ಹಿಂದಿನ ಸರಕಾರದ ಯೋಜನೆ ನಿಲ್ಲಿಸಿದ BJP: ಬಯ್ನಾಪುರ
Team Udayavani, Apr 23, 2023, 6:58 AM IST
ಕುಷ್ಟಗಿ: ಬಿಜೆಪಿ ಸರಕಾರ ಹಿಂದಿನ ಸಿಎಂ ಸಿದ್ದರಾಮಯ್ಯ ಅವರ ಜನಪ್ರಿಯ ಯೋಜನೆಗಳಾದ ಅನ್ನ ಭಾಗ್ಯ ಹೊರತುಪಡಿಸಿ, ಕೃಷಿ ಭಾಗ್ಯ, ಕ್ಷೀರಭಾಗ್ಯ, ವಿದ್ಯಾಸಿರಿ ಮುಂತಾದ ಹಲವಾರು ಯೋಜನೆಗಳನ್ನು ತೆಗೆದು ಹಾಕಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಅಮರೇಗೌಡ ಪಾಟೀಲ ಬಯ್ನಾಪುರ ಹೇಳಿದರು.
ತಾಲೂಕಿನ ಹೊನಗಡ್ಡಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರಕಾರ ಅನ್ನಭಾಗ್ಯ ಯೋಜನೆ ಉಳಿಸಿ ಎಲ್ಲ ಯೋಜನೆಗಳನ್ನು ತೆಗೆದು ಹಾಕಿದ್ದಾರೆ. ಒಂದು ವೇಳೆ ಅನ್ನಭಾಗ್ಯ ಯೋಜನೆ ತೆಗೆದು ಹಾಕಿದರೆ ಬಿಜೆಪಿಯವರನ್ನು ಊರೊಳಗೆ ಬಿಟ್ಟುಕೊಳ್ಳುತ್ತಿರಲಿಲ್ಲ. ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷಿ ವಿದ್ಯಾಸಿರಿ ಯೋಜನೆಯಡಿ ವಸತಿ ನಿಲಯದಿಂದ ವಂಚಿತರಾಗುವ ಮಕ್ಕಳಿಗಾಗಿ ತಿಂಗಳಿಗೆ 1,500 ರೂ. ಯಂತೆ 10 ತಿಂಗಳಿಗೆ 15 ಸಾವಿರ ರೂ. ನೀಡಲಾಗುತ್ತಿತ್ತು. ಅದನ್ನು ರದ್ದುಗೊಳಿಸಿದ್ದಾರೆ. ಇದರಿಂದ ಶ್ರೀಮಂತರಿಗೆ ಅನ್ಯಾಯವಾಗಿದೆಯೇ ಎಂದು ಪ್ರಶ್ನಿಸಿದ ಅವರು, ಬಡ ರೈತ, ಕೂಲಿಕಾರರ ಮಕ್ಕಳಿಗೆ ಅನ್ಯಾಯವಾಗಿದೆ. ಶ್ರೀಮಂತರ ಮಕ್ಕಳು ವಸತಿ ನಿಲಯಕ್ಕೆ ಅರ್ಜಿ ಹಾಕುವುದಿಲ್ಲ. ಈ ಹಿನ್ನೆಲೆಯಲ್ಲಿ ಎಂತಹ ಆಡಳಿತ ಬೇಕೆನ್ನುವುದರ ಬಗ್ಗೆ ಆತ್ಮವಲೋಕನ ಮಾಡಿಕೊಳ್ಳಬೇಕಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.