೇಶ ಹೊಂದಲಾಗಿದೆ ಎಂದರು.

ಡಾ.ಬಿ.ಆರ್.ಅಂಬೇಡ್ಕರ್ ಅವರು ಶಿಕ್ಷಣ ಹಾಗೂ ರಾಜಕೀಯ ಶಕ್ತಿ ದೊರಕದ ಹೊರತಾಗಿ ಹಿಂದುಳಿದ ಸಮುದಾಯಗಳು ಬಲವರ್ಧನೆ ಆಗಲು ಸಾಧ್ಯವಿಲ್ಲ. ಸಾಮಾಜಿಕ ನ್ಯಾಯಕ್ಕಾಗಿ ರಾಜಕೀಯ ಅಧಿಕಾರ ಹಂಚಿಕೆಯ ಅಗತ್ಯವಿದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಹೀಗಾಗಿಯೇ ನಮ್ಮ ಸಂಘಟನೆಯನ್ನು ರಾಷ್ಟ್ರೀಯ ಮಟ್ಟದಲ್ಲಿ ಬಲಗೊಳಿಸಲು ಯೋಜಿಸಿದ್ದೇವೆ ಎಂದರು.

ರಾಷ್ಟ್ರ ಮಟ್ಟದಲ್ಲಿ ಸುಮಾರು 12 ಕೋಟಿ ಸಮುದಾಯದ ಜನಸಂಖ್ಯೆ ಇರುವ ಕುರುಬ ಸಮುದಾಯ ಬೇರೆ ಬೇರೆ ಹೆಸರುಗಳಿಂದ ಕರೆಯಲ್ಪಡುತ್ತಿದೆ. ಕೇಂದ್ರ ಹಾಗೂ ವಿವಿಧ ರಾಜ್ಯಗಳಲ್ಲಿ ಸಚಿವರಾಗಿ, ರಾಜ್ಯಪಾಲರಂಥ ಹುದ್ದೆ ಮಾತ್ರ ಅಲಂಕರಿಸಲು ಸಾಧ್ಯವಾಗಿದೆ. ಆದರೆ ಕರ್ನಾಟಕದ ಮೂಲಕ ಸಿದ್ಧರಾಮಯ್ಯ ಅವರು ರಾಷ್ಟ್ರ ಮಟ್ಟದಲ್ಲಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ ಏಕೈಕ ನಾಯಕ. ಹೀಗಾಗಿ ಬೆಳಗಾವಿ ಅಧಿವೇಶನದಲ್ಲಿ ಅವರಿಗಾಗಿ ಅಭಿನಂದನಾ ಸಮಾರಂಭ ನಡೆಲಿದೆ ಎಂದರು.

ಮಾಜಿ ಸಚಿವರಾದ ಸಂಘಟನೆಯ ರಾಷ್ಟ್ರೀಯ ಉಪಾಧ್ಯಕ್ಷ ಎಚ್.ಎಂ.ರೇವಣ್ಣ, ರಾಜ್ಯಾಧ್ಯಕ್ಷ ಸಿ.ಎಂ.ನಾಗರಾಜ, ಮಹಿಳಾ ರಾಜ್ಯಾಧ್ಯಕ್ಷೆ ಪ್ರೇಮಲತಾ, ಸೋಮನಾಥ ಕಳ್ಳಿಮನಿ, ರವಿ ಕಿತ್ತೂರ ಸೇರಿದಂತೆ ಇತರರು ಉಪ್ಥಿತರಿದ್ದರು.

ಟಾಪ್ ನ್ಯೂಸ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ

1-edd

Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು

Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ದರ್ಶನ್‌

Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ದರ್ಶನ್‌

GV-

New Bill: ಇನ್ನು ಪಂಚಾಯತ್‌ರಾಜ್‌ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ

BYV-yathnal

BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

sagara

Sagara: ಕಾಡಾನೆಗಳ ಹಾವಳಿ; ಲಕ್ಷಾಂತರ ರೂ. ಬೆಳೆ ನಷ್ಟ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.