ಮತ್ತೆ ಭುಗಿಲೆದ್ದ ಟಿಪ್ಪು- ಸಿದ್ದು ವಿವಾದ; ಕಾಂಗ್ರೆಸ್ ಕಿಡಿ
Team Udayavani, Jan 9, 2023, 11:38 AM IST
ಬೆಂಗಳೂರು : ಬೆಂಗಳೂರಿನ ಟೌನ್ ಹಾಲ್ ನಲ್ಲಿ ಇಂದು ಬಿಡುಗಡೆಯಾಗಲಿರುವ ” ಸಿದ್ದು ನಿಜಕನಸುಗಳು” ಪುಸ್ತಕ ಭಾರಿ ವಿವಾದಕ್ಕೆ ಕಾರಣವಾಗಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಟಿಪ್ಪು ನಿಜ ಕನಸು ಮಾದರಿಯಲ್ಲಿ ಸಿದ್ದು ನಿಜಕನಸು ಪುಸ್ತಕ ಬರೆಯಲಾಗಿದ್ದು, ಮಧ್ಯಾಹ್ನ 3 ಗಂಟೆಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ರೋಹಿತ್ ಚಕ್ರತೀರ್ಥ ಬಿಡುಗಡೆ ಮಾಡಲಿದ್ದಾರೆ.
ಸಿದ್ದರಾಮಯ್ಯ ಆಡಳಿತದಲ್ಲಿ ನಡೆದ ಅಲ್ಪಸಂಖ್ಯಾತರ ಓಲೈಕೆ, ಪಿಎಫ್ ಐ ವಿರುದ್ಧ ಪ್ರಕರಣ ವಾಪಾಸ್ ಸೇರಿದಂತೆ ಹಲವಾರು ವಿಚಾರಗಳನ್ನು ಈ ಪುಸ್ತಕದಲ್ಲಿ ನಮೂದಿಸಲಾಗಿದ್ದು, ಅಂದಿನ ಟಿಪ್ಪುವೇ ಇಂದಿನ ಸಿದ್ದು ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ: ಇಂಡಿಗೋ ವಿಮಾನದಲ್ಲಿ ಮದ್ಯ ಸೇವಿಸಿ ಸಿಬ್ಬಂದಿ ಜೊತೆ ಅಸಭ್ಯ ವರ್ತನೆ: ಇಬ್ಬರ ಬಂಧನ
ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸಿದ್ದರಾಮಯ್ಯ ತಮ್ಮ ಕಾಲದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳನ್ನು ಸಿದ್ದರಾಮಯ್ಯ ನಿಜ ಕನಸುಗಳು ಎಂಬ ಹೆಸರಿನಲ್ಲಿ ಬಿಡುಗಡೆ ಮಾಡಿದ್ದಾರೆ. ಚುನಾವಣೆ ಬಂದಾಗ ಬಿಜೆಪಿ ಇಂಥ ಕುಹಕ ಪ್ರಾರಂಭಿಸುತ್ತದೆ. ಜಗದೀಶ್ ಶೆಟ್ಟರ್, ಶೋಭಾ ಕರಂದ್ಲಾಜೆ ಅವರು ಟಿಪ್ಪು ವೇಷ ತೊಟ್ಟಿದ್ದು ಮರೆತು ಹೋಗಿದೆಯೇ ? ಎಂದು ಪ್ರಶ್ನಿಸಿದ್ದಾರೆ. ಸಾಲದಕ್ಕೆ ಟೌನ್ ಹಾಲ್ ಎದುರು ಮಧ್ಯಾಹ್ನ ಎರಡು ಗಂಟೆಗೆ ಪ್ರತಿಭಟನೆ ನಡೆಸುವುದಕ್ಕೆ ಕರೆ ನೀಡಲಾಗಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.