ದೆಹಲಿ ಪ್ರತಿಭಟನೆ-ಮುಸ್ಲಿಮ್ ವಿರೋಧಿ ಘೋಷಣೆ ; ಬಿಜೆಪಿ ಮುಖಂಡ ಉಪಾಧ್ಯಾಯ ಸೇರಿ 6 ಮಂದಿ ಬಂಧನ
ಅಶ್ವಿನಿ ಉಪಾಧ್ಯಾಯ ದೆಹಲಿ ಪೊಲೀಸ್ ಕಮಿಷನರ್ ಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
Team Udayavani, Aug 10, 2021, 10:27 AM IST
ನವದೆಹಲಿ:ದೆಹಲಿಯ ಜಂತರ್ ಮಂತರ್ ಸಮೀಪ ಭಾರತೀಯ ಜನತಾ ಪಕ್ಷ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಮುಸ್ಲಿಮ್ ವಿರೋಧಿ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಅಶ್ವಿನಿ ಉಪಾಧ್ಯಾಯ ಹಾಗೂ ಇತರ ಐದು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಸಿಆರ್ ಪಿಎಫ್ ತುಕಡಿ ಮೇಲೆ ಉಗ್ರರ ದಾಳಿ: ಗಾಯಗೊಂಡ ಓರ್ವ ಯೋಧ
ಪ್ರಕರಣದ ಕುರಿತಂತೆ ವಿಚಾರಣೆಗೆ ಹಾಜರಾಗುವಂತೆ ಅಶ್ವಿನಿ ಉಪಾಧ್ಯಾಯಗೆ ಸೋಮವಾರ ಕೊನ್ನಾಟ್ ಪ್ಲೇಸ್ ಪೊಲೀಸ್ ಠಾಣೆ ಸಮನ್ಸ್ ನೀಡಿತ್ತು. ಪ್ರತಿಭಟನೆ ಸಂಘಟಿಸಿದ್ದ ಉಪಾಧ್ಯಯ ಅವರನ್ನು ನಿನ್ನೆ ತಡ ರಾತ್ರಿವರೆಗೂ ಪೊಲೀಸರು ವಿಚಾರಣೆಗೊಳಪಡಿಸಿದ್ದರು ಎಂದು ವರದಿ ಹೇಳಿದೆ.
ವಿನೋದ್ ಶರ್ಮಾ, ದೀಪಕ್ ಸಿಂಗ್, ದೀಪಕ್, ವಿನೀತ್ ಕ್ರಾಂತಿ, ಪ್ರೀತ್ ಸಿಂಗ್ ಅವರನ್ನೂ ಪೊಲೀಸರು ವಿಚಾರಣೆಗೊಳಪಡಿಸಿದ್ದು, ಎಲ್ಲಾ ಆರು ಮಂದಿಯನ್ನು ಕೂಡಲೇ ಬಂಧಿಸುವ ಸಾಧ್ಯತೆ ಇದ್ದಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.
ಈ ಪ್ರಕರಣದಲ್ಲಿ ಯಾರೆಲ್ಲಾ ಬಂಧನಕ್ಕೊಳಗಾಗಲಿದ್ದಾರೆಯೋ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ದೆಹಲಿ ಪೊಲೀಸ್ ಕಮಿಷನರ್ ರಾಕೇಶ್ ಅಸ್ತಾನಾ ತಿಳಿಸಿದ್ದಾರೆ. ಜಂತರ್ ಮಂತರ್ ಸಮೀಪ ನಡೆದಿದ್ದ ಪ್ರತಿಭಟನೆ ವೇಳೆ ಕೋಮು ಪ್ರಚೋದಕ ಘೋಷಣೆ ಕೂಗಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ನಂತರ ಈ ಬಗ್ಗೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಘಟನೆ ಬಗ್ಗೆ ಅಶ್ವಿನಿ ಉಪಾಧ್ಯಾಯ ಹೇಳಿದ್ದೇನು?
ವೈರಲ್ ಆದ ವಿಡಿಯೋದಲ್ಲಿ ಒಬ್ಬ ವ್ಯಕ್ತಿ ಪ್ರಚೋದನಕಾರಿ ಭಾಷಣ ಮಾಡಿರುವುದು ದಾಖಲಾಗಿದೆ. ಈ ವಿಚಾರದಲ್ಲಿ ಟ್ವಿಟರ್, ಫೇಸ್ ಬುಕ್ ಮತ್ತು ವಾಟ್ಸಪ್ ನಲ್ಲಿ ನನ್ನ ವಿರುದ್ಧ ಅವಹೇಳನ ಮಾಡಿದ್ದಾರೆ. ಆದರೆ ಈ ವಿಡಿಯೋದಲ್ಲಿ ಇರುವ ವ್ಯಕ್ತಿಗಳನ್ನು ನಾನು ಯಾವತ್ತೂ ಭೇಟಿಯೂ ಆಗಿಲ್ಲ, ಅವರ ಪರಿಚಯವೂ ಇಲ್ಲ. ಅಷ್ಟೇ ಅಲ್ಲ ಕಾರ್ಯಕ್ರಮಕ್ಕೆ ಆ ವ್ಯಕ್ತಿಗಳನ್ನು ಆಹ್ವಾನಿಸಿರಲಿಲ್ಲವಾಗಿತ್ತು ಎಂದು ಅಶ್ವಿನಿ ಉಪಾಧ್ಯಾಯ ದೆಹಲಿ ಪೊಲೀಸ್ ಕಮಿಷನರ್ ಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.