ವಿಪ್ ಉಲ್ಲಂಘಿಸಿ ಕೈ ಸೇರಿದ್ದ ಬಿಜೆಪಿ ಜಿ.ಪಂ.ಸದಸ್ಯರು ಅನರ್ಹ: ಚುನಾವಣಾ ಆಯೋಗ
Team Udayavani, Jun 15, 2020, 7:22 PM IST
ಧಾರವಾಡ : ಬಿಜೆಪಿ ಪಕ್ಷದಿಂದ ಧಾರವಾಡ ಜಿ.ಪಂ.ಗೆ ಸದಸ್ಯರಾಗಿ ಆಯ್ಕೆಯಾಗಿ ಜಿ.ಪಂ.ಅಧ್ಯಕ್ಷರಾಗಿದ್ದ ಬಿಜೆಪಿಯ ಚೈತ್ರಾ ಶಿರೂರ ಅವರ ವಿರುದ್ದ ಕಾಂಗ್ರೆಸ್ ಸದಸ್ಯರು ಮಂಡಿಸಿದ ಅವಿಶ್ವಾಸ ಗೊತ್ತುವಳಿ ಮಂಡನೆ ಪರ ಮತ ಚಲಾವಣೆ ಮಾಡಿದ್ದ ನಾಲ್ವರು ಸದಸ್ಯರನ್ನು ಚುನಾವಣಾ ಆಯೋಗ ಅನರ್ಹಗೊಳಿಸಿ, ಆದೇಶ ನೀಡಿದೆ.
ಗರಗ ಜಿ.ಪಂ.ಕ್ಷೇತ್ರದ ರತ್ನಾ ದಯಾನಂದ ಪಾಟೀಲ, ಗಳಗಿ ಕ್ಷೇತ್ರದ ಅಣ್ಣಪ್ಪ ಫಕ್ಕೀರಪ್ಪ ದೇಸಾಯಿ, ತಬಕದಹೊನ್ನಿಹಳ್ಳಿ ಕ್ಷೇತ್ರದ ಮಂಜವ್ವ ಶೇಖಪ್ಪ ಹರಿಜನ, ಗುಡಕೇರಿ ಕ್ಷೇತ್ರದ ಜ್ಯೋತಿ ಬೆಂತೂರ ಅವರದ್ದೇ ಸದಸ್ಯತ್ವ ಅನರ್ಹಗೊಂಡಿದೆ.
2019 ಫೆ.5 ರಂದು ನಡೆದ ವಿಶೇಷ ಸಭೆಯಲ್ಲಿ ಜಿ.ಪಂ.ಅಧ್ಯಕ್ಷೆ ಚೈತ್ರಾ ಶಿರೂರ ಅವರ ವಿರುದ್ದ ಕಾಂಗ್ರೆಸ್ ಪಕ್ಷದ ಸದಸ್ಯರು ಮಂಡಿಸಲಾದ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಜಯವಾಗಿತ್ತು. ಒಟ್ಟು 22 ಸಂಖ್ಯಾ ಬಲದ ಜಿ.ಪಂ.ನಲ್ಲಿ 10 ಬಿಜೆಪಿ ಹಾಗೂ 11 ಕಾಂಗ್ರೆಸ್, ಓರ್ವ ಪಕ್ಷೇತರ ಸದಸ್ಯರಿದ್ದರು. ಈ ಪೈಕಿ ಅವಿಶ್ವಾಸ ಗೊತ್ತುವಳಿ ಪರ 15 ಮತಗಳು ಬೇಕಾಗಿತ್ತು. ಆದರೆ ಸಭೆಯಲ್ಲಿ ಕಾಂಗ್ರೆಸ್ 11, ಬಿಜೆಪಿ 4 ಹಾಗೂ ಪಕ್ಷೇತರ ಸದಸ್ಯರು ಸೇರಿ ಒಟ್ಟು 16 ಮತಗಳು ಬಿದ್ದರೆ ಗೊತ್ತುವಳಿ ವಿರುದ್ದ ಬಿಜೆಪಿಯ 6 ಸದಸ್ಯರ ಮತಗಳು ಬಿದ್ದಿದ್ದವು. ಈ ಮೂಲಕ ಅವಿಶ್ವಾಸ ಗೊತ್ತುವಳಿ ಮಂಡನೆ ಪರ ಹೆಚ್ಚು ಮತಗಳು ಬಿದ್ದು, ಅದು ಅಂಗೀಕಾರಗೊಳ್ಳುವ ಮೂಲಕ ಚೈತ್ರಾ ಶಿರೂರ ಅಧ್ಯಕ್ಷ ಸ್ಥಾನದಿಂದ ಕೆಳಗಡೆ ಇಳಿಯಬೇಕಾಗಿತ್ತು. ಇನ್ನೂ ಕಾಂಗ್ರೆಸ್ ಪರ ಮತ ಚಲಾಯಿಸಿದ ಆ ನಾಲ್ವರು ಬಿಜೆಪಿ ಸದಸ್ಯರು, ಪಕ್ಷದ ಜಿಲ್ಲಾಧ್ಯಕ್ಷರ ಕೈಗೆ ಸಿಕ್ಕಿರಲಿಲ್ಲ. ಅದರಲ್ಲೂ ಮಂಜವ್ವ ಹರಿಜನ ಅವರ ಅಪಹರಣ ಮಾಡಲಾಗಿದೆ ಎಂಬುದಾಗಿ ಕಲಘಟಗಿ ಠಾಣೆಯಲ್ಲಿ ದೂರ ಸಹ ದಾಖಲಿಸಲಾಗಿತ್ತು. ಜಿಲ್ಲಾಧ್ಯಕ್ಷರ ಕೈಗೆ ಸಿಗದೇ ತಿರುಗಾಡಿದ್ದ ಈ ನಾಲ್ವರು ಸದಸ್ಯರು, ವಿಶೇಷ ಸಭೆಯಲ್ಲಿ ಪ್ರತ್ಯಕ್ಷರಾಗಿದ್ದರು. 