![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 20, 2022, 3:54 PM IST
ಮುಂಬಯಿ : ಗುಜರಾತ್ ಮತ್ತು ರಾಜಸ್ಥಾನದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿಯು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವನ್ನು ಪ್ರಚಾರ ಮಾಡುತ್ತಿದೆ ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ ಭಾನುವಾರ ಆರೋಪಿಸಿದ್ದಾರೆ.
ಶಿವಸೇನೆಯ ಮುಖವಾಣಿ ‘ಸಾಮ್ನಾ’ದಲ್ಲಿ ತಮ್ಮ ಸಾಪ್ತಾಹಿಕ ಅಂಕಣ ‘ರೋಖ್‌ಥೋಕ್’ನಲ್ಲಿ, ರಾವುತ್ ಅವರು ಕಾಶ್ಮೀರದಿಂದ ಸ್ಥಳಾಂತರಗೊಂಡ ಕಾಶ್ಮೀರಿ ಪಂಡಿತರನ್ನು ಹಿಂದಿರುಗಿಸುವುದನ್ನು ಖಚಿತಪಡಿಸಿಕೊಳ್ಳುವುದು ಬಿಜೆಪಿಯ ಭರವಸೆಯಾಗಿದೆ, ಆದರೆ 370 ನೇ ವಿಧಿಯನ್ನು ರದ್ದುಗೊಳಿಸಿದರೂ ಅದು ಸಂಭವಿಸಿಲ್ಲ. ಚಿತ್ರದಲ್ಲಿ ಹಲವಾರು ಕಠಿಣ ಸತ್ಯಗಳನ್ನು ಹತ್ತಿಕ್ಕುವ ಪ್ರಯತ್ನವನ್ನು ಮಾಡಲಾಗಿದೆ ಎಂದು ಬರೆದಿದ್ದಾರೆ.
ಇದನ್ನೂ ಓದಿ : ಕಾಶ್ಮೀರದಲ್ಲಿ ಆಗಿದ್ದಕ್ಕೆಲ್ಲ ಪಾಕ್ ಮತ್ತು ಉಗ್ರತ್ವ ಕಾರಣ : ಗುಲಾಂ ನಬಿ ಆಜಾದ್
“ಕಥೆಯು ಕಾಶ್ಮೀರದಲ್ಲಿ ಹಿಂದೂ ಪಂಡಿತರ ಪಲಾಯನವನ್ನು ಆಧರಿಸಿದೆ, ಅವರ ಹತ್ಯೆಗಳು, ಅವರ ಮೇಲೆ ಮಾಡಿದ ದೌರ್ಜನ್ಯಗಳು ಮತ್ತು ಮನಸ್ಸನ್ನು ಕಲಕುತ್ತದೆ. ಆದರೆ ಅದಕ್ಕಿಂತ ಹೆಚ್ಚಾಗಿ, ಹಿಂದೂ-ಮುಸ್ಲಿಮರನ್ನು ವಿಭಜಿಸುವ ಪ್ರಯತ್ನ ಚಿತ್ರದ್ದಾಗಿದ್ದು, ಮತ್ತೊಮ್ಮೆ ಮುಂಬರುವ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಬಳಸಿಕೊಳ್ಳುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಚಿತ್ರದ ಮುಖ್ಯ ಪ್ರಚಾರಕರು ಎಂದು ಲೇಬಲ್ ಮಾಡಿ ರಾವುತ್ ಬರೆದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ರಾವುತ್ ಅವರು, ಪಕ್ಷದ ಸಂಸದರು ಮತ್ತು ಜಿಲ್ಲಾಧ್ಯಕ್ಷರೊಂದಿಗಿನ ಸಭೆಯಲ್ಲಿ ಉದ್ಧವ್ ಠಾಕ್ರೆ ಅವರು ಶಿವಸೇನೆ ಎಐಎಂಐಎಂ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಎಐಎಂಐಎಂ ಬಿಜೆಪಿಯ ‘ಬಿ ಟೀಮ್’ ಎಂದು ಅವರು ಹೇಳಿದ್ದಾರೆ ಎಂದು ಸಂಜಯ್ ರಾವತ್ ಹೇಳಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.