45 ವಿಷಯದಲ್ಲಿ ಮುಕ್ತಾಯಗೊಂಡ ಸಭೆಯ ಬಳಿಕ ಅವರನ್ನು ಪೊಲೀಸರ ಭದ್ರತೆಯಲ್ಲಿ ವಾಹನದ ಮೂಲಕವೇ ಸುರಕ್ಷಿತವಾಗಿ ಹೊರಗಡೆ ಕಳುಹಿಸಲಾಗಿತ್ತು. ಇದಾದ ಬಳಿಕ ನಡೆದ ಅಧ್ಯಕ್ಷರ ಆಯ್ಕೆಯಲ್ಲಿ ಕಾಂಗ್ರೆಸ್‌ನ ವಿಜಯಲಕ್ಷ್ಮೀ ಪಾಟೀಲ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.
ಆಗ ಅಸ್ತಿತ್ವದಲ್ಲಿದ್ದ ಸಮ್ಮಿಶ್ರ ಸರಕಾರಕ್ಕೆ ಆಪರೇಷನ್ ಕಮಲದ ಭೀತಿ ನೀಡುತ್ತಿರುವ ಬಿಜೆಪಿ ಪಕ್ಷಕ್ಕೆ ಧಾರವಾಡ ಜಿ.ಪಂ.ನಲ್ಲಿ ಕಾಂಗ್ರೆಸ್ ಪಕ್ಷವೇ ಯಶಸ್ವಿಯಾಗಿ ಆಪರೇಷನ್ ಮಾಡಿ, ಜಿ.ಪಂ.ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳುವಂತೆ ಮಾಡಿತ್ತು. ಮಾಜಿ ಸಿಎಂ, ಬಿಜೆಪಿ ರಾಜ್ಯ
ನಾಯಕರಾಗಿರುವ ಜಗದೀಶ ಶೆಟ್ಟರ್, ಸಂಸದ ಪ್ರಹ್ಲಾದ ಜೋಶಿ ಅವರಂತಹ ಘಟಾನುಘಟಿ ನಾಯಕರ ಜಿಲ್ಲೆಯಲ್ಲೇ ಆಪರೇಷನ್ ಕೈ ಆಗಿ ಜಿ.ಪಂ.ಅಧ್ಯಕ್ಷ ಸ್ಥಾನ ಉಳಿಸಿಕೊಳ್ಳುವಲ್ಲಿ ಬಿಜೆಪಿ ವಿಫಲಗೊಂಡಿತ್ತು. ಹೀಗಾಗಿ ಬಿಜೆಪಿ ಚಿಹ್ನೆಯಡಿ ಆಯ್ಕೆಯಾಗಿದ್ದ ನಾಲ್ವರು ಸದಸ್ಯರು ಪಕ್ಷದ ವಿಪ್ ಉಲ್ಲಂಘನೆ ಮಾಡಿದ್ದು, ಅವರನ್ನು ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹಗೊಳಿಸುವಂತೆ ಅಂದಿನ ಬಿಜೆಪಿ ಜಿಲ್ಲಾ ಅಧ್ಯಕ್ಷ ಈರಣ್ಣ ಜಡಿ ಅವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಇದೀಗ ಚುನಾವಣಾ ಆಯೋಗ ಅನರ್ಹಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Contracter Case: ಗುತ್ತಿಗೆದಾರ ಆತ್ಮಹತ್ಯೆ: ಸಚಿವ ಪ್ರಿಯಾಂಕ್ ರಾಜೀನಾಮೆಗೆ ಬಿಜೆಪಿ ಆಗ್ರಹ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಫೆ.21ರಂದು ತೆರೆಗೆ ಬರಲಿದೆ ʼವಿಷ್ಣು ಪ್ರಿಯಾʼ
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